Breaking News

ಜಿಲ್ಲೆ

ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಯನ್ನು ಅರಿತುಕೊಳ್ಳಲು ಸಮ ಗ್ರ ತನಿಖೆಯಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ. ದೇವೇಗೌಡರು ತಮ್ಮ ಅಭಿಪ್ರಾಯವನ್ನು ಪ್ರಕಟಣೆ ಮೂಲಕ ಹೊರಹಾಕಿದ್ದಾರೆ. ಲಡಾಖ್ ನಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಘಟನೆಯಿಂದ ದೇಶದ ಜನರು ದಿಗ್ಬ್ರಮೆ ಗೊಂಡಿದ್ದಾರೆ. ಅಲ್ಲಿನ ವಾಸ್ತವ ಸಂಗತಿ ಏನು ಎಂಬುವುದರ ಬಗ್ಗೆ ತಿಳಿಯಲು ಸಮಗ್ರ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೂ ಮಾಧ್ಯಮದವರಿಂದ …

Read More »

ನಿಮ್ಮ ಮನೆ ಮಹಡಿಗಳಿಂದಲೇ ನೋಡಿ ಸಂಭ್ರಮಿಸುವಂತೆ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕರೆ ನೀಡಿದೆ.

ಬೆಳಗಾವಿ: ನಾಳೆ ವಿಶ್ವವು 2020 ನೇ ವರ್ಷದ ಮೊದಲ ಸೂರ್ಯಗ್ರಹಣ( Solar Eclipse) ಸಾಕ್ಷಿಯಾಗಲಿದೆ. ಈ ಹಿನ್ನೆಲೆ ಮೌಢ್ಯಕ್ಕೆ ಮೊರೆ ಹೋಗದೆ, ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸುವ ಅದ್ಭುತ ದೃಶ್ಯವನ್ನು ನಿಮ್ಮ ಮನೆ ಮಹಡಿಗಳಿಂದಲೇ ನೋಡಿ ಸಂಭ್ರಮಿಸುವಂತೆ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕರೆ ನೀಡಿದೆ. ಅಂದು ಗ್ರಹಣವು ಉತ್ತುಂಗದಲ್ಲಿದ್ದಾಗ ಸೂರ್ಯನು ಹೊಳೆಯುವ ಕಂಕಣ ಅಥವಾ ಉಂಗುರದಂತೆ ಕಾಣುತ್ತಾನೆ. ಭಾಗಶಃ ಮತ್ತು ವಾರ್ಷಿಕ ಗ್ರಹಣಗಳಲ್ಲಿ ಸೂರ್ಯನ ಒಂದು ಭಾಗವನ್ನು ಮಾತ್ರ …

Read More »

ರಾಜ್ಯದಲ್ಲಿ ಕೊರೊನಾ ರೌದ್ರತೆ- ಸರ್ಕಾರಕ್ಕೆ ತಜ್ಞರ ‘ಸಪ್ತ’ ಪ್ರಶ್ನೆ…………

ಬೆಂಗಳೂರು: ಕೊರೊನಾ ಸೋಂಕಿತರು ಹೆಚ್ಚಾಗುವದರ ಜೊತೆಗೆ ಸಾವನ್ನಪ್ಪಿದವರ ಸಂಖ್ಯೆಯೂ ಶರವೇಗ ಪಡೆದುಕೊಳ್ಳುತ್ತಿದೆ. ಸರ್ಕಾರ ನಿರ್ಲಕ್ಷ್ಯ ಮತ್ತು ಗೊಂದಲದ ನಿರ್ಧಾರಗಳೇ ಈ ಸಂಖ್ಯೆ ಹೆಚ್ಚಳವಾಗಲು ಕಾರಣ ಎನ್ನಲಾಗುತ್ತಿದೆ. ಸರ್ಕಾರ ಮೊದಲಿನಿಂದಲೂ ತಜ್ಞರ ಸಲಹೆಗಳನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಶುಕ್ರವಾರದ ಬುಲೆಟಿನ್ ಬೆಂಗಳೂರಿಗರು ಬೆಚ್ಚಿ ಬೀಳುವಂತೆ ಮಾಡಿದೆ. ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ ನಿಗೂಢ ಕೇಸ್ 41 ಆಗಿದೆ. ಅಂದರೆ ಇವರಿಗೆ ಸೋಂಕಿನ ಮೂಲವೇ ಇಲ್ಲ. ಇದು …

Read More »

ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ.

ಬೆಂಗಳೂರು: ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ. ಕೊರೊನಾ ಜೀವನದ ಅಂಗ, ನಾವು ಕೊರೊನಾ ಜೊತೆಯಲ್ಲಿಯೇ ಬದುಕಬೇಕು ಎಂದು ಹೇಳುವ ಸರ್ಕಾರ, ಇದೇ ರೀತಿ ವರ್ತಿಸುತ್ತಿದೆ. ದಿನ ಕಳೆದಂತೆ ಮಹಾಮಾರಿ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಹಾರಾಷ್ಟ್ರದ ರೀತಿಯಾದರೆ ಏನು ಗತಿ ಎಂಬ ಆತಂಕ ಹುಟ್ಟಿಕೊಂಡಿದೆ. ಕ್ವಾರಂಟೈನ್ …

Read More »

ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು:ಯತ್ನಾಳ್,

ಬೆಂಗಳೂರು: ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕರು, ನಾನು ತಲೆ ಬಗ್ಗಿಸಿ ನಡೆಯುತ್ತಿದ್ದೇನೆ ಅಂದರೆ ಮುಂದೆ ಒಳ್ಳೆಯದು ಆಗುತ್ತೆ ಅಂತ ಅರ್ಥ. ಅನುದಾನ, ನಾಯಕತ್ವ, ಅಧಿಕಾರಿಗಳ ವರ್ಗದ ಬಗ್ಗೆ ಮಂತ್ರಿ ಆಗುವ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕ್ಯಾಬಿನೆಟ್‍ನಲ್ಲಿ ಮಂತ್ರಿ ಆಗುವುದಿಲ್ಲ. …

Read More »

ಬಿಎಂಟಿಸಿ ಸಿಬ್ಬಂದಿಗೆ ಕೊರೊನಾ ನಡುಕ- 9 ಜನರಿಗೆ ಹಬ್ಬಿದ ಸೋಂಕು……………..

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗೆ ಕೊರೊನಾ ಆತಂಕ ಎದುರಾಗಿದ್ದು, ಭಯ ಪಟ್ಟುಕೊಂಡೇ ಬಸ್ ಹತ್ತುವ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬಿಎಂಟಿಸಿಯ 9 ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದು ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಲ್ಲಿ ಆತಂಕವನ್ನುಂಟು ಮಾಡಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಬಿಎಂಟಿಸಿ ಆರಂಭದಲ್ಲಿ ಪಾಸ್ ಖರೀದಿಸಿ ಪ್ರಯಾಣಿಸಲು ಮಾತ್ರ ಅನುಮತಿ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಫ್ಲಾಟ್ ದರ ನಿಗದಿಪಡಿಸಿ, ಟಿಕೆಟ್ ವಿತರಿಸಲು ಮುಂದಾಗಿದೆ. ಜೊತೆಗೆ …

Read More »

ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ

ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಯುವರಾಜ ಕದಂ, ಉಪಾಧ್ಯಕ್ಷ ಮಹಾದೇವಿ ಖಾನಗೌಡರ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷರ ಕಚೇರಿಯಲ್ಲಿ ಶುಕ್ರವಾರ ಸನ್ಮಾನಿಸಿದ ಅವರು, ಎಪಿಎಂಸಿ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ ಎಂದರು. ಈ …

Read More »

ಅಜೀತ ಮನ್ನಿಕೇರಿಯವರ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮೂಡಲಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಿದರು.

ಮೂಡಲಗಿ: ನೂತನವಾಗಿ ರಚಿಸಲ್ಪಟ್ಟಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನೀತಿ ನಿಯಮಾವಳಿಗಳಲ್ಲಿ ಸಾಕಷ್ಟು ಬದಲಾವಣೆಯಾಗುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿಯವರ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮೂಡಲಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಿದರು. ಶುಕ್ರವಾರದಂದು ಪಟ್ಟಣದ ಬಿಇಒ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಿಇಒ ಅವರಿಗೆ ವರ್ಗಾವಣೆ ನಿಯಮಗಳ ಬದಲಾವಣೆ ಕುರಿತು ಮನವಿ ಸಲ್ಲಿಸಿದರು. ಹೊಸ ವರ್ಗಾವಣೆ ಮಾರ್ಗಸೂಚಿಯಿಂದ …

Read More »

ತಹಸೀಲ್ದಾರ್ ಸಿದ್ದರಾಯ ಬೊಸಗಿ ಮತ್ತೆ 14 ಕ್ವಾರಂಟೈನ್ ಗೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಜೇವರ್ಗಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ತಹಸೀಲ್ದಾರ್ ಸಿದ್ದರಾಯ ಬೊಸಗಿ ಮತ್ತೆ 14 ಕ್ವಾರಂಟೈನ್ ಗೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ. ತಾಲೂಕಿನ ಗ್ರಾಮವೊಂದರಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಓಡಾಡುತ್ತಿರುವ ಇಬ್ಬರು ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಮತ್ತೆ 14 ದಿನಗಳ ಕಾಲ ಇಡಲು ಕ್ವಾರಂಟೈನ್ ನಲ್ಲಿ ಆದೇಶಿಸಿದ್ದಾರೆ. ಅಲ್ಲದೇ ಇಬ್ಬರ ವಿರುದ್ದ ದೂರು ಸಹ ದಾಖಲಿಸಲಿದ್ದಾರೆ. ಇನ್ನು ಮುಂದೆ ಯಾರಾದರೂ ನಿಯಮವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಖಡಕ್ಕಾಗಿ …

Read More »

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆ………..

ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …

Read More »