Breaking News

ಜಿಲ್ಲೆ

ಹೆಚ್. ವಿಶ್ವನಾಥ್ ಗೆ ಬುದ್ಧಿ ಇಲ್ಲ ಎಂದ ಸಿದ್ದರಾಮಯ್ಯ…………..

ಬೆಂಗಳೂರು (ಜೂ. 18): ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ವಿಧಾನ ಪರಿಷತ್​ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದೆ. ಬಿಜೆಪಿಯಿಂದ ಎಂಎಲ್​ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ‘ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?’ ಎಂದು ವ್ಯಂಗ್ಯವಾಡಿದ್ದಾರೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿರುವ …

Read More »

ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಸಿದ , ಅಭ್ಯರ್ಥಿಗಳು………

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್​​ ಹಾಗೂ ಕಾಂಗ್ರೆಸ್​​ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್​ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ …

Read More »

ವಿಶ್ವನಾಥ್ ತಾಳ್ಮೆಯಿಂದ ಇದ್ದರೆ ಮುಂದೆ ಒಳ್ಳೆಯ ಭವಿಷ್ಯವಿದೆ: ನಾಗೇಶ್

ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …

Read More »

‘ಚೀನಾ ಭಾರತವನ್ನು ನಾಶ ಮಾಡಲಿ’ – ಗದಗ್ ಯುವಕನ ಪೋಸ್ಟ್

ಗದಗ: ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು …

Read More »

ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ

ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …

Read More »

ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…

; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …

Read More »

Complete unlock – ರಾಜ್ಯದಲ್ಲಿ ಚಿತ್ರಮಂದಿರ, ಜಿಮ್, ಮೆಟ್ರೋ, ಈಜು ಇತ್ಯಾದಿ ಕ್ಷೇತ್ರಗಳಿಗೂ ಸಡಿಲಿಕೆ ಸಾಧ್ಯತೆ

ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ  ಕೊರೋನಾ ಲಾಕ್ ಡೌನ್​ನಿಂದ ಅನ್ ಲಾಕ್​ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …

Read More »

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.   ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …

Read More »

ಖಾಲಿ ಕಪ್‍ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್

ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್‍ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್‍ವುಡ್‍ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …

Read More »

ಮಲೆನಾಡಲ್ಲಿ ಮುಗಿಯದ ಕಾಡಾನೆ ಕಾಟ………

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ಹಾಗೂ ಹಾವಳಿ ಹತೋಟಿಗೆ ಬರುವ ಲಕ್ಷಣಗಳೇ ಇಲ್ಲದಂತಾಗಿದೆ. ಆಗಾಗ್ಗೆ ಹೊಲಗದ್ದೆ-ತೋಟಗಳಿಗೆ ಲಗ್ಗೆ ಇಡುವ ಕಾಡಾನೆಗಳು ಈಗೀಗ ಮಲೆನಾಡಿಗರಿಗೆ ರಸ್ತೆ ಮಧ್ಯೆ ಸ್ನೇಹಿತರು, ನೆಂಟರಂತೆ ಸಿಗುತ್ತಿದ್ದು, ಮಲೆನಾಡಿಗರು ಭಯಭೀತರಾಗಿದ್ದಾರೆ. ಮೂಡಿಗೆರೆ ತಾಲೂಕಿನ ಪ್ರವಾಸಿತಾಣ ದೇವರ ಮನೆ ಬಳಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಕಾರಲ್ಲಿ ಸಂಚರಿಸುತ್ತಿದ್ದವರ ಆತಂಕಕ್ಕೆ ಕಾರಣವಾಗಿದೆ. ಒಂಟಿ ಸಲಗದ ಭಯದ ಮಧ್ಯೆಯೂ ಸವಾರರು ಕಾಡಾನೆ ಫೋಟೋವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರಮೋದ್ …

Read More »