Breaking News

ಜಿಲ್ಲೆ

ಮತ್ತೇ ಲಾಕ್ ಡೌನ್ ಆಗತ್ತಾ?..ಬಿಎಸ್ ವಾಯ ಹೇಳಿದ್ದೇನು..

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು

Read More »

ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯ

ಬೆಂಗಳೂರು: ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಇಂದು ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್ ಅವರ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿತ್ತು. ಮೂರು ದಿನಗಳ ಹಿಂದೆಯಷ್ಟೇ ಎಸ್‍ಎಂಕೆ ನಿವಾಸಕ್ಕೆ ಡಿಕೆಶಿ ಕುಟುಂಬ ಹೋಗಿದ್ದರು. ಇಂದು ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು …

Read More »

ಜೆಡಿಎಸ್ ಪರಿಷತ್‍ ಅಭ್ಯರ್ಥಿ ಆಯ್ಕೆ ಕುರಿತು ಗೌಡರ ನಿರ್ಧಾರವೇ ಫೈನಲ್

ಬೆಂಗಳೂರು, ಜೂ.15- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ವರಿಷ್ಠರಿಗೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲಿ ಹಲವು ಆಕಾಂಕ್ಷಿಗಳಿದ್ದು, ಒಂದು ಸ್ಥಾನ …

Read More »

ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ…………

ಬೆಂಗಳೂರು, ಜೂ.15-ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ. 198 ವಾರ್ಡ್‍ಗಳಲ್ಲಿ ಈಗಾಗಲೇ 122 ವಾರ್ಡ್‍ಗಳಿಗೆ ಮಹಾಮಾರಿ ಕಾಲಿಟ್ಟಿದ್ದು, 142 ಕಂಟೇನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ನಿನ್ನೆಯಿಂದೀಚೆಗೆ 32 ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಗರದ ಪ್ರತಿಯೊಂದು ರಸ್ತೆಗೂ ಬೀಳುತ್ತಿವೆ ಸೀಲ್‍ಡೌನ್ ಬ್ಯಾರಿಕೇಡ್‍ಗಳು. ನಗರದ ಎಂಟು ವಲಯಗಳಿಗೂ ಮಹಾಮಾರಿ ಹಬ್ಬುತ್ತಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕು ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ …

Read More »

ಅಶೋಕ ಚಂದರಗಿ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಒತ್ತಾಯ…………

ಬೆಳಗಾವಿ: ಬೆಳಗಾವಿಯ ಕನ್ನಡಪರ ಹೋರಾಟಗಾರರು, ಹಿರಿಯ ಪತ್ರಕರ್ತರು, ಸಾಮಾಜಿಕ ಚಿಂತಕರಾದ ಅಶೋಕ ಚಂದರಗಿ ಅವರನ್ನು ಸರಕಾರದಿಂದ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನಂದಾರ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯ ಜಿಪಂ ಸಭಾಂಗಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಮೆಹಬೂಬ್ ಮಕಾನಂದಾರ ಅಶೋಕ ಚಂದರಗಿ ಅವರು, ಹಲವಾರು ದಶಕಗಳಿಂದ ಕನ್ನಡ ಪರ ಹೋರಾಟ ಮಾಡುತ್ತ ಬಂದಿದ್ದಾರೆ. ಹಿರಿಯ …

Read More »

ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ  ಮಧ್ಯೆ ಮತ್ತೆ ಕದನ…?…

ಬೆಳಗಾವಿ:  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ  ಮಧ್ಯೆ ಮತ್ತೆ ಕದನ ಆರಂಭವಾಯಿತೋ ಎನ್ನಲಾಗುತ್ತಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಬಳಿಕ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಸಿದ್ದಾರೆ. ಸಭೆಯಲ್ಲಿ ನೀರು ಶುದ್ಧೀಕರಣ ಘಟಕದ ಬಗ್ಗೆ ಚರ್ಚೆ ನಡೆಯುವಾಗ ಸಚಿವ ಸುರೇಶ ಅಂಗಡಿಮಧ್ಯಪ್ರವೇಶಿಸಿ, ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರದ ಕಾರ್ಯಕ್ರಮ, ಫೋಟೊ ಹಾಕಿಕೊಂಡ ಕಾರ್ಯಕ್ರಮ ಎಂದರು. ಇದಕ್ಕೆ …

Read More »

ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …

Read More »

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ

ಬೆಂಗಳೂರು: ಲಾಕ್‍ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಲಾಕ್‍ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯ ಮುಖ್ಯಾಂಶಗಳು 1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ …

Read More »

ರಮೇಶ್ ಜಾರಕಿಹೊಳಿ ಅವರು ಹಾಗೂ ಸುರೇಶ್ ಅಂಗಡಿ ಅವರಿಂದ ಬಳ್ಳಾರಿ ನಾಲಾ ವೀಕ್ಷಣೆ..

ಬೆಳಗಾವಿ ನಗರದಲ್ಲಿರುವ “ಬಳ್ಳಾರಿ ನಾಲೆ”ಯು ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ ಅಕ್ಕ ಪಕ್ಕದ ಸಾರ್ವಜನಿಕರ ಮನೆಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ನಾಲೆಗೆ ವ್ಯವಸ್ಥಿತವಾದ ಒಡ್ಡು ನಿರ್ಮಾಣ ಮಾಡಿ ನಗರದ ಹೊರವಲಯಕ್ಕೆ ಹರಿಯುವಂತೆ ಮಾಡಬೇಕಾಗಿರುವುದರಿಂದ, ಇಂದು ನಗರಾಭಿವೃದ್ಧಿ ಅಧಿಕಾರಿಗಳೊಂದಿಗೆ ಕೊನ್ವಾಳ್ ಗಲ್ಲಿ, ಓಲ್ಡ್ ಪಿಬಿ ರೋಡ್, ಅಲರವಾಡ್ ಬ್ರಿಡ್ಜ್ ಹಾಗೂ ನಗರದ ಮುಂತಾದ ಕಡೆಗಳಲ್ಲಿ ನಾಲೆ ಹರಿಯುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಲಾಯಿತು. ಮಳೆಗಾಲಕ್ಕೆ ಮುಂಚಿತವಾಗಿ ಒಡ್ಡು ನಿರ್ಮಾಣ ಕಾರ್ಯ …

Read More »

ಪಿರನ್ವಾಡಿ, ಮಚ್ಚೆ ಪ್ರದೇಶ್ ಗಳನ್ನೂ ಮೇಲ್ದರ್ಜೆಗೆ ಏರಿಸಿ..

ಬೆಳಗಾವಿಯ ಪೀರನವಾಡಿ ಮತ್ತು ಮಚ್ಛೆ ಗ್ರಾಮ ಪಂಚಾಯತಿಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ವಿಧಾನಪರಿಷತ್‍ನ ಸರ್ಕಾರದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ತಾಲೂಕಿನ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಪೀರನವಾಡಿ ಮತ್ತು ಮಚ್ಛೆ …

Read More »