ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ …
Read More »ಗೋವಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ತಗ್ಗು ಪ್ರದೇಶಗಳು ಜಲಾವೃತ..!
ಪಣಜಿ, ಜೂ.3-ಅರಬ್ಬೀ ಸಮುದ್ರದಲ್ಲಿ ನಿಸರ್ಗ ಚಂಡಮಾರುತದ ಆರ್ಭಟದಿಂದ ವಾಯುಭಾರ ಕುಸಿತವಾಗಿದ್ದು, ಗೋವಾದಲ್ಲಿ ಇಂದು ಮುಂಜಾನೆಯಿಂದಲೇ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಹಸ್ರಾರು ಮಂದಿ ಸಂತ್ರಸ್ತರಾಗಿದ್ದಾರೆ. ಗೋವಾ ಕರಾವಳಿ ಪ್ರದೇಶದ ಸಮುದ್ರ ಭಾಗವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಸಾಗರಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಪಷ್ಟ ಸೂಚನೆ ನೀಡಿದೆ.ಪ್ರಬಲ ಗಾಳಿಯಿಂದ ಕೂಡಿದ ಧಾರಾಕಾರ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ತೀವ್ರ ತೊಂದರೆಗೆ …
Read More »ಜೂ.8ರಿಂದ ಬಿಬಿಎಂಪಿ ವ್ಯಾಪ್ತಿಯ ಮಳಿಗೆಗಳು ಓಪನ್………….
ಬೆಂಗಳೂರು, ಜೂ.2- ನಗರದಲ್ಲಿ ಮಾರುಕಟ್ಟೆಗಳನ್ನು ತೆರೆಯಲು ಬಿಬಿಎಂಪಿಯು ಜೂ.8ರಿಂದ ಅನುಮತಿ ನೀಡಿದೆ. ಆದರೆ ಯಾವುದೇ ಕಾರಣಕ್ಕೂ ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇಯರ್ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರುಕಟ್ಟೆ ಪ್ರಾರಂಭಿಸುವ ಕುರಿತು ಇಂದು ಮಾರುಕಟ್ಟೆ ಅಸೋಸಿಯೇಷನ್ ಪದಾಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾತನಾಡಿದ ಮೇಯರ್, ಈ ವಿಷಯ ಸ್ಪಷ್ಟಪಡಿಸಿದರು. ಕೆ.ಆರ್.ಮಾರುಕಟ್ಟೆಯಲ್ಲಿರುವ 2,000ಕ್ಕೂ ಹೆಚ್ಚು ಮಳಿಗೆಗಳು, ಫ್ರೇಜರ್ ಟೌನ್‍ನಲ್ಲಿರುವ 400 ಮಳಿಗೆಗಳನ್ನು ತೆರೆಯಲು ಅನುಮತಿ …
Read More »15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು_ ತಾಯಿ ಸೇರಿ ಐವರು ಅರೆಸ್ಟ್
ಕೊಪ್ಪಳ: 15 ವರ್ಷಗಳ ಹಿಂದೆ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿಸಿ ಮುಚ್ಚಿ ಹಾಕಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕರ್‍ಸಿಂಗ್ ಮೃತ ವ್ಯಕ್ತಿ. ಬಂಧಿತ ಆರೋಪಿಗಳನ್ನು ಗಂಗಾವತಿಯ ವಿರುಪಾಪೂರ ನಗರದ ಮೃತನ ಪತ್ನಿ ಲಕ್ಷ್ಮೀಸಿಂಗ್, ರಾಂಪೂರ ಪೇಟೆಯ ಅಮ್ಜದ್‍ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕೀರಬಾಷಾ ಹಾಗೂ ಈಳಿಗನೂರ ಗ್ರಾಮದ ಶಿವನಗೌಡ …
Read More »ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್
ಬೆಂಗಳೂರು: ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಮುನಿಕೃಷ್ಣ ಗುಂಡೇಟು ತಿಂದ ಆರೋಪಿ. ಅಮೃತಹಳ್ಳಿ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಅವರು ಫೈರಿಂಗ್ ನಡೆಸಿ ಮುನಿಕೃಷ್ಣನನ್ನು ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ತೆರುವು ನಂತರ ಎಣ್ಣೆ ಅಂಗಡಿಗಳು ಓಪನ್ ಆಗಿದ್ದವು. ಈ ವೇಳೆ ಮದ್ಯದ ಕೊಡಲಿಲ್ಲ ಅಂತ ಮುನಿಕೃಷ್ಣ ಗೆಳೆಯನ ಜೊತೆ ಗಲಾಟೆ ಮಾಡಿಕೊಂಡಿದ್ದ. ಬಳಿಕ ಜಾಕು ಇರಿದು ಪರಾರಿಯಾಗಿದ್ದ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ …
Read More »ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ
ಬೆಂಗಳೂರು: ಲಾಕ್‍ಡೌನ್ ಸಡಿಲಿಕೆ ನಿಜಕ್ಕೂ ಬೆಂಗಳೂರಿಗೆ ಮಾರಕವಾಗ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದೆ. ಕಳೆದ ವಾರ 20-22 ರಷ್ಟಿದ್ದ ಸಂಖ್ಯೆ 39ಕ್ಕೆ ಏರಿಕೆ ಕಂಡಿದೆ. ಮಂಗಳವಾರ ಬಿಬಿಎಂಪಿ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ 39 ಕಂಟೈನ್‍ಮೆಂಟ್ ಝೋನ್ ಗಳನ್ನು ಗುರುತಿಸಿದ್ದಾರೆ. ಗ್ರೀನ್ ಝೋನ್ ಏರಿಯಾಗಳಾದ ನಾಗರಬಾವಿಯ ಸೆಕೆಂಡ್ ಸ್ಟೇಜ್, ನಗರ್ ದ ಪೇಟೆ, ದಾಸಸರಹಳ್ಳಿಯ ಚಿಕ್ಕಲಸಂದ್ರ, …
Read More »ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾಜ್ಯಕ್ಕೆ
ಮಡಿಕೇರಿ: ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇನ್ನು ಮುಂಗಾರು ಚುರುಕುಗೊಳ್ಳಲಿದೆ. ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎನ್‍ಡಿಆರ್‍ಎಫ್ ತಂಡ ಮಂಗಳವಾರ ಕೊಡಗು ಜಿಲ್ಲೆಗೆ ಆಗಮಿಸಿದೆ. ಆಂಧ್ರ ಪ್ರದೇಶದ ಗುಂಟೂರಿನಿಂದ ತಂಡ ಆಗಮಿಸಿದ್ದು, 23 ಸಿಬ್ಬಂದಿಯನ್ನೊಳಗೊಂಡ ಬೆಟಾನಿಯನ್ ಮಡಿಕೇರಿಯ ಮೈತ್ರಿ ಹಾಲ್‍ನಲ್ಲಿ ವಾಸ್ತವ್ಯ ಹೂಡಿದೆ. ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ ಹಿನ್ನೆಲೆ ಈ …
Read More »ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ………….
ಬೆಂಗಳೂರು: ನಿಸರ್ಗ ಚಂಡಮಾರುತದ ಎಫೆಕ್ಟ್ ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲೆಯಲ್ಲಿ ಇಂದು ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮಂಗಳೂರಿಗೆ ಆಗಮಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದ ಎಫೆಕ್ಟ್ ರಾಜ್ಯದ ಕರಾವಳಿಗೂ ತಟ್ಟಿದೆ. ಸಮುದ್ರದಲ್ಲಿ ಗಂಟೆಗೆ 70ರಿಂದ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ …
Read More »ಸೀಲ್‍ಡೌನ್ ಮಾಡಿದ್ರೂ ಕಳ್ಳದಾರಿಯಲ್ಲಿ ಓಡಾಟ- ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಹಲ್ಲೆ
ಶಿವಮೊಗ್ಗ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ತಾಲೂಕಿನ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪನ್ನು ಜಿಲ್ಲಾಡಳಿತ ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಸೀಲ್‍ಡೌನ್ ಮಾಡಿದೆ. ಕಳೆದ 4 ದಿನಗಳ ಹಿಂದೆ ಪಂಜಾಬ್ ನಿಂದ ಆಗಮಿಸಿದ್ದ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್ ನ ಮೂವರಿಗೆ ಕೊರೊನಾ ಪಾಸಿಟಿವ್ ಕಾಣಿಸಿತ್ತು. ಹಾಗಾಗಿ ಆ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿತ್ತು. ಹೀಗಾಗಿ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಮನವಿ ಸಹ ಮಾಡಿದೆ. ಹೀಗಿದ್ದರೂ ಜಿಲ್ಲಾಡಳಿತ ಮನವಿ …
Read More »ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ.
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸಂಚಾರ ಬಂದ್ ಆಗಿತ್ತು. ಈಗ ಮತ್ತೆ ಬಸ್ ಸಂಚಾರ ಶುರು ಆಗಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ. ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳವಾರ ರಾತ್ರಿ ಸುಮಾರು 10:30ರ ಸುಮಾರಿಗೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರ ಸಮೇತ ಬಂದಿತ್ತು. ಪ್ರಯಾಣಿಕರನ್ನ ಕೆಳಗಿಳಿಸಿ ಬಸ್ಸನ್ನು ಸ್ಯಾನಿಟೈಸರ್ ಮಾಡುವ ವೇಳೆ ಬಸ್ಸಿನ ಮೀಟರ್ ಬೋರ್ಡ್ ಬಳಿ ಹೆಬ್ಬಾವಿನ ಮರಿ ಕಾಣಿಸಿಕೊಂಡಿದೆ. …
Read More »
Laxmi News 24×7