ಕೊರೋನಾದಿಂದಾಗಿ ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಹಲವಾರು ಉದ್ಯೋಗಸ್ಥರಲ್ಲಿ ವೃತ್ತಿನಿರತ ಛಾಯಾಗ್ರಾಹಕರೂ ಸೇರಿದ್ದಾರೆ.ಆದರೆ ವಿಶ್ವವೇ ಎದುರಿಸುತ್ತಿರುವ ಪ್ರಸಕ್ತ ಬಿಕ್ಕಟ್ಟಿನ ಸಂದರ್ಭದಲ್ಲಿ ಛಾಯಾಗ್ರಾಹಕರು ಧೃತಿಗೆಡಬಾರದು ಎಂದು ಖ್ಯಾತ ಛಾಯಾಗ್ರಾಹಕ ಶ್ರೀ ಎಮ್.ಬಿ.ಗೌಡ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನದ ಅಂಗವಾಗಿ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಮುಂಜಾನೆ 30 ವೃತ್ತಿನಿರತ ಛಾಯಾಗ್ರಾಹಕರಿಗೆ ಆಹಾರಧಾನ್ಯದ ಕಿಟ್ ಗಳನ್ನು ವಿತರಿಸಿ ಅವರು …
Read More »ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….
ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ …. ಗುಣಮುಖರಾದವರ ಸಂಖ್ಯೆ 62ಕ್ಕೆ ಏರಿಕೆ … ಢಾಣಕಶಿರೂರ ಗ್ರಾಮದ 19 ವರ್ಷದ ಯುವತಿ ಪಿ-704, ಜಮಖಂಡಿಯ 17 ವರ್ಷದ ಓರ್ವ ಬಾಲಕ ಪಿ-894, 22 ವರ್ಷದ ಯುವಕ ಪಿ-893, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸರಿತ್ತಿ ಗ್ರಾಮದ 32 ವರ್ಷದ ಪಿ-892 ಗುಣಮುಖರಾದವರು ಮುಧೋಳ ನ ಓರ್ವ ಸಾರಿ ಕೇಸ್ ಸೇರಿದಂತೆ 13 ಜನರಿಗೆ ತಬ್ಲಿಘಿ ಜಮಾತ ನಂಟಿನಿಂದ …
Read More »ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಮೇ 26) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಜನರ ತುರ್ತು ರಕ್ಷಣೆಗೆ …
Read More »ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ(ಮೇ 26) ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಕ್ವಾರಂಟೈನ್ ಇದ್ದವರಲ್ಲಿ ಹದಿಮೂರು ಜನರಿಗೆ ಕೊರೊನಾ ತಗುಲಿದೆ. ತಾಲೂಕಿನ ಸವದಿ ಗ್ರಾಮದಲ್ಲಿ ಕ್ವಾರಂಟೈನ್ ಆಗಿದ್ದವರಲ್ಲಿ ಕೊರೋನಾ ಕಾಣಿಸಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ ತಾಲೂಕಿನ ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ …
Read More »ಮುಂಬೈನ ಧಾರಾವಿ ಸ್ಲಂ ಸ್ಥಿತಿ ಬೆಂಗ್ಳೂರಿಗೂ ಬರುತ್ತಾ?…………
ಬೆಂಗಳೂರ: ಮುಂಬೈ ಮಹಾನಗರಕ್ಕೆ ಭಾರೀ ಸಂಕಷ್ಟ ತಂದಿದ್ದು ಧಾರಾವಿ ಸ್ಲಂ ಪ್ರದೇಶ. ಅದೇ ಸಮಸ್ಯೆ ಬೆಂಗಳೂರಿಗೂ ಎದುರಾಗುತ್ತಾ ಎನ್ನುವ ಅನುಮಾನ ಶುರುವಾಗಿದೆ. ಪುಲಿಕೇಶಿ ನಗರ ಕ್ಷೇತ್ರದ ಎಸ್.ಕೆ. ಗಾರ್ಡನ್ ಸ್ಲಂ ಪ್ರದೇಶದ 38 ವರ್ಷದ ಮಹಿಳೆಗೆ ಕೊರೊನಾ ತಗುಲಿದೆ. ಅವರನ್ನು ರೋಗಿ-2180 ಎಂದು ಗುರುತಿಸಲಾಗಿದೆ. ಅವರು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದಾಗಿ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ಪಾಸಿಟಿವ್ ಬಂದಿದೆ. ಮಹಿಳೆ ಪ್ರಾಥಮಿಕ ಸಂಪರ್ಕಿದಲ್ಲಿ 35 …
Read More »ವಿಜಯಪುರದಲ್ಲಿ ಗರಿಷ್ಠ 45.3 ಡಿಗ್ರಿ ಉಷ್ಣಾಂಶ ದಾಖಲು………
ವಿಜಯಪುರ: ಗುಮ್ಮಟಗಳ ಜಿಲ್ಲೆ ವಿಜಯಪುರ ಜನರಲ್ಲಿ ಒಂದು ಕಡೆ ಕೊರೊನಾ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ಭಯಾನಕ ಬಿಸಿಲಿನಿಂದ ಆತಂಕ ಶುರುವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ವಿಜಯಪುರ ಜಿ. ಆಲಮೇಲ ಪಟ್ಟಣದಲ್ಲಿ ದಾಖಲಾಗಿದೆ. ಗರಿಷ್ಠ 45.3 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ …
Read More »ಇಂದಿನಿಂದ ಟಿಕೆಟ್ ಪಡೆದು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣ- 4 ಸಾವಿರ ಬಸ್‍ಗಳ ಓಡಾಟ
ಬೆಂಗಳೂರು: ಬಿಎಂಟಿಸಿ ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದು, ಬಿಎಂಟಿಸಿ ಇಂದಿನಿಂದ ಪ್ರಯಾಣಿಕರಿಗೆ ಟಿಕೆಟ್ ನೀಡಲು ಶುರು ಮಾಡಿದೆ. ಹೀಗಾಗಿ ಇವತ್ತಿನಿಂದ ಪ್ರಯಾಣಿಕರು ಬಿಎಂಟಿಸಿಯಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಈಗಾಗಲೇ ಬಿಎಂಟಿಸಿ ಬಸ್‍ಗಳ ಓಡಾಟ ಶುರುವಾಗಿದ್ದು, ಪಾಸ್ ಇದ್ದವರಿಗಷ್ಟೇ ಅಲ್ಲ, ಟಿಕೆಟ್ ಪಡೆದೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೇ ಇವತ್ತಿನಿಂದ ಹೆಚ್ಚುವರಿಯಾಗಿ 4 ಸಾವಿರ ಬಿಎಂಟಿಸಿ ಬಸ್‍ಗಳ ಸಂಚಾರ ಆರಂಭ ಮಾಡುತ್ತಿವೆ. ಲಾಕ್‍ಡೌನ್ ಬಳಿಕ ಪ್ರಯಾಣಿಕರಿಗೆ …
Read More »ಜುಲೈನಿಂದ ದೇಶಾದ್ಯಂತ ಶಾಲೆಗಳು ಆರಂಭವಾಗೋ ಸಾಧ್ಯತೆ………….
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತ ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಜುಲೈನಿಂದ ದೇಶಾದ್ಯಂತ ಆರಂಭವಾಗುವ ಸಾಧ್ಯತೆ ಇದೆ. ಶೇಕಡಾ 30ರಷ್ಟು ಹಾಜರಾತಿಯೊಂದಿಗೆ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ಮಾಡಿದೆ. ಜೊತೆಗೆ ಗ್ರೀನ್, ಆರೆಂಜ್‍ಝೋನ್‍ಗಳಲ್ಲಿರುವ ಶಾಲೆಗಳ ಆರಂಭ ಮಾಡುವ ಸಾಧ್ಯತೆ ಇದೆ. ಆರಂಭದಲ್ಲಿ ಹೈಸ್ಕೂಲ್ ತರಗತಿಗಳಷ್ಟೇ ಶುರುವಾಗಲಿದ್ದು, ಉಳಿದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣ ಮುಂದುವರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ …
Read More »ಬೆಳಗಾವಿ ಜಿಲ್ಲಾಡಳಿತ ಒಟ್ಟು 1009 ಜನರ ರಿಪೋರ್ಟ್ ಗಾಗಿ ಕಾಯುತ್ತಿದೆ.
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಬೆಂಬಿಡದೇ ಗಡಿನಾಡು ಬೆಳಗಾವಿ ಜಿಲ್ಲೆಯನ್ನು ನಡುಗಿಸಿದೆ,ಈವರೆಗೆ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ 130 ಸೊಂಕಿತರು ಪತ್ತೆಯಾಗಿದ್ದಾರೆ ಜೆಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಇಂದು ಬರೊಬ್ಬರಿ 1009 ಜನರ ರಿಪೋರ್ಟ್ ಬಾಕಿ ಇದೆ . ಬೆಳಗಾವಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಈ ವರೆಗೆ ಹತ್ತು ಸಾವಿರದ 293 ಜನರ ಮೇಲೆ ನಿಗಾ ಇಟ್ಟಿದೆ. ಇದರಲ್ಲಿ ಹಲವಾರು ಜನ …
Read More »ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆತಂಕಕಾರಿ ಸಂಗತಿ ಅಂದರೆ ಬೆಂಗಳೂರಿನಲ್ಲಿ ಹೊಸ ಹೊಸ ಏರಿಯಾಗಳಿಗೆ ಸೋಂಕು ಹಬ್ಬಲು ಶುರುವಾಗಿದೆ. ಈ ಮೂಲಕ ಗ್ರೀನ್‍ಝೋನ್, ಸೇಫ್ ಏರಿಯಾಗಳೆಂದು ಅನ್ನಿಸಿಕೊಂಡಿರುವ ಏರಿಯಾಗಳು ಕೊರೊನಾ ಅಡ್ಡಾಗಳಾಗಿ ಬದಲಾಗ್ತಾವಾ ಅನ್ನೋ ಆತಂಕ ಎದುರಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಒಂದು ಎರಡು ದಾಖಲಾಗುತ್ತಿದ್ದವು. ಆದರೆ ಸೋಮವಾರ ಬರೋಬ್ಬರಿ 8 ಪ್ರಕರಣಗಳು ದಾಖಲಾಗಿವೆ. ಅಂತರಾಜ್ಯ ಪ್ರಯಾಣ ಮಾಡಿದವರಲ್ಲಿ, ಅಂತರರಾಷ್ಟ್ರೀಯ …
Read More »
Laxmi News 24×7