Breaking News

ಜಿಲ್ಲೆ

ಆಪರೇಟಿವ್ ಸೊಸೈಟಿಯೊಂದರ ಮೇಲೆ ಇಡಿ ದಾಳಿ

ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15,000ಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕೋ-ಆಪರೇಟಿವ್ ಸೊಸೈಟಿಯೊಂದರ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ಮಾಡಿದೆ ಎಂದು ಇಡಿ ಮೂಲಗಳು ತಿಳಿಸಿವೆ. ವಿಜಯನಗರ, ಜಾಲಹಳ್ಳಿ, ಆರ್​ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ. …

Read More »

ಮಾಜಿ ಸಚಿವನಿಗೆ ನವಿಲಿನ ಗರಿ ಹಾರ ಹಾಕಿದ ಅಭಿಮಾನಿಗಳು; ದೂರು ದಾಖಲಾಗ್ತಿದ್ದಂತೆ ಸ್ಪಷ್ಟನೆ ಕೊಟ್ಟ ಶಿವನಗೌಡ ನಾಯಕ್​​

ರಾಯಚೂರು : ಮಾಜಿ ಸಚಿವ ಕೆ. ಶಿವನಗೌಡ ನಾಯಕ ಜನ್ಮದಿನದಂದು ಅಭಿಮಾನಿಗಳು ನವಿಲುಗರಿ ಹಾರ ಹಾಕಿರುವ ವಿಚಾರಕ್ಕೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಕುರಿತು ಈ ಮೇಲ್ ದೂರು ನೀಡಿದ್ದಾರೆ. 2025 ಜುಲೈ 14 ರಂದು ಕೆ. ಶಿವನಗೌಡ ನಾಯಕ ಅವರ ಹುಟ್ಟುಹಬ್ಬವಿತ್ತು. ಅಂದು ರಾಷ್ಟ್ರಪಕ್ಷಿ ನವಿಲಿನ ಗರಿಯಿಂದ ಸಿದ್ದಪಡಿಸಿದ್ದ ಹಾರವನ್ನ ಧರಿಸಿ ಸಾರ್ವಜನಿಕವಾಗಿ ಫೋಟೋ ಪ್ರದರ್ಶನ ಮಾಡಲಾಗಿದೆ. ಇದರಿಂದ …

Read More »

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ…

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ… ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರ ವರ್ಗಾವಣೆಯ ಬಳಿಕ ನೂತನ ಡಿಸಿಪಿಯಾಗಿ ನಾರಾಯಣ ಬರಮನಿ ಅವರನ್ನು ನೇಮಿಸಲಾಗಿದೆ. ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು, ಇಂದು ಧಾರವಾಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ, ನಾರಾಯಣ ಬರಮನಿ ಅವರನ್ನು ನೂತನ ಡಿಸಿಪಿಯಾಗಿ ಸರ್ಕಾರ ಆದೇಶಿಸಿದೆ. ಕಳೆದ ಬಾರಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ …

Read More »

ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವ ವಿಚಾರವಾಗಿ ಸೋದರ ಸಂಬಂಧಿಯನ್ನ ಹೆದರಿಸಲು ಸಾರ್ವಜನಿಕರ ಮೇಲೆ ಲಾಂಗ್ ಹಾಗೂ ಕಬ್ಭಿಣದ ರಾಡ್ ನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿ ರವಿ ಹಾಗೂ ತಲೆಮರೆಸಿಕೊಂಡಿರುವ ಮೂವರು ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋರ್ಟರ್ ಬಾಯ್ ಆಗಿ ಕೆಲಸ ಮಾಡಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿರುವಾಗ …

Read More »

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಅಭಿವೃದ್ಧಿ ಪರ್ವ

ಬೆಳಗಾವಿ: ಉತ್ತರ ಕರ್ನಾಟಕದ ಮೊದಲ ಟೈಗರ್ ಸಫಾರಿ ಖ್ಯಾತಿಗೆ ಪಾತ್ರವಾಗಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಗಾಗಿ, ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಲವು ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಒಟ್ಟು 6.41 ಕೋಟಿ ವೆಚ್ಚದಲ್ಲಿ ಭರದಿಂದ ಕಾಮಗಾರಿಗಳು ನಡೆಯುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ಮೃಗಾಲಯದ ಚಿತ್ರಣವೇ ಬದಲಾಗಲಿದೆ. ಬೆಳಗಾವಿಯಿಂದ 15 ಕಿ.ಮೀ. ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು …

Read More »

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, …

Read More »

ಕಿತ್ತೂರು ಕೈ ಶಾಸಕರಿಂದ ಬಿಜೆಪಿಗರ ಅವಹೇಳನ ಆರೋಪ ಶಾಸಕ ಬಾಬಾಸಾಹೇಬ್ ಪಾಟೀಲ್ ಗೃಹ ಕಚೇರಿಗೆ ಮುತ್ತಿಗೆ?!!!

ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಕೈ ಶಾಸಕರ ಗೃಹ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಕೈ ಶಾಸಕರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಶಾಸಕರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಶಾಸಕ …

Read More »

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಚೆನ್ನಮ್ಮ, ರಾಯಣ್ಣಿಗೆ ಗೌರವ

ಬೆಂಗಳೂರು, (ಜುಲೈ 15): ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ (Bengaluru) ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸುತ್ತದೆ. ಅದರಂತೆ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಹ ಲಾಲ್ ಬಾಗ್​​ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದ್ದು, ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ …

Read More »

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಗಾಂಧಿ ನಗರದ ನಿವೃತ್ತ ಶಿಕ್ಷಕರಾದ ಶಿವಾನಂದ ಕುಂದರಗಿ ಅವರನ್ನು ಆಯ್ಕೆ ಮಾಡಲಾಯಿತು. ಖಾನಾಪೂರ ಪಟ್ಟಣದ ಸಂತ ಜ್ಞಾನೇಶ್ವರ ಮಂದಿರದಲ್ಲಿ ಖಾನಾಪೂರ ತಾಲೂಕು ಹಿರಿಯ ನಾಗರಿಕರ ಮತ್ತು ನಿವೃತ್ತ ನೌಕರರ ಸಭೆ ಆಯೋಜಿಸಲಾಗಿತ್ತು …

Read More »

ಅಹಿಂದ ಒಂದು ಮತಬ್ಯಾಂಕ್ ಅಲ್ಲ, ಇದು ಭಾರತದ ಆತ್ಮಸಾಕ್ಷಿಯ ಧ್ವನಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ನಾನು ದೃಢವಾಗಿ ಹೇಳುತ್ತೇನೆ. ಕರ್ನಾಟಕ ಮಾದರಿಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಬದ್ಧವಾಗಿದೆ. ಇದು ಭ್ರಾತೃತ್ವದಲ್ಲಿ ಬೇರೂರಿದೆ, ಡೇಟಾ ಆಧಾರಿತವಾಗಿದೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅಳವಡಿಕೆಗೆ ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ಕೆಪಿಸಿಸಿ ಭಾರತ್ ಜೋಡೋದಲ್ಲಿ ನಡೆದ ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, OBC ಸಲಹಾ ಸಮಿತಿಯ ಪಾತ್ರ ಮತ್ತು ಮುಂದಿನ ದಾರಿ, ಈ ಸಮಿತಿಯು ಕೇವಲ ಔಪಚಾರಿಕವಲ್ಲ, ಇದು …

Read More »