Breaking News

ಜಿಲ್ಲೆ

ಸತೀಶ ಜಾರಕಿಹೊಳಿ ಅವರ‌ ಸೂಚನೆಯಂತೆ ನಗರದ 21 ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಜರ್, ಮಾಸ್ಕ್ ಸೇರಿ ಹಣ್ಣುಗಳನ್ನು ವಿತರಿಸಿದರು.

ಬೆಳಗಾವಿ: ಪೊಲೀಸ್ ಕಮಿಷನರೆಟ್, ವರಿಷ್ಠಾಧಿಕಾರಿ ಕಚೇರಿಗಳು ಸೇರಿ ನಗರದ 21 ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಜರ್, ಮಾಸ್ಕ್ ಸೇರಿ ಹಣ್ಣುಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ‌ ಸೂಚನೆಯಂತೆ ವಿತರಿಸಿದರು. ಕೊರೋನಾ ವಿರುದ್ದ ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಪೊಲೀಸ್ ಇಲಾಖೆ ಯವರ ಸನ್ಮಾನದಲ್ಲಿ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ಸ್ಯಾನಿಟೈಜರ್ ಮತ್ತು ಮಾಸ್ಕ್ ಗಳನ್ನು ವಿತರಿಸಲಾಗಿದೆ. ಅದರ ಭಾಗವಾಗಿ ಇಂದು ನಗರದ ಎಲ್ಲ ಪೊಲೀಸ್ ಕಚೇರಿಗಳಲ್ಲಿ ಮಾಸ್ಕ್ ಸ್ಯಾನಿಟೈಜರ್ …

Read More »

ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 45 ಮಂದಿಗೆ ಕೊರೊನಾ

ಭಟ್ಕಳದಲ್ಲಿ 5 ತಿಂಗಳ ಕಂದಮ್ಮ, 3 ವರ್ಷದ ಬಾಲಕಿ ಸೇರಿ 12 ಮಂದಿಗೆ ಸೋಂಕು – ಬೆಳಗಾವಿ, ದಾವಣಗೆರೆಯಲ್ಲಿ ಕೊರೊನಾ ಸ್ಫೋಟ ಇಂದು 45 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.     ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 45 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಹಾಗೂ …

Read More »

BIG BREAKING-ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 11 ಪಾಸಿಟೀವ್ ಕೇಸ್ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಬಾಂಬ್ ಸ್ಪೋಟ ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 11 ಪಾಸಿಟೀವ್ ಕೇಸ್ ಪತ್ತೆ *ಹಿರೇಬಾಗೇವಾಡಿ ಗ್ರಾಮದಲ್ಲಿ 10 ರಾಯಬಾಗ ಕುಡಚಿಯಲ್ಲಿ 1 ಪಾಸಿಟೀವ್ ಕೇಸ್ ಪತ್ತೆ ಬೆಳಗಾವಿ ಜಿಲ್ಲೆಯಲ್ಲಿ 85 ಕ್ಕೇರಿದ ಸೊಂಕಿತರ ಸಂಖ್ಯೆ

Read More »

ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ; ಕುಡಿದ ಅಮಲಿನಲ್ಲಿ ಕೊಲೆಯಾದ ರೌಡಿಶೀಟರ್‌

ಬ್ಯಾಟರಾಯನಪುರ ರೌಡಿಶೀಟರ್‌ ಅಶೋಕ್‌ ನಿನ್ನೆ ಕುಡಿದ ಅಮಲಿನಲ್ಲಿದ್ದಾಗ ದಾಳಿ ಮಾಡಿದ್ದ ಕೆಲವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಬೆಂಗಳೂರು (ಮೇ 08); ಕಳೆದ 47 ದಿನಗಳಿಂದ ಶಾಂತವಾಗಿದ್ದ ಬೆಂಗಳೂರು ಕ್ರೈಂ ಲೋಕ ಲಾಕ್‌ಡೌನ್ ಅನ್ನು ಸಡಿಲಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ಮತ್ತೆ ಕ್ರಿಯಾಶೀಲವಾಗಿದೆ. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ರೌಡಿಶೀಟರ್‌ ಅಶೋಕ್‌ ಅಲಿಯಾಸ್ ದಡಿಯಾ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ …

Read More »

ಬೆಂಗ್ಳೂರಿಗರೇ ಎಚ್ಚರ- ಮೇ ಅಂತ್ಯಕ್ಕೆ ಹೆಚ್ಚಾಗಲಿದೆ ಕೊರೊನಾ ಅಬ್ಬರ……………

ಬೆಂಗಳೂರು: ಭಾರತದಲ್ಲಿ ಜೂನ್, ಜುಲೈ ಅಂತ್ಯಕ್ಕೆ ಕೊರೊನಾ ಇನ್ನಿಲ್ಲದಂತೆ ಬಾಧಿಸಲಿದೆ ಅಂತ ಎಚ್ಚರಿಸಲಾಗಿದೆ. ಆದರೆ ಬೆಂಗಳೂರಿಗೆ ಮಾತ್ರ ಮೇ ತಿಂಗಳೇ ಕಂಟಕವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ವಾರ ಬೆಂಗಳೂರಿನಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳವಾಗಲಿದ್ದು, ಮೇ ಅಂತ್ಯಕ್ಕೆ 5 ಸಾವಿರ ಪ್ರಕರಣ ಪತ್ತೆಯಾಗಬಹುದು ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಆಗಿ ನಾಲ್ಕು ದಿನದಲ್ಲಿ ಅಂತಹ ಕಂಟಕ ಬೆಂಗಳೂರಿಗೆ ಎದುರಾಗಿಲ್ಲ. ಆದರೆ ಮುಂದಿನ ವಾರ ಹೈ ರಿಸ್ಕ್ …

Read More »

ಕೋವಿಡ್-19 ವಾರಿಯರ್ಸ್‌ಗೆ ಆರತಿ ಎತ್ತಿ, ಹೂಮಳೆಗೈದ ಗುರೂಜಿ……

ಚಿಕ್ಕಮಗಳೂರು: ಕೊರೊನಾ ವಾರಿಯರ್ಸ್ ಗಳಿಗೆ ಗೌರಿಗದ್ದೆ ದತ್ತಶ್ರಮದ ಅವಧೂತ ವಿನಯ್ ಗುರೂಜಿ ಆರತಿ ಎತ್ತಿ, ಹೂಮಳೆಗೈದಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ ಬುದ್ಧ ಪೂರ್ಣಿಮೆಯ ಅಂಗವಾಗಿ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಿಸಿದರು. ಹೆಲ್ತ್ ವಾರಿಯರ್ಸ್‍ಗೆ ವಿನಯ್ ಗುರೂಜಿ ಅವರು ಆರತಿ ಎತ್ತಿದರು. ಬಳಿಕ ಮೇಲ್ಭಾಗದಲ್ಲಿ ಕುಳಿತಿದ್ದ ಅವರ ಬಳಿಗೆ ಹೋಗಿ ಹೂಗಳನ್ನ ಸುರಿದು ಪುಷ್ಪಾರ್ಚನೆಯ ಮೂಲಕ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ವಿನಯ್ ಗುರೂಜಿ, ವೈದ್ಯರು, …

Read More »

ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮೈಸೂರು: ಇಡೀ ದೇಶವೇ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಎದುರಿಸುತ್ತಿದೆ. ಈ ಮಧ್ಯೆ ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹೌದು. ಗುರುವಾರ ರಾತ್ರಿ ಖದೀಮರು ಸರಗಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಮಹದೇಶ್ವರ ಬಡಾವಣೆಯಲ್ಲಿ ಮಹಿಳೆಯಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ನಂತರ ರಿಂಗ್‍ರಸ್ತೆ ಹಾಗೂ ಕಾರ್ಪೋರೇಷನ್ ಬ್ಯಾಂಕ್ ಬಳಿಯೂ ಸರಗಳ್ಳತನ ಮಾಡಿ ಪಲ್ಸರ್ ಬೈಕಿನಲ್ಲಿ ಕಳ್ಳರು ಪರಾರಿಯಾಗುತ್ತಿದ್ದರು. …

Read More »

ಅವಧಿಗೆ ತಕ್ಕಂತೆ ಪಠ್ಯವನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ ಸೂಚನೆ

ಬೆಂಗಳೂರು : ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸಚಿವರು ಈ ಶೈಕ್ಷಣಿಕ ಸಾಲಿನ ಪ್ರಾರಂಭದ …

Read More »

ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ

ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ. ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ …

Read More »

ಮೂರನೇ ಲಾಕ್ ಡೌನ್ ನಂತರ ಏನು? ಸುಳಿವು ಕೊಟ್ಟ ಗೃಹಸಚಿವ ಬೊಮ್ಮಾಯಿ

ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ ಎನ್ನುವ ಕಾರಣಕ್ಕಾಗಿ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದೆ, ಇದರರ್ಥ ಕೊರೊನಾ ಕಮ್ಮಿಯಾಗಿದೆ ಎಂದಲ್ಲ” ಎಂದು ಬೊಮ್ಮಾಯಿ ಹೇಳಿದ್ದಾರೆ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಕೊರೊನಾವನ್ನು ಸಂಪೂರ್ಣ ತೊಲಗಿಸಲು ಸಾಧ್ಯ. ಮೂರನೇ ಲಾಕ್ ಡೌನ್ ಅನ್ನು ಯಶಸ್ವಿಗೊಳಿಸುವ ಸಂಪೂರ್ಣ ಜವಾಬ್ದಾರಿ ಜನರದ್ದು”ಎಂದು ಬೊಮ್ಮಾಯಿ ಪುನರುಚ್ಚಿಸಿದ್ದಾರೆ. ಮೇ ಹದಿನೇಳರ ನಂತರ ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ, ಮುಂದೆ ಕಠಿಣ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆ ಸರಕಾರಕ್ಕೆ ಬರಲಿದೆ”ಎಂದು …

Read More »