Breaking News

ಜಿಲ್ಲೆ

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ನೆಗೆಟಿವ್ ಯಾದಗಿರಿ ಸೇಫ್

ಯಾದಗಿರಿ: ಸದ್ಯ ಗ್ರೀನ್ ಝೋನ್ ನಲ್ಲಿರುವ ಯಾದಗಿರಿ ಸೇಫ್ ಆಗಿದೆ. ರೋಗಿ ನಂ.413 ಜೊತೆ ಪ್ರಥಮ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ಕೊರೊನಾ ನೆಗೆಟಿವ್ ಬಂದಿದ್ದು, ಇದರಿಂದ ಯಾದಗಿರಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ರೋಗಿ ನಂ.413 ಕನ್ನಡಕದ ಅಂಗಡಿ ಹೊಂದಿದ್ದು, ಯಾದಗಿರಿಯೊಂದಿಗೆ ನಿಕಟ ವ್ಯವಹಾರ ಸಂಪರ್ಕ ಹೊಂದಿದ್ದ. ವ್ಯಾಪಾರಕ್ಕಾಗಿ ಕಲಬುರಗಿಯಿಂದ ಯಾದಗಿರಿಗೆ ಸಂಚಾರ ಮಾಡಿದ್ದ. ಈ ವೇಳೆ ಕೊರೊನಾ ಸೋಂಕು ತಗುಲಿದ್ದ ರೋಗಿ ನಂ.413 ಜೊತೆ ಯಾದಗಿರಿ ವ್ಯಕ್ತಿ ಹತ್ತಿರದ ಒಡನಾಟ …

Read More »

ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ.

ಕಲಬುರಗಿ: ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ. ಸಂಜೆ ಆಳಂದ ನಿವಾಸಿ 54 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಚಿವ ಸುಧಾಕರ್ ದೃಢಪಡಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸೋಂಕಿತರ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಬಿಡುಗಡೆಯಾದ …

Read More »

ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ

ಚಿಕ್ಕಬಳ್ಳಾಪುರ: ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಿ ಮಾತನಾಡುತ್ತಿದ್ದ ಸಚಿವವರು, ಸಭೆ ನಡುವೆ ಕೊರೊನಾದಿಂದ ಸರ್ಕಾರಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ. ಒಂದು …

Read More »

ಹಾವೇರಿ:ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ……

ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ. ಕಣ್ಣೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಸವಾಗಿರೋ ಕಾರ್ಮಿಕರು ಲಾಕ್ ಡೌನ್ ನಂತರ ರಾಜ್ಯಗಳ ಗಡಿ ಬಂದ್ ಆಗಿದ್ದರಿಂದ ಊರಿಗೆ ಬರಲು ಪರದಾಡ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಂತರ ಕೆಲಸವೂ ಇಲ್ಲದೆ ಇದ್ದ ಹಣವೂ ಖರ್ಚಾಗಿದೆ. ಊಟಕ್ಕೆ ಬೇಕಾದ ಪದಾರ್ಥಗಳು ಖಾಲಿ ಆಗಿವೆ. ಹೀಗಾಗಿ ನಮ್ಮನ್ನ ನಮ್ಮ ನಮ್ಮ …

Read More »

ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿ…….

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ.  ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ,ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ.  ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು …

Read More »

ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ:ಸಚಿವರ ಕಿಡಿ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆ ಮುಂದೆ ವಾಹನ ತೊಳೆಯುತ್ತಿದ್ದ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯೋಧನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಕಿಡಿ ಕಾರಿದ್ರು. …

Read More »

ನರ ರೋಗದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್……..

ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಸಾವಿನ ಬಳಿಕ ಕೊರೊನಾ ಹಾಟ್‍ಸ್ಪಾಟ್ ಆಗಿ ಬದಲಾಗಿರುವ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗಲಿದೆ. ವೃದ್ಧೆಯ ಪಕ್ಕದ ಬೆಡ್ ನಲ್ಲಿದ್ದ 80 ವರ್ಷದ ತಾಯಿ ಮತ್ತು ಆಕೆಯ ಆರೈಕೆಗೆ ಬಂದಿದ್ದ 45 ವರ್ಷದ ಮಗನಿಗೆ ಸೋಂಕು ಕಾಣಿಸಿಕೊಂಡಿದೆ. ಇವರು ಮಂಗಳೂರಿನ ಶಕ್ತಿನಗರದ ನಿವಾಸಿಗಳಾಗಿದ್ದು, ಆ ಏರಿಯಾವನ್ನು ಕಂಪ್ಲೀಟ್ ಸೀಲ್‍ಡೌನ್ ಮಾಡಲಾಗಿದೆ. ನರ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಫಸ್ಟ್ …

Read More »

ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.

ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ …

Read More »

ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆ……….update……

ಬೆಂಗಳೂರು: ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಓರ್ವ ರೋಗಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದ್ದು, ಸಾವಿನ ಸಂಖ್ಯೆ 20ಕ್ಕೆ ತಲುಪಿದೆ. ಇದುವರೆಗೂ ಕೊರೊನಾದಿಂದ 193 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟು 11 ಮಂದಿ ಆಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಮಂಡ್ಯ 2, ದಕ್ಷಿಣ ಕನ್ನಡ 2, ವಿಜ …

Read More »

ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬ – ಜಮೀನಿನಲ್ಲೇ ಕೊಳೆಯುತ್ತಿದೆ ಚೆಂಡು ಹೂವು……..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು, ನಿರ್ಗತಿಕರು ಹಾಗೂ ರೈತರ ಬದುಕು ಅಸ್ತವ್ಯಸ್ತವಾಗಿದೆ. ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ರೈತ ಕೆಂಪರಾಜು ಅವರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದಾರೆ. ಈ ಗುತ್ತೆಗೆ ಪಡೆದ ಜಮೀನಿನಲ್ಲಿ ಚೆಂಡು ಹೂವು ಬೆಳೆದು, ಸರಿಯಾದ ಮಾರುಕಟ್ಟೆ ಇಲ್ಲದೇ …

Read More »