Breaking News

ಜಿಲ್ಲೆ

ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು……….

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು ಹಾಕಿದ್ದು, ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಅಜ್ಜ ಎಲ್ಲ ರೀತಿಯ ಹೋರಾಟ ನಡೆಸುತ್ತಿದ್ದಾನೆ. ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದ ಬಿಹಾರ ಮೂಲದ ಕಾರ್ಮಿಕ ರೋಗಿ-419ರ ಸಂಪರ್ಕದಿಂದ ವೃದ್ಧನಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿತ್ತು. ಹೀಗಾಗಿ ಸದ್ಯ ಆತನನ್ನು ಪ್ರತ್ಯೇಕವಾಗಿಸಿರಿ ಚಿಕಿತ್ಸೆ ಕೊಡಲಾಗುತ್ತಿದೆ. ವೃದ್ಧನಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈದ್ಯರಿಗೆ ಎಲ್ಲವೂ ಕಷ್ಟ ಕಷ್ಟವಾಗಿದೆ. ಆದರೂ ಅಜ್ಜ …

Read More »

ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿದ ಕೆಎಂಎಫ್ ಅಧಿಕಾರಿ

ಧಾರವಾಡ: ನಗರದ ಕೆಎಂಎಫ್ ಅಧಿಕಾರಿಯೊಬ್ಬರು ಕೊರೊನಾ ಸಂಕಷ್ಟದಲ್ಲೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿ, ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ. ಧಾರವಾಡ ನಗರದ ಟೋಲ್‍ನಾಕಾದಲ್ಲಿ ಪ್ರತಿ ದಿನ 30ಕ್ಕೂ ಹೆಚ್ಚು ಪೌರಕಾರ್ಮಿಕರು ಈ ಕೊರೊನಾ ಸಮಯದಲ್ಲಿ ಕೂಡಾ ಬೆಳಗಿನ ಜಾವವೇ ಬಂದು ಕಸ ತೆಗೆದುಕೊಂಡು ಹೋಗುವುದು, ರಸ್ತೆ ಸ್ವಚ್ಛ ಮಾಡುವ ಕೆಲಸದಲ್ಲಿ ತೊಡಗಿರುತ್ತಾರೆ. ಇದನ್ನ ಧಾರವಾಡ ಕೆಎಂಎಫ್‍ನ ಟೆಕ್ನಿಕಲ್ ಆಫಿಸರ್ ನಾಗಪ್ಪ ಅರಳೋದ ಅವರು ಕಳೆದ …

Read More »

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ’ : ಗೋಪಾಲಯ್ಯಗೆ ಡಿಕೆಶಿ ವಾರ್ನಿಂಗ್ …….

ಬೆಂಗಳೂರು, ಏ.26- ಆನೆಕಲ್ ನಲ್ಲಿ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿದ ಕೃತ್ಯದ ಹಿಂದೆ ಏನೆಲ್ಲಾ ಮಾತುಕತೆಗಳಾಗಿವೆ ಎಂದು ನನಗೆ ಗೋತ್ತಿದೆ. ಈಗ ಎಲ್ಲವನ್ನು ಚರ್ಚೆ ಮಾಡುವ ಕಾಲವಲ್ಲ. ಸುಮ್ಮನೆ ನನ್ನ ಕೆಣಕಿ ಮರ್ಯಾದೆ ಕಳೆದುಕೊಳ್ಳುದು ಬೇಡ. ಮುಂದಾಗಬೇಕಿರುವ ಕೆಲಸದತ್ತ ಸಚಿವರು ಗಮನ ಕೊಡಲಿ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಗಜ್ಯೋತಿ ಬಸವೇಶ್ವರರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ಪಡಿತರ ವ್ಯವಸ್ಥೆಯಡಿ ಹಂಚಿಕೆ ಮಾಡಲು …

Read More »

ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ: ಮಹೇಶ ಕುಮಟಳ್ಳಿ

ಅಥಣಿ: ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಶಾಸಕ‌ ಮಹೇಶ ಕುಮಟಳ್ಳಿ ಕಿಡಿಕಾರಿದ್ದಾರೆ. ಶಾಸಕ‌ ಮಹೇಶ ಕುಮಟಳ್ಳಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ‌ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರನಷ್ಟು ಕೀಳು ರಾಜಕೀಯಕ್ಕೆ ನಾನು ಇಳಿಯಲ್ಲ. ಅಧಿಕಾರಿಗಳು ಹಾಗೂ ಜನರ ಮಧ್ಯೆ ಇದ್ದು, ಕೊರೊನಾ ಸೋಂಕು ಹರಡದಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು.‌ ಪ್ರತಿನಿತ್ಯ ಅವರ ಮನೆಗೆ ಹೋಗಿ ಭೇಟಿ …

Read More »

ತರಾತುರಿಯಲ್ಲಿ ಮಾಡಿದ ಲಾಕಡೌನ್ ನಿಂದ ಸಮಸ್ಯೆಯಾಗಿದೆ: ಸತೀಶ ಜಾರಕಿಹೋಳಿ

    ಕೊಣ್ಣೂರ :ಕೊರೋನಾ ತಡೆಗಟ್ಟಲು ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅನೂಕೂಲವಾಗುಂತಹ ಕೆಲಸ ರಾಜ್ಯ ಸರ್ಕಾರ ಮಾಡಬೇಕಾಗಿದೆ ಎಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿಯ ಕಾರ್ಯಾದಕ್ಷರಾದ ಸತೀಶ ಜಾರಕಿಹೋಳಿಯವರು ಬೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಅಲ್ಲಿನ ಕುಂದುಕೊರತೆಗಳನ್ನು ವಿಚಾರಿಸಿ ಮಾಸ್ಕ ವಿತರಿಸಿದರು ಇದೆ ಸಂದರ್ಭದಲ್ಲಿ ಮಾದ್ಯಮದವರಿಗೆ ಉತ್ತರಿಸಿದ ಅವರು ನಮ್ಮ ಪಕ್ಷದ ವತಿಯಿಂದ ಒಂದು ಲಿಸ್ಟ್ ಮಾಡಿ ಬಡವರಿಗೆ ತಲುಪಿಸುವಂತೆ ಮುಖ್ಯಮಂತ್ರಿಗಳಿಗೆ …

Read More »

ದಿನಗೂಲು ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ತುಂಬ ಸಂಕಷ್ಟವಾಗುತ್ತಿದೆ ಹೀಗಾಗಿ ಅವರ‌ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು

ಗೋಕಾಕ: ಕೊರೋನಾ ಸೊಂಕೀತರ ಸಂಖ್ಯೆ ಹೆಚ್ಚಿಗೆ ಆದಲ್ಲಿ ಲಾಕಡೌನ್ ಮುಂದುವರೆಸಲಿ, ಆದರೆ ನಿರ್ಬಂಧ ಹೆರದೆ ದಿನಗೂಲಿ ಕಾರ್ಮಿಕರಿಗೆ, ಕೃಷಿಕರಿಗೆ ಮತ್ತು ಕೆಲವು ಕಾರ್ಖಾನೆಗಳನ್ನು ಬಿಟ್ಟು ಪಾಸ್ ವ್ಯವಸ್ಥೆ ಮಾಡಿ ಅನೂಕೂಲ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.  ಸಮೀಪದ ಕೊಣ್ಣೂರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಅಲ್ಲಿನ ಕುಂದುಕೊರತೆಗಳನ್ನು ವಿಚಾರಿಸಿ ಮಾಸ್ಕ ವಿತರಿಸಿದ ಬಳಿಕ ಮಾದ್ಯಮದವರಿಗೆ ಉತ್ತರಿಸಿದ ಅವರು ದಿನಗೂಲು …

Read More »

ಇಂದು ರಾಜ್ಯದಲ್ಲಿ ಒಂದೇ ಒಂದು ಕೊರೋನಾ ಕೇಸ್ ಪತ್ತೆ, ಮಂಗಳೂರು ಮಹಿಳೆಗೆ ಸೋಂಕು

ಬೆಂಗಳೂರು, ಮಾ.26- ಕಳೆದ 32 ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದರೂ ಇಂದು ಮಾತ್ರ ಒಂದೇ ಒಂದು ಸೋಂಕಿನ ಪ್ರಕರಣ ಪತ್ತೆಯಾಗಿ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 18 ಗಂಟೆಗಳಲ್ಲಿ ಒಬ್ಬ ಮಹಿಳೆಗೆ ಮಾತ್ರ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗಿರುವುದನ್ನು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಕಳೆದ ಎರಡು- ಮೂರು ದಿನಗಳಿಂದ ಸೋಂಕಿತರ ಪ್ರಮಾಣ ರಾಜಧಾನಿ ಬೆಂಗಳೂರು, ಬೆಳಗಾವಿ, ಕಲಬುರಗಿ ಇನ್ನಿತರೆಡೆ ಹೆಚ್ಚುತ್ತಲೇ ಇದ್ದ ಪರಿಣಾಮ ಜನರಲ್ಲಿ …

Read More »

ಅರಭಾಂವಿ ಕ್ಷೇತ್ರದಲ್ಲಿ ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದರು

  ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ರವಿವಾರದಂದು ಗ್ರಾಮಗಳಲ್ಲಿ  ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಅರಭಾಂವಿ ವಿಧಾನ ಸಭಾ …

Read More »

ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ

ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ. ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು …

Read More »

ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ…….

ಬೆಳಗಾವಿ, ಏ.೨೬(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ೫೦ ವರ್ಷದ ವ್ಯಕ್ತಿ(ಪಿ-೧೮೨) ಹಾಗೂ ಅವರ ಪತ್ನಿಯಾಗಿರುವ ೪೦ ವರ್ಷದ (ಪಿ-೧೯೨) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಏ.೩ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು …

Read More »