ಗದಗ: ಕೊರೊನಾ ವೈರಸ್ ಅಟ್ಟಹಾಸಕ್ಕೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಈ ಸಂದರ್ಭವನ್ನೇ ದುರುಪಯೋಗ ಮಾಡಿಕೊಂಡು ಕೆಲವರು ಮದ್ಯ ಕಳ್ಳತನಕ್ಕೆ ಮುಂದಾಗಿದ್ದಾರೆ. ಗದಗ ತಾಲೂಕಿನ ಕಳಸಾಪೂರ ಗ್ರಾಮದ ಹೊರವಲಯದ ನಾಗಾವಿ ರಸ್ತೆಯಲ್ಲಿರುವ ಎಂಎಸ್‍ಐಎಲ್ ಮದ್ಯದಂಗಡಿಯ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ವಿಚಿತ್ರ ಎಂದರೆ ಖದೀಮರು ತಮಗೆ ಇಷ್ಟವಾಗಿರುವ ಬಿಯರ್, ಬ್ರ್ಯಾಂಡಿ ಸೇರಿದಂತೆ ಇತರೆ ಕಡಿಮೆ ಬೆಲೆಯ ಮದ್ಯವನ್ನು ಮಾತ್ರ ಕಳ್ಳತನ ಮಾಡಿದ್ದಾರೆ. …
Read More »ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಪಾಸಣೆಗೆ ಒಳಗಾಗಬೇಕು:ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಏ.2-ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ಬೆಂಗಳೂರಿನ ಹೆಗಡೆನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ …
Read More »ರಾಮನವಮಿಗೆ ತಟ್ಟದ ಲಾಕ್‍ಡೌನ್ ಬಿಸಿ- ಮುಗಿಬಿದ್ದು ದರ್ಶನ ಪಡೆದ ರಾಮ ಭಕ್ತರು
ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಎಲ್ಲಾ ದೇವಾಲಯಗಳು ಬಂದ್ ಆಗಿವೆ. ಆದರೆ ರಾಯಚೂರಿನಲ್ಲಿ ರಾಮನವಮಿಗೆ ಮಾತ್ರ ಲಾಕ್‍ಡೌನ್ ಬಿಸಿ ತಟ್ಟಲಿಲ್ಲ. ಬೆಳಗ್ಗೆಯಿಂದ ರಾಮ ಭಕ್ತರು ನಿರಂತರವಾಗಿ ದರ್ಶನ ಪಡೆದಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಮಂದಿರಲ್ಲಿ ಭಕ್ತರು ಯಾವ ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ಮುಗಿಬಿದ್ದು ದರ್ಶನ ಪಡೆದಿದ್ದಾರೆ. ಮಂದಿರದ ಮುಖ್ಯದ್ವಾರಕ್ಕೆ ಬೀಗ ಹಾಕಿದ್ದರೂ ಪಕ್ಕದ ಚಿಕ್ಕ ದ್ವಾರದಿಂದ ಭಕ್ತರ ಪ್ರವೇಶಕ್ಕೆ ಅರ್ಚಕರು ಅನುವು ಮಾಡಿಕೊಟ್ಟಿದ್ದಾರೆ …
Read More »ಕೊರೋನಾ ವೈರಸ ಹಿನ್ನೆಲೆ : ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ : ಡಿ.ಎಸ್.ಪಿ ಡಿ.ಟಿ ಪ್ರಭು
ಗೋಕಾಕ:ಕೊರೋನಾ ವೈರಸ ಹಿನ್ನೆಲೆ : ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ : ಡಿ.ಎಸ್.ಪಿ ಡಿ.ಟಿ ಪ್ರಭು ಜನಪ್ರತಿನಿಧಿಗಳು , ಮುಖಂಡರುಗಳು ಕೊರೋನಾ ವೈರಸ್ ಹರಡದಂತೆ ಜವಾಬ್ದಾರಿಯುತ ಕಾರ್ಯ ನಿರ್ವಹಿಸಬೇ ವಹಿಸಬೇಕಾಗಿದೆ ಎಂದು ಡಿ.ಎಸ್.ಪಿ ಡಿ.ಟಿ ಪ್ರಭು ಹೇಳಿದರು ಗುರುವಾರದಂದು ನಗರದ ಶಹರ ಠಾಣೆಯಲ್ಲಿ ನಡೆದ ವಿವಿಧ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದಿಂದ ರಾಜಾದ್ಯಂತ ಲಾಕಡೌನ ಜಾರಿಯಲ್ಲಿದ್ದು , ಗೋಕಾಕ ನಗರದಲ್ಲಿಯೂ ಸಹ ಲಾಕಡೌನ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ …
Read More »ನಾಳೆ ದೇಶವಾಸಿಗಳಿಗಾಗಿ ಮೋದಿ ವಿಡಿಯೋ ಸಂದೇಶ
ಬೆಂಗಳೂರು: ಪ್ರಧಾನಿ ಮೋದಿ ಅವರು ನಾಳೆ ದೇಶದ ಜನತೆಗಾಗಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ಭೀತಿಯಿಂದ ಈಗಾಗಲೇ ಮೋದಿ ಅವರು, ದೇಶವನ್ನು ಏಪ್ರಿಲ್ 14ರವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಇಂದು ಕೂಡ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮಾಡಿದ್ದರು. ಇದಾದ ನಂತರ ಅವರು ಟ್ವೀಟ್ ಮಾಡಿದ್ದು, ವಿಡಿಯೋ ಸಂದೇಶ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಮೋದಿ …
Read More »ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು.
ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು. ಉಡುಪಿ,ಏ.2; ಕೊರೊನಾ ವ್ಯಾಧಿಯ ಭಯದಿಂದ ವೃದ್ಧನ ಅಂತ್ಯಸಂಸ್ಕಾರ ನಡೆಸಲು ಮನೆ ಮಂದಿ ಭಯಭೀತರಾಗಿ ಹಿಂದೇಟು ಹಾಕಿದರು. ಕೊನೆಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ, ವೃದ್ಧನ ಅಂತ್ಯಸಂಸ್ಕಾರವನ್ನು ನೆರವೆರಿಸಿತು. ಇಂತಹ ಮಾನವಿತೆಯ ಸತ್ಕಾರ್ಯವು ಉಡುಪಿಯಲ್ಲಿ ಮಾ.30 ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿದ್ಧಾಪುರ- ಕಮಲಶಿಲೆಯ ನಿವಾಸಿ ಮಂಜುವೀರ( 80ವ) ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಳೆದ …
Read More »ದೆಹಲಿ ಸಮಾವೇಶಕ್ಕೆ ಹೋಗಿದ್ದವರ ಶೋಧಕ್ಕೆ ಹುಕ್ಕೇರಿ ಪೊಲೀಸರ ಹೊಸ ಐಡಿಯಾ
ಬೆಳಗಾವಿ(ಚಿಕ್ಕೋಡಿ): ದೇಶವನ್ನೇ ತಲ್ಲಣಗೊಳಿಸಿರುವ ಕೊರೊನಾ ಶಂಕಿತರಾದ ದೆಹಲಿ ನಿಜಾಮುದ್ದೀನ್ ಸಮಾವೇಶದ ನಂಟು ಇದ್ದವರ ಪತ್ತೆಗಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಪೊಲೀಸರು ಹೊಸ ಐಡಿಯಾವೊಂದನ್ನ ಮಾಡಿದ್ದಾರೆ. ಪೊಲೀಸರು ಗಲ್ಲಿ ಗಲ್ಲಿಗಳಿಗೆ ಹೋಗಿ ಯಾರಾದರೂ ದೆಹಲಿಯ ನಿಜಾಮುದ್ದೀನ್ ಸಮಾವೇಶಕ್ಕೆ ಜಮಾತ್‍ಗೆ ಹೋಗಿ ಬಂದಿದ್ದರೆ ದಯವಿಟ್ಟು ಬಂದು ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ ಪಟ್ಟಣದ ತಬ್ಲಿಗ ಸಮಾಜದ ಎರಿಯಾಗಳಿಗೆ ಹೋಗಿ ಪೊಲೀಸರು ಧ್ವನಿ ವರ್ಧಕಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ …
Read More »ರಾಜ್ಯದಲ್ಲಿ 312 ಸ್ಲೀಪರ್ ಕೋಚ್ ರೈಲು ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತನೆ
ಬೆಂಗಳೂರು : ಕೊರೊನಾ ಚಿಕಿತ್ಸೆಗೆ ಐಸೋಲೇಷನ್ ವಾರ್ಡ್ಗಳ ಕೊರತೆ ನೀಗಿಸಲು ಆರೋಗ್ಯ ಇಲಾಖೆ ಜೊತೆ ರೈಲ್ವೆ ಇಲಾಖೆ ಕೈಜೋಡಿಸಿದ್ದು, ರಾಜ್ಯದಲ್ಲಿ 312 ಸ್ಲೀಪರ್ ಕೋಚ್ ರೈಲು ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತಿಸುವ ಕೆಲಸ ಆರಂಭಿಸಲಾಗಿದೆ. ಕೋವಿಡ್ -19 ಮಹಾಮಾರಿಗೆ ಸಿಲುಕಿದವರ ಚಿಕಿತ್ಸೆಗೆ ಅಗತ್ಯವಾದ ಐಸೋಲೇಷನ್ ಕೊರತೆ ನೀಗಿಸಲು ರೈಲ್ವೆ ಇಲಾಖೆ ಮುಂದಾಗಿದ್ದು ದೇಶಾದ್ಯಂತ 5 ಸಾವಿರ ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತಿಸಲಾಗುತ್ತಿದೆ. ಅದರ ಭಾಗವಾಗಿ ಕೊರೊನಾ ಸೋಂಕಿತರನ್ನು ಇರಿಸಲು ನೈರುತ್ಯ …
Read More »ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯನ್ನು ಭೇಟಿಮಾಡಿದ ಡಿಸಿಎಂ ಅಶ್ವತ್ಥಾರಾಯಣ……
ಬೆಂಗಳೂರು, ಏ.2-ಜನರ ಆರೋಗ್ಯದ ಪರಿಶೀಲನೆಗೆ ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎ್.ಅಶ್ವತ್ಥಾರಾಯಣ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಅವರನ್ನು ಹೆಗಡೆ ನಗರದ ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದ ನಂತರ ಈ ಸೂಚನೆ ನೀಡಿದ್ದಾರೆ. ಆಶಾ ಕಾರ್ಯರ್ತೆಯರಿಗಾದ ನೋವು ಆಲಿಸಿದ ನಂತರ …
Read More »10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಧಾರಾವಿ ಸ್ಲಂ ಮೇಲೆ ಕೊರೊನಾ ಕರಿನೆರಳು
ಮುಂಬೈ: ಸುಮಾರು 10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ, ಏಷ್ಯಾದ ಅತಿ ದೊಡ್ಡ ಸ್ಲಂ ಎನಿಸಿಕೊಂಡಿರುವ ಧಾರಾವಿಯಲ್ಲಿ ಎರಡನೇ ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ. 52 ವರ್ಷದ ಬಿಎಂಸಿ(ಬೃಹನ್‍ಮುಂಬೈ ಮುನಿಸಿಪಲ್ ಕಾರ್ಪೋರೇಶನ್) ಸ್ಯಾನಿಟೈಸೇಶನ್ ಕೆಲಸಗಾರನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ವರ್ಲಿ ಪ್ರದೇಶದ ನಿವಾಸಿಯಾಗಿದ್ದು, ಇತ್ತೀಚೆಗೆ ಧಾರಾವಿಯಲ್ಲಿ ಕೆಲಸ ಮಾಡಲು ವರ್ಗಾಯಿಸಲಾಗಿತ್ತು. ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆ ಬಿಎಂಸಿ ಅಧಿಕಾರಿಗಳು ಆತನಿಗೆ ಪರೀಕ್ಷೆ ಮಾಡಿಸುವಂತೆ …
Read More »
Laxmi News 24×7