ಬೆಳಗಾವಿ: ಚಾಕು, ಮಚ್ಚು, ಲಾಂಗು ಎಂದರೆ ಆಟಿಕೆ ಸಾಮಾನು ಆದಂತಾಗಿವೆ. ಪುಸ್ತಕ, ಪೆನ್, ಊಟದ ಡಬ್ಬಿ ಇಟ್ಟುಕೊಳ್ಳುವ ಬ್ಯಾಗ್ನಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಶಾಲಾ ಕಾಲೇಜು ಮಕ್ಕಳು ಓಡಾಡುತ್ತಿದ್ದಾರೆ. ಇದಕ್ಕೆಲ್ಲಾ ಬ್ರೇಕ್ ಹಾಕಲು ಬೆಳಗಾವಿ ಪೊಲೀಸ್ ಕಮಿಷನರ್ ನೂತನ ಚಕ್ರವ್ಯೂಹವೊಂದನ್ನು ರಚಿಸಿದ್ದಾರೆ. ಅದುವೇ “ಚುಚ್ಚು ನಿಯಂತ್ರಣ ತಂಡ”. ಚಾಕು ಇರಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಭೂಷಣ ಗುಲಾಬರಾವ್ ಬೊರಸೆ ಅವರು ಚುಚ್ಚು ನಿಯಂತ್ರಣ ತಂಡವನ್ನು ಮೊನ್ನೆಯಷ್ಟೇ ಘೋಷಣೆ ಮಾಡಿದ್ದರು. ಈ …
Read More »30 ವರ್ಷದ ಹಿಂದೆ ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಈಗ ಶಿಕ್ಷೆ
ಬೆಳಗಾವಿ : 30 ವರ್ಷದ ಹಿಂದೆ ಉತಾರ ಕೊಡಲು 500 ರೂ. ಲಂಚ ಪಡೆದಿದ್ದ ಆಗಿನ ಗ್ರಾಮ ಲೆಕ್ಕಾಧಿಕಾರಿಗೆ ಈಗ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆದರೆ, ದೂರು ನೀಡಿದ್ದ ರೈತ 5 ವರ್ಷಗಳ ಹಿಂದೆ ಮೃತಪಟ್ಟಿದ್ದು, ಲಂಚ ಸ್ವೀಕರಿಸಿದ್ದ ಅಧಿಕಾರಿ ಹಿಂಡಲಗಾ ಜೈಲು ಕಂಬಿ ಎಣಿಸುತ್ತಿದ್ದಾರೆ. 1995ರಲ್ಲಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ …
Read More »ಸುಬ್ರಹ್ಮಣ್ಯ: ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಸಂಚಾರದಲ್ಲಿ ವ್ಯತ್ಯಯ
ಸುಬ್ರಹ್ಮಣ್ಯ(ದ.ಕನ್ನಡ): ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಗ್ಗೆ 3:40ಕ್ಕೆ ಆಗಮಿಸಿದ್ದು, ತಡವಾಗಿ ಹೊರಡಲಿದೆ. ಹಾಗೇ ರೈಲು ಸಂಖ್ಯೆ 16585 SMVT ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ಸಕಲೇಶಪುರಕ್ಕೆ ಬೆಳಗ್ಗೆ 3:10ಕ್ಕೆ, ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ …
Read More »ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು …
Read More »ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ
ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …
Read More »ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!
ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಎಸ್ ಎಸ್ ಟ್ರಾವೇಲ್ಸ್ ಬಸ್ ಹಾಗೂ ಟ್ರಕ್ ನಡುವೆ …
Read More »ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್…
ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್… ಕಸ ವಿಲೇವಾರಿಯಾಗುತ್ತಿಲ್ಲ, ನಾಯಿಗಳ ಹಾವಳಿ, ಗಬ್ಬು ವಾಸನೆ… ಪಾಲಿಕೆ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿರುವ ನಿವಾಸಿಗಳು….. ಬೆಳಗಾವಿ ಅಜಂನಗರ ಕೆಎಲ್ಇ ಕಂಪೌಂಡ ಪಕ್ಕದಲ್ಲಿರುವ ಮೊದಲೇ ಕ್ರಾಸ್ ನಲ್ಲಿ ಬಿದ್ದಿರುವ ಕಸದ ರಾಶಿಯನ್ನು ನೋಡಿದರೆ ಅಕ್ಷರಶಹ ತ್ಯಾಜ್ಯ ವಿಲೇವಾರಿ ಘಟಕದಂತಾಗಿದ್ದು, ಪಾಲಿಕೆ ನಿರ್ಲಕ್ಷ್ಯಕ್ಕೆ ಇಲ್ಲಿಯ ನಿವಾಸಿಗಳು ಹಿಡಿ ಶಾಪ ಹಾಕುತ್ತಿದ್ದಾರೆ ಅಜಮ್ ನಗರ ಮಹಾನಗರ ಪಾಲಿಕೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. …
Read More »ಬಿಎಸ್‌ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್ ಫಾರ್ ಎಜುಕೇಷನ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (ಸಿಇಎಸ್‌ಎಸ್) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿ …
Read More »ಸಕ್ಕರೆ ಕಾರ್ಖಾನೆಗಳಿಂದ ಬಿಲ್ ಪಾವತಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
ಬಾಗಲಕೋಟೆ: ಸಕ್ಕರೆ ಕಾರ್ಖಾನೆಗಳಿಂದ ಬಿಲ್ ಪಾವತಿಸುವಂತೆ ಒತ್ತಾಯಿಸಿ ರೈತರು ಇಲ್ಲಿನ ಜಿಲ್ಲಾಡಳಿತ ಭವನದೆದುರು ಗುರುವಾರ ಪ್ರತಿಭಟನೆ ನಡೆಸಿದರು. ಕಳೆದ ಒಂದು ವರ್ಷದಿಂದ ಸಕ್ಕರೆ ಕಾರ್ಖಾನೆಯವರು ಕಬ್ಬು ನುರಿಸಿದ ರೈತರ ಬಿಲ್ ಹಾಗೂ ಬಾಕಿ ಹಣ ಪಾವತಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ರೈತ ಮುಖಂಡರಾದ ಮುತ್ತಪ್ಪ ಕೋಮಾರ್, ಈರಣ್ಣ ಹಂಚಿನಾಳ ಹಾಗೂ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದರು. ಜಿಲ್ಲಾಡಳಿತ ಭವನದೊಳಗೆ ಹೋಗಲು ಪೊಲೀಸರು ತಡೆಯೊಡ್ಡಿದ್ದರಿಂದ ರೈತರು …
Read More »ಕಂದಾಯ ಇಲಾಖೆ ಕಚೇರಿಯಲ್ಲಿ ಲಂಚದ ರೇಟ್ ಕಾರ್ಡ್ ಹಾಕಿ: ಸಚಿವ ಕೃಷ್ಣ ಬೈರೇಗೌಡ ಕಿಡಿ
ಬೆಂಗಳೂರು (ಜೂ.20): ಪ್ರತಿಯೊಂದು ಕೆಲಸಕ್ಕೂ ಲಂಚ, ಅಲೆದಾಟ, ವಿಳಂಬ ನೀತಿಯ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹೆಚ್ಟುವರಿ ಆಯುಕ್ತರ ಕಚೇರಿಗಳು ಮತ್ತು ತಹಸೀಲ್ದಾರ್ ಕಚೇರಿಗಳಿರುವ ಕಂದಾಯ ಭವನಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಇಂಥ ಕೆಲಸಕ್ಕೆ ಇಂತಿಷ್ಟು ಲಂಚ ಆಗುತ್ತದೆ ಎನ್ನುವ ‘ಲಂಚದ ದರ ಫಲಕವನ್ನೇ ಅಳವಡಿಸಿಬಿಡಿ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದರು. ದಿಢೀರ್ ಭೇಟಿಗೆ …
Read More »
Laxmi News 24×7