Breaking News

ಜಿಲ್ಲೆ

ಸಿನಿಮಾ‌ ಸ್ಟೈಲ್​ನಲ್ಲಿ ಸುತ್ತುವರೆದು ವ್ಯಕ್ತಿಯ ಭೀಕರ ಕೊಲೆ

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್​ನಲ್ಲಿ ಭಾನುವಾರ ರಾತ್ರಿ ಸಿನಿಮಾ‌ ಸ್ಟೈಲ್​ನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಕೊಲೆ ದೃಶ್ಯ ಸೆರೆ: ಸಿಂಧನೂರು ಸರ್ಕಲ್​ನಲ್ಲಿರುವ ಬೇಕರಿಯೊಂದರ ಮುಂಭಾಗದಲ್ಲಿ ಚೆನ್ನಪ್ಪ ನಾರಿನಾಳ ಎಂಬ ವ್ಯಕ್ತಿಯ ಕೊಲೆಯಾಗಿದ್ದು, ಕೊಲೆಯ ಸಂಪೂರ್ಣ ಚಿತ್ರಣ ಬೇಕರಿಯಲ್ಲಿ ಹಾಕಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಬರುತ್ತಿದ್ದ ಚೆನ್ನಪ್ಪನನ್ನು ಅಟ್ಟಾಡಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು, ಎರಡೇ …

Read More »

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ. ತಾಲೂಕ ಪಂಚಾಯತ ಸಭಾ ಭವನದಲ್ಲಿ ಸವದತ್ತಿ-ಯರಗಟ್ಟಿ ತಾಲೂಕಿನಲ್ಲಿ ಪ್ರವಾಹದ ಮುನ್ಸೂಚನೆ ಕಂಡು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಂದು ಸವದತ್ತಿ ತಾಲೂಕಾ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಲಾಯಿತು. ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು …

Read More »

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ

ಬೀದರ್, ಜೂನ್​ 02: ಅಂದು ದೇಶದಲ್ಲಿ ಕೋವಿಡ್​ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತು ಊಟಕ್ಕೂ ಪರದಾಟ ನಡೆಸಿದ್ದರು. ಆದರೆ ಅದೇ ಸಮಯವನ್ನು ಬಳಸಿಕೊಂಡ ಮಹಿಳೆಯೊಬ್ಬರು (woman) ಕೈ ಕಸೂತಿ (Hand Embroidery) ಕಲಿತುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಂಡರು. ತಾವು ಕಲಿತು ಸುಮ್ಮನಾಗದೇ ಇಂದು ಗ್ರಾಮೀಣ ಮಹಿಳೆಯರಿಗೆ ಕಲಿಸಿಕೊಡುತ್ತಿದ್ದಾರೆ. ಆ ಮೂಲಕ ಮಾದರಿ ಮಹಿಳೆಯಾಗಿದ್ದಾರೆ.ಕೊಲ್ಕತ್ತಾದ ಸುಕಲಿ ಎಂಬುವವರು ಹೊಟ್ಟೆ ಪಾಡಿಗಾಗಿ ಕರ್ನಾಟದ ಬೀದರ್​ ಜಿಲ್ಲೆಗೆ 11 ವರ್ಷದ ಹಿಂದೆ ಆಗಮಿಸಿದ್ದು, …

Read More »

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪ್ರಕರಣ ದಾಖಲ

ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ (Team India) ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, …

Read More »

ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ

ರಾಯಚೂರು, : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (RCB) ಮೇ 29 ರಂದು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಗೆಲ್ಲುವು ದಾಖಲಿಸಿ ಐಪಿಎಲ್ ಫೈನಲ್ (IPL) ಪ್ರವೇಶಿಸಿತ್ತು. ಆರ್​ಸಿಬಿ ಅಭಿಮಾನಿಗಳು ರಾಜ್ಯದಾದ್ಯಂತ ಸಂಭ್ರಮಾಚರಣೆ ಮಾಡಿದ್ದರು. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದ್ದು, ಇದೀಗ ಜೈಲು ಪಾಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಯುವಕರ ಗುಂಪು ಆರ್ಸಿಬಿ …

Read More »

ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ

ಬೆಂಗಳೂರು, ಜೂನ್​ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhan Soudha) ಒಳಕ್ಕೆ ಇನ್ನು ಜನಸಾಮಾನ್ಯರು ಕೂಡ ಹೋಗಬಹುದಾಗಿದೆ. ದೂರದ ಊರಿನಿಂದ ಬೆಂಗಳೂರಿಗೆ (Bengaluru) ಬರುವ ಹಲವರಿಗೆ ವಿಧಾನಸೌಧ ನೋಡಬೇಕು ಎಂಬ ಆಸೆ ಇರುತ್ತದೆ. ಆದರೆ, ಇಷ್ಟು ದಿನಗಳ ಕಾಲ ಹೊರಗಿನಿಂದಲೇ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈಗ ವಿಧಾನಸೌಧದ ಒಳಗೆ ಹೋಗಬಹುದು. ಅದರೊಳಗೆಲ್ಲ ಸುತ್ತಾಡಬಹುದು. ಆ ಭವ್ಯ ಕಟ್ಟಡವನ್ನು ಮುಟ್ಟಬಹುದು. ಹೌದು, ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ …

Read More »

ರಸ್ತೆ, ಬೀದಿಗಳಲ್ಲಿ ಉಗುಳಿದ್ರೆ ಬೀಳುತ್ತೆ 1000 ರೂ. ದಂಡ!

ಬೆಂಗಳೂರು: ಮೇ 31ಅನ್ನು ವಿಶ್ವ ತಂಬಾಕು ದಿನಾಚರಣೆಯಾಗಿ ಆಚರಿಸಲಾಯಿತು. ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಸೇವನೆಗೂ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ. ಇಲ್ಲಿಯವರೆಗೆ ಸಿಗರೇಟು, ಬೀಡಿ ಸೇರಿದಂತೆ ಹೊಗೆಯುಕ್ತ ತಂಬಾಕು ಉತ್ಪನ್ನಗಳ ಸೇವನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧಿಸಲಾಗಿತ್ತು. ಈಗ ಹೊಗೆರಹಿತ ತಂಬಾಕು ಉತ್ಪನ್ನಗಳ ಬಳಕೆಯನ್ನೂ …

Read More »

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್​ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …

Read More »

ಫೋರ್ಜರಿ ಸಹಿ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಇಲಾಖೆಗೆ ವಂಚನೆ ಮಾಡಿರುವ ಆರೋಪದಡಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆ ರದ್ದಾಗಿದೆ.

ಚಿಕ್ಕೋಡಿ (ಬೆಳಗಾವಿ): ನಕಲಿ ದಾಖಲಾತಿಗಳನ್ನು ಸೃಷ್ಟಿಸಿದ ಇಲಾಖೆಗೆ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧು ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ. ಅಥಣಿ ಪಟ್ಟಣದ ಹೊರವಲಯದಲ್ಲಿ 2019-20ನೇ ಸಾಲಿನಲ್ಲಿ ಆರಂಭಗೊಂಡ ಶ್ರೀ ಅಣ್ಣಪ್ಪ ತೇರದಾಳ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆಯ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯವರು ಶಾಲಾ ಶಿಕ್ಷಣ ಇಲಾಖೆಯ (ಪದವಿ …

Read More »

ಹೆದ್ದಾರಿ ಕೆಲಸ ಮುಗಿಸಿ ಹೊರಟವರ ಮೇಲೆ ಹರಿದ ಟ್ಯಾಂಕರ್

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕೆಲಸ ಮುಗಿಸಿ, ಮನೆ ಕಡೆ ಹೊರಟಿದ್ದವರ ಮೇಲೆ ಎಣ್ಣೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಟ್ಯಾಂಕರ್ ಚಾಲಕ ಸೇರಿ ನಾಲ್ವರಿಗೆ ಗಾಯವಾಗಿರುವ ದಾರುಣ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿತು. ಕಾರ್ಮಿಕರು ಇನ್ನೇನು ಮನೆ ಕಡೆ ಹೋಗಬೇಕು ಅನ್ನುವಷ್ಟರಲ್ಲಿ ಟ್ಯಾಂಕರ್ ರೂಪದಲ್ಲಿ ಬಂದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ರಾಮಚಂದ್ರ ಜಾಧವ (45), ಇವರ ಪುತ್ರ …

Read More »