Breaking News

ಜಿಲ್ಲೆ

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇಂದು ಮಂಡ್ಯ  ಜಿಲ್ಲೆಯ ಪಾಂಡವಪುರ  ತಾಲೂಕಿನ ಮೇಲುಕೋಟೆಯಲ್ಲಿ  ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ  ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ. ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ರಾತ್ರಿ 8 ಗಂಟೆಗೆ ಸಲ್ಲುವ ಪುಷ್ಯ ನಕ್ಷತ್ರದಲ್ಲಿ ಚಾಲನೆ ಸಿಗಲಿದೆ. ಬೆಳಗ್ಗೆ  7:30ಕ್ಕೆ ಜಿಲ್ಲಾ ಖಜಾನೆಯಿಂದ ವಜ್ರಖಚಿತ ವೈರಮುಡಿ ಆಭರಣ ತೆರಳಿದ್ದು, ಬಿಗಿ ಭದ್ರತೆಯಲ್ಲಿ ಮಂಡ್ಯದಿದ ಮೇಲುಕೋಟೆಗೆ ರವಾನೆ ಮಾಡಲಾಗುತ್ತದೆ. ಬಳಿಕ ಲಕ್ಷ್ಮಿ …

Read More »

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

ಬೆಂಗಳೂರು: ಬರೋಬ್ಬರಿ 18 ವರ್ಷ ಬಳಿಕ ಇಂಡಿಯನ್‌ ಪ್ರೀಮಿಯರ್‌ ಲೀಗ್  ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ  ಅಣಿಯಾಗಿದೆ. ಕಳೆದ ವರ್ಷದ ಭೀಕರ ಕಾಲ್ತುಳಿತ ಬಳಿಕ ಮತ್ತೆ ನಗರದಲ್ಲಿ ಕ್ರಿಕೆಟ್ ರಂಗೇರುತ್ತಿದೆ. ಆದ್ರೆ ಕಳೆದ ವರ್ಷ ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ದುರಂತದಿಂದ ಎಚ್ಚೆತ್ತಿರುವ ಬೆಂಗಳೂರು ಪೊಲೀಸರು, ಈ ಸಲ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಿದ್ದಾರೆ. ಇಂದು ಮೊದಲ ಪಂದ್ಯದಲ್ಲಿ ಆರ್‌ಸಿಬಿ vs …

Read More »

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ …

Read More »

ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್ ( ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್  ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಮಾ.26 ರಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ  ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ …

Read More »

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಮೂವರು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ …

Read More »

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಪ್ರವಾಸ ಹೋಗಿದ್ದರು, ಫಾದರ್‌ ಲ್ಯಾಂಡ್‌ ಅಂತ ಹೊಗಳಿದ್ರು. ಅವರು ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ಸಚಿವ ಎಂ.ಬಿ ಪಾಟೀಲ್‌  ಹೇಳಿದರು. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ರಾಜ್ಯದಲ್ಲಿ ತೈಲ ಕೊರತೆ (Oil Shortage) ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತೈಲ ಕೊರತೆಯಿಂದ ಕೈಗಾರಿಕೆಗಳಿಗೂ ಬಹಳ ಕಷ್ಟವಾಗಿದೆ. ಪ್ರಧಾನಿ ಮೋದಿ ಇಸ್ರೇಲ್‌ಗೆ ಹೋಗಿದ್ದರು. ಫಾದರ್ ಲ್ಯಾಂಡ್ ಅಂತ ಹೊಗಳಿದ್ರು, ಅವರು ಹೋಗಿಬಂದ ಮರುದಿನವೇ …

Read More »

ಸಿದ್ದರಾಮಯ್ಯಗೆ ಬಂಜಾರ ವಿಚಾರ ಗೊತ್ತಿಲ್ಲ: ಪಿ. ರಾಜೀವ್ ಆರೋಪ

ಬಾಗಲಕೋಟೆ, ಮಾರ್ಚ್ 27: ಉಪಚುನಾವಣೆ ಹಿನ್ನೆಲೆ ಬಾಗಲಕೋಟೆ ಮತಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಪಿ. ರಾಜೀವ್ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಹಾಲೂರು ಎಲ್.ಟಿ. ಗ್ರಾಮದಲ್ಲಿ ಲಂಬಾಣಿ ಸಮುದಾಯದ ನಡುವೆ ಮತಯಾಚನೆ ನಡೆಸಿ ಗಮನ ಸೆಳೆದರು. ಆಲೂರು ಎಲ್,ಟಿ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ ಲಂಬಾಣಿ (ಬಂಜಾರ) ಸಮುದಾಯದ ಸಂಸ್ಕøತಿ, ಪರಂಪರೆ ಹಾಗೂ ಅವರ ಶಕ್ತಿಯ ಕುರಿತು ಮಾತನಾಡಿದ ಅವರು, ಈ …

Read More »

ಬಿಜೆಪಿ ಪರ ನವೀನ ಚರಂತಿಮಠ ಮತಯಾಚನೆ

ಬಾಗಲಕೋಟೆ: ವೀರಣ್ಣ ಚರಂತಿಮಠ ಪರ ಮಗ ನವೀನ ಚರಂತಿಮಠ ಬಾಗಲಕೋಟೆಯ 24ನೇಯ ವಾರ್ಡಿನಲ್ಲಿ ಇಂದು ಮತಯಾಚಿಸಿ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರ ಶಾಸಕರಾದ ಅವದಿಯಲ್ಲಿ ರೈತರು ಮತ್ತು ನಿರುದ್ಯೋಗಿಗಳಿಗೆ ಬಿಜೆಪಿ ಸರಕಾರದಿಂದ ಸಾಕಷ್ಟು ಅಭಿವೃದ್ದಿಪರ ಕೆಲಸಗಳಾಗಿದ್ದು 24 ರೈತರಿಗೆ ಪವರ್ ಟೆಲ್ಲರ, 1000ಕ್ಕೂ ಹೆಚ್ಚು ಕೃಷಿ ಉಪಕರಣಗಳು, 46ರೈತರಿಗೆ ಎತ್ತು, 36 ರೈತರಿಗೆ ಬಂಡಿ ಪೂರೈಸಲಾಗಿದೆ. ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 150 ಪೇಂಟರ್ ಕೀಟ್. 170 ಏಲೆಕ್ಟ್ರೀಷನ್ …

Read More »

ಈ ಬಾರಿ 50 ಸಾವಿರ ಅಂತರ ಖಚಿತ’ – ಕಾರಜೋಳ ಹೇಳಿಕೆ

ಬಾಗಲಕೋಟೆ: ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುಣಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪ್ರಚಾರ ಜೋರಾಗಿದ್ದು, ಅವರು 15–16ನೇ ವಾರ್ಡ್‍ಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಪರ ಮನೆ ಮನೆಗೆ ತೆರಳಿ ಮತಯಾಚನೆ …

Read More »

ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ

ಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನು‌ಮೆಚ್ವಿಕೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆಗೊಳ್ಳುತ್ತಿದ್ದಾರೆ. ಪಂಚಮುಖಿ ಆಂಜನೇಯ ದೇವಸ್ಥಾನದ ಹತ್ತಿರ ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಹುಚ್ಚಪ್ಪ ವಾಗನಗೇರಿ, ಶಿವಪ್ಪ ವಾಗನಗೇರಿ, ಅಶೋಕ ಹಗರಟಗಿ, ಸಂಗಪ್ಪ ವಾಗನಗೇರಿ, ಸಂಗಪ್ಪ ಹಗರಟಗಿ, ಸಂಗಪ್ಪ ಕೋಟೆ, ಮುತ್ತಪ್ಪ ಬಡಿಗೇರ, ಧರ್ಮಣ್ಣ ಈರಗಾರ, ಶೈಲಪ್ಪ ವಾಗನಗೇರಿ, ಬಸವರಾಜ ವಾಗನಗೇರಿ, ಬಸವರಾಜ ಅಮ್ಮಿನಗಡೆ, ಚೋಳಪ್ಪ ಯಳ್ಳಿಗುತ್ತಿ, ಈರಪ್ಪ …

Read More »