Breaking News

ಜಿಲ್ಲೆ

ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಎಂದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕೆಎಸ್​ಡಿಎಲ್ ಸಂಸ್ಥೆಯ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್​ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡದ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ.ಪಾಟೀಲ್ ಕಿಡಿ ಕಾರಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಎರಡು …

Read More »

ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ….

ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ…ನೀರು ಕೊಯ್ಲು ವ್ಯವಸ್ಥೆ… 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ…. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆಗೆ ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ 19 ಲಕ್ಷ ರೂಪಾಯಿ ಅನುದಾನದಲ್ಲಿ ಸುಸಜ್ಜಿತ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆ ನಿರ್ಮಾಣಕ್ಕೆ ಉತ್ತರ …

Read More »

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ….

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ…. ನಿರಂತರ ಮಳೆಯಿಂದಾಗಿ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಮುಖ್ಯ ರಸ್ತೆಗಳು ಹಾಳಾಗಿದ್ದು ವಾಹನಸ್ವಾರರು ತೀವ್ರ ತೊಂದರೆ ಅನುಭವಿಹಿಸುವಂತಾಗಿದೆ. ತಗ್ಗು ಗುಂಡಿಗಳಿದ್ದರೂ ರಸ್ತೆಯನ್ನು ಹಲವಾರು ವರ್ಷಗಳಿಂದ ದುರಸ್ತಿಗೊಳಿಸುತ್ತಿಲ್ಲ ವಾಹನ ಸವಾರರು ತಗ್ಗು ಗುಂಡಿಗಳಲ್ಲೇ ಕುಂಟುತ್ತಾ ತೆವಳುತ್ತಾ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಸ್ವಲ್ಪ ಯಾಮಾರಿದ್ರೂ ಬೈಕ್ ಸವಾರರಿಗೆ ಭಾರಿ ಅನಾಹುತಗಳಾಗುತ್ತವೆ. ಕಳೆದ ಕಳೆದ 8 ವರ್ಷಗಳಿಂದ ದುರಸ್ಥಿ ಕಾಣದ ರಸ್ತೆಗಳಿಂದಾಗಿ …

Read More »

ದೇಶದೊಳಗೆ ನುಸುಳುಕೋರರು ಬರುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ : ಮಾಜಿ ಸಚಿವ ಕುಮಾರಬಂಗಾರಪ್ಪ

ರಾಯಚೂರು : ದೇಶದೊಳಗೆ ನುಸುಳುಕೋರರು ಬರುತ್ತಿರುವುದರ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಅದರ ಮಾಹಿತಿ ಸಂಗ್ರಹಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಮಾಜಿ ಸಚಿವ ಕುಮಾರಬಂಗಾರಪ್ಪ ಹೇಳಿದ್ದಾರೆ. ಮಾಜಿ ಸಂಸದ ಬಿ. ವಿ. ನಾಯಕ ಅವರ ನಿವಾಸದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಪರ ಭಾಷೆ ನಟಿ ತಮನ್ನಾ ಆಯ್ಕೆ ಮಾಡಿರುವ ವಿಚಾರ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಹ ಒಬ್ಬ ಕಲಾವಿದ. ಕಾಂಟ್ರಾಕ್ಟರ್ …

Read More »

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

ಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದರು. ನೀತಿ ಆಯೋಗದ ಸಭೆಗೆ ಸಿಎಂ ಹಾಗೂ ಸಂಬಂಧಿಸಿದವರು ಗೈರಾಗಿದ್ದ ವಿಚಾರವಾಗಿ ಭಾನುವಾರ ಮಾಧ್ಯಮಗಳಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದರು. ಸಭೆಗೆ ಗೈರಾಗಿದ್ದ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು. ಸಭೆಗೆ ಗೈರಾಗುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ತಮಿಳುನಾಡು ಸಿಎಂ …

Read More »

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ-ಯುವತಿಯರನ್ನು ವಶಕ್ಕೆ ಪಡೆದ ಪೊಲೀಸರು

ದೇವನಹಳ್ಳಿ(ಬೆಂಗಳೂರು ಗ್ರಾ.): ಇಲ್ಲಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಲಯ ಡಿಸಿಪಿ ವಿ.ಜೆ.ಸಜೀತ್ ಅವರು ಪ್ರತಿಕ್ರಿಯೆ ನೀಡಿದ್ದು, “NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ …

Read More »

ನನಗೆ ಮೈಸೂರು ಸ್ಯಾಂಡಲ್​ ಸೋಪ್​ ರಾಯಭಾರಿಯಾಗುವ ಆಸೆ ಇಲ್ಲ: ಯದುವೀರ್

ಮೈಸೂರು:‌ ಮೈಸೂರು ಸ್ಯಾಂಡಲ್ ಸೋಪಿಗೆ ನನಗೆ ವೈಯಕ್ತಿಕವಾಗಿ ರಾಯಭಾರಿಯಾಗುವ ಆಸೆ ಇಲ್ಲ ಎಂದು ರಾಜವಂಶಸ್ಥರು, ಬಿಜೆಪಿ ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. “ಮೈಸೂರು ಸ್ಯಾಂಡಲ್ ಸೋಪಿಗೆ ಸೂಕ್ತ ರಾಯಭಾರಿ ಎಂದರೆ ನಮ್ಮ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬ್ರ್ಯಾಂಡೂ ನಮ್ದೇ ಬ್ರ್ಯಾಂಡು ಅಂಬಾಸಿಡರು ನಮ್ಮವ್ರೇ ‘ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರವಾಗಿ, ನಗರದ ಖಾಸಗಿ ಹೋಟೆಲ್​ನಲ್ಲಿಂದು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು”ರಾಜಮನೆತನ ಕಮರ್ಷಿಯಲ್ ಆಗಿ …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ವಾಯುರೂಪದಲ್ಲಿ ಮತ್ತೆ ಬಾಧೆ! ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ

ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಎಂದರು. …

Read More »

ಮೂರು ವರ್ಷದ ಬಾಲಕನ ಕೊಲೆ, ಮಲತಂದೆ ಸೇರಿ ನಾಲ್ವರು ವಶಕ್ಕೆ

ಬೆಳಗಾವಿ: ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್​ ಮುಖೇಶ್​ ಮಾಂಜಿ(3) ಕೊಲೆಯಾದ ಬಾಲಕ. ಆತನ‌ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »