Breaking News

ಜಿಲ್ಲೆ

ಹತ್ತು ಸಾವಿರ ಲಂಚ ಸ್ವೀಕಾರ: ಮುಖ್ಯ ಪೇದೆಗೆ ವಿಧಿಸಿದ್ದ 7 ವರ್ಷ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು : ಬಾಕಿ ಇರುವ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 2017ರಲ್ಲಿ 10 ಸಾವಿರ ರು.ಗಳ ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ ಬಾಗಲಗುಂಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಎಂ.ಕೆ.ಮಂಜಣ್ಣ ಎಂಬುವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿದು ಆದೇಶಿಸಿದೆ. ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಲಂಚ ಪಡೆದಿದ್ದು ರುಜುವಾತಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಟ್ಟು 7 ವರ್ಷ ಶಿಕ್ಷೆ ಮತ್ತು 1 ಲಕ್ಷ ರು.ಗಳ ದಂಡದ ಆದೇಶವನ್ನು ರದ್ದುಗೊಳಿಸುವಂತೆ …

Read More »

ಇಂದು ಸಿಇಟಿ ಫಲಿತಾಂಶ ಪ್ರಕಟ; ಈ ಲಿಂಕ್​ಗಳ ಮೂಲಕ ಮಧ್ಯಾಹ್ನ 2 ಗಂಟೆ ಬಳಿಕ ರಿಸಲ್ಟ್ ನೋಡಿ

ಬೆಂಗಳೂರು: ಇಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶದ ವಿವರಗಳನ್ನು ಬಹಿರಂಗಗೊಳಿಸಲಿದ್ದಾರೆ. ಕೆಇಎ ಕಚೇರಿಯಲ್ಲಿ ಬೆಳಗ್ಗೆ ಕರೆಯಲಾದ ಮಾಧ್ಯಮ ಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರು ಸಿಇಟಿ ಪರೀಕ್ಷೆಯಲ್ಲಿ …

Read More »

ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ

ಬೆಳಗಾವಿ : ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದಗೃಹ ಸಚಿವರಿಗೆ ಮನವಿ ಕಾಮುಕರಿಗೆ ಕಠಿಣ ಶಿಕ್ಷೆ ನೀಡಲು ಪ್ರತ್ಯೇಕ ಕಾನೂನು ಜಾರಿಯಾಗಲಿ ಆಗ್ರಹ ಮಾಡಿದ ಡಿಎಸ್ಎಸ್ ಪ್ರತಿನಿಧಿಗಳು. ಬೆಂಗಳೂರಿನ ಬಿಡದಿ ಬಳಿ ಇರುವ ಬದ್ರಾಪುರದಲ್ಲಿ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿ …

Read More »

ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಮೂರನೇ ಆರೋಪಿ ಹಾಗೂ ರೆಸಾರ್ಟ್ ಸಂಚಾಲಕರ ಬಂಧನ…

ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಮೂರನೇ ಆರೋಪಿ ಹಾಗೂ ರೆಸಾರ್ಟ್ ಸಂಚಾಲಕರ ಬಂಧನ… ಬೆಳಗಾವಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂರನೇ ಆರೋಪಿ ಪರ ಜಿಲ್ಲೆಯ ಸಿಪಿಐ ಮಗ ಹಾಗೂ ರೆಸಾರ್ಟ್ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು. ಒಟ್ಟು ಆರೋಪಿಗಳ ಸಂಖ್ಯೆ 5 ಕ್ಕೇರಿದೆ. ಟಿಳಕವಾಡಿ ಪೊಲೀಸ್ ಠಾಣಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯೂ ಹೊರ ಜಿಲ್ಲೆಯ …

Read More »

ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ

ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ ಇಷ್ಟವಾದುದ್ದನ್ನೇ ಆಯ್ಕೆ ಮಾಡಿಕೊಂಡು ಸಾಧನೆ ಮಾಡುವಂತೆ ಕರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬರೆದ್ದಿದ್ದಕ್ಕಿಂತ ಕಡಿಮೆ ಅಂಕಗಳು ಬಂದ ಹಿನ್ನೆಲೆ ಮತ್ತೇ ಮರು ಮೌಲ್ಯಮಾಪನಕ್ಕೆ ಹಾಕಿ 624 ಅಂಕ ಪಡೆದ ಬೆಳಗಾವಿಯ ವಿದ್ಯಾರ್ಥಿನಿ ಸಂತಸವನ್ನು ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅವಕಾಶವಿದೆ. ಬೇರೆಯವರು ಹೇಳಿದ್ದನ್ನು ಆಯ್ಕೆ ಮಾಡಿಕೊಳ್ಳುವ ಬದಲೂ ತಮಗೆ ಇಷ್ಟವಾದುದ್ದನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡಬೇಕೆಂದು ಕರೆ …

Read More »

ತಂಗಿ ಮದುವೆಯ ಖರ್ಚಿಗಾಗಿ ಪಬ್​ಗೆ ನುಗ್ಗಿ 50 ಸಾವಿರ ಹಣವನ್ನು ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಾಮಿಟ್ರಿ ಬ್ರಿವರಿ ಅಂಡ್ ಕಿಚನ್ ಪಬ್​ಗೆ ನುಗ್ಗಿ 50 ಸಾವಿರ ರೂಪಾಯಿ ಕಳ್ಳತನ ಮಾಡಿ, ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ತಂಗಿ ಮದುವೆಗಾಗಿ ಹಣ ಹೊಂದಿಸಲು ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ಧಾರೆ. ಪಬ್​ನ ಭದ್ರತಾ ಸಿಬ್ಬಂದಿ ವಿನಯ್ ಕುಮಾರ್ ನೀಡಿದ ದೂರು ಆಧರಿಸಿ ಒಡಿಶಾ ಮೂಲದ ದಿಲೀಪ್ ಕುಮಾರ್ (29) ಎಂಬುವನನ್ನು ಬಂಧಿಸಿ 6 ಸಾವಿರ ನಗದು, …

Read More »

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ

ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …

Read More »

ಯಾರೇ ತಿಪ್ಪರಲಾಗ ಹಾಕಿದರು ಗೋಕಾಕ ಜಿಲ್ಲೆ ಆಗೇ ಆಗುತ್ತದೆ:ಈರಣ್ಣ ಕಡಾಡಿ

ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರು ಮುಂದೊAದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ …

Read More »

ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ

ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ ಹುಕ್ಕೇರಿ* : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು. ಪಟ್ಟಣದ ಹೊರವಲಯದ ಎಸ್.ಎಸ್.ಕನ್ವೆನ್ಷನ್ ಹಾಲ್‌ನಲ್ಲಿ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ …

Read More »