Breaking News

ಜಿಲ್ಲೆ

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ  ಕಾಂಗ್ರೆಸ್‌  ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್  ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಖಾನ್ ಅವರು ಇಂದು ಸಾದಿಕ್ ಪೈಲ್ವಾನ್ ಅವರನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಕರೆದುಕೊಂಡು ಬಂದಿದ್ದರು. ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ …

Read More »

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

ಕೋಲಾರ: ನಮಗೆ ಐಪಿಎಲ್‌ ಟಿಕೆಟ್‌ ಬೇಕು ಎಂದು ಕೇಳುವ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಕಿಡಿಕಾರಿದ್ದಾರೆ. ಕೋಲಾರದಲ್ಲಿ ಶ್ರೀರಾಮಸೇನೆ ಸಂಘಟನೆಯ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಿಯಾಯಿತಿ ಬೇಕು. ಮೀಸಲಾತಿ ಬೇಕು, ಟಿಕೆಟ್‌ ವೀಕ್ಷಿಸಲು ಮುಂದಿನ ವಿಐಪಿ ಚೇರ್ ಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸದನದಲ್ಲಿ ಅಯಾ ಕ್ಷೇತ್ರದ ಸಮಸ್ಯೆಗಳು, ನೀರಾವರಿ ಯೋಜನೆಗಳು, ಕೈಗಾರಿಕೆಗಳ ಬಗ್ಗೆ …

Read More »

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ  ನಡೆಯುತ್ತಿರುವ ಉಪಚುನಾವಣಾ  ಕಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಕಾಂಗ್ರೆಸ್  ಪಾಳಯಕ್ಕೆ ಸದ್ಯಕ್ಕೆ ನಿಟ್ಟುಸಿರು ಬಿಡುವ ಸುದ್ದಿ ಸಿಕ್ಕಿದೆ ಎನ್ನುವಷ್ಟರಲ್ಲೇ ಹೊಸ ತಲೆನೋವು ಶುರುವಾಗಿದೆ. ಬಂಡಾಯದ ಬಾವುಟ ಹಾರಿಸಿದ್ದ ಸಾಧಿಕ್ ಪೈಲ್ವಾನ್  ಕೊನೆಗೂ ಕಣದಿಂದ ಹಿಂದೆ ಸರಿದು ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಈ ನಿರ್ಧಾರ ಮುಸ್ಲಿಂ ಸಮುದಾಯದ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ನಮ್ಮನ್ನು ನಂಬಿಸಿ ಕೈಕೊಟ್ಟರಾ ಪೈಲ್ವಾನ್ …

Read More »

ಪ್ರಧಾನ ಮಂತ್ರಿ ನೇತೃತ್ವದಲ್ಲಿ ನಡೆಸಿದ ವಿಡಿಯೊ ಸಂವಾದದಲ್ಲಿ :-ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ

ವಿಧಾನ ಸೌಧ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ನಡುವೆ ನಡೆದ ಸಮನ್ವಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡು ನಿರ್ವಹಿಸಿದಾಗೆ ಈಗ ಯುದ್ದ ನಡೆಯುತ್ತಿರುವ ಪರಿಸ್ಥಿತಿಯನ್ನು ನಾವು ಎದುರಿಸಲು ಬದ್ದರಾಗಿದ್ದು ಯಾವುದೇ ಆತಂಕ …

Read More »

ಪೆಟ್ರೋಲ್ ಸುಂಕ ರೂ. 3ಕ್ಕೆ ಇಳಿಕೆ, ಡೀಸೆಲ್ ಮೇಲೆ ಈಗ ‘ಜೀರೋ’ ಟ್ಯಾಕ್ಸ್ – ನರೇಂದ್ರ ಮೋದಿಜಿ ಅವರಿಗೆ ನಾಗರಿಕರ ಪರವಾಗಿ ಕೃತಜ್ಞತೆಗಳು – ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ.ಗಳಿಂದ 3 ರೂ ಪ್ರತಿ ಲೀಟರ್‌ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ತೈಲ ಕಂಪನಿಗಳು ಈಗಾಗಲೇ ಪೆಟ್ರೋಲ್ ಮೇಲೆ 24 ರೂ ಪ್ರತಿ ಲೀಟರ್ ಮತ್ತು ಡೀಸೆಲ್ ಮೇಲೆ 30 ರೂ ಪ್ರತಿ ಲೀಟರ್ ಗೆ ನಷ್ಟವನ್ನು ಭರಿಸುತ್ತಿವೆ. ಭಾರತ ಸರ್ಕಾರ ಆ ಹೊರೆಯನ್ನು ತನ್ನದೇ ಆದ ತೆರಿಗೆ ಆದಾಯದ …

Read More »

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

ಬೆಂಗಳೂರು: ದಾವಣಗೆರೆಯಲ್ಲಿ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು ಸಾಧಿಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡುವಾಗ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುತ್ತವೆಯೇ ಎಂದು ಕೇಳಿದಾಗ, ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಬೇರೆ ಸಮುದಾಯಗಳೂ ಆಗುವುದಿಲ್ಲ. ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಅವರ ಮೊಮ್ಮಗ ಸಮರ್ಥ್  ಗೆಲ್ಲುತ್ತಾರೆ. ಅವರು ಸಾಕಿದಂತಹ ಮಗ. ಗೆಲ್ಲುತ್ತಾನೆ ಎನ್ನುವ ವಿಶ್ವಾಸವಿದೆ. ಇಡೀ ರಾಜ್ಯ ನೋಡುವಂತೆ ಆ …

Read More »

ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ (Prisoners) ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ ಎಂಬಂತೆ ಕಾರಾಗೃಹದಲ್ಲಿ ಘಟನೆಯೊಂದು ನಡೆದಿದೆ. ಕೈದಿಗಳಿಗೆ‌ ವಾರ್ಡರ್‌ಗಳೇ  ನಿಷೇಧಿತ ತಂಬಾಕು ಉತ್ಪನ್ನಗಳನ್ನ ಪೂರೈಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡ ಜೈಲಿನಲ್ಲಿ  ನಿಷೇಧಿತ ಉತ್ಪನ್ನಗಳ ಪೂರೈಕೆ ಹಿಂದೆ ಬೇರೆ ಯಾರೂ ಇಲ್ಲ, ಇದೇ ಕಾರಾಗೃಹದ ವಾರ್ಡರ್‌ಗಳೇ ಇದ್ದಾರೆ ಎಂಬುದು ಕುತೂಹಲಕಾರಿ …

Read More »

ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸುಯಾ ಅವಿನಾಶ್ ಆಕಡೆ (26) ಮೃತ ದುರ್ದೈವಿ. ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ನನ್ನ ಪ್ರೀತಿಸಿ ಮದುವೆಯಾಗಿದ್ದಳು. ಎರಡು ತಿಂಗಳ ಹಿಂದೆ ಅನುಸುಯಾ-ಅವಿನಾಶ್ ಮದುವೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ನೇರವೇರಿತ್ತು. ಮದುವೆಯಾದ ಬಳಿಕ ಗಂಡನ ಜೊತೆ ಹಳ್ಳಿಯಲ್ಲಿ ಇರುವುದಕ್ಕೆ ಅನುಸುಯಾ ಬೇಸರ ಮಾಡಿಕೊಂಡಿದ್ದಳು. ಅನುಸುಯಾಳ ಮೂವರು ಸಹೋದರಿಯರು ಗಂಡನ …

Read More »

ಬಿಜೆಪಿಯಿಂದ ಗ್ರಾಮೀಣದಲ್ಲಿ ಭರ್ಜರಿ ಪ್ರಚಾರ

ಬಾಗಲಕೋಟೆ: ಮತಕ್ಷೇತ್ರದ ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಅವರಿಂದ ಭರ್ಜರಿ ಪ್ರಚಾರ ಮಾಡಿ ಮತಯಾಚನೆ ಮಾಡಿದರು. ಮತಕ್ಷೆತ್ರದ ಸುತಗುಂಡಾರ, ನಾಯನೇಗಲಿ, ನಾಯನೇಗಲಿ ಎಲ್.ಟ, ಮದುವಿನಕೊಪ್ಪ, ಚಿಟಗಿನಕೊಪ್ಪ, ದೇವಲಾಪುರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ಸೇರಿ ಮಾತನಾಡಿದ ಅವರಿ ಗ್ರಾಮೀಣ ಭಾಗದಲ್ಲಿ ತಮ್ಮ ಅವಧಿಯಲ್ಲಿ ಆದಂತಹ ನೂತನ ಶಾಲೆಗೆಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಿದ್ಯುತ್ ಕೇಂದ್ರಗಳು, ಡಿಜಿಟಲ್ ಗ್ರಂಥಾಲಯ, ಜಲಜೀವನ ಮೀಷನ ಅಡಿಯಲ್ಲಿ ಕುಡಿಯುವ ನೀರು, ಕಾಂಕ್ರೆಟ್ ರಸ್ತೆ ಸಮುದಾಯಭವನಳು …

Read More »

 ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಮೂರು ವರ್ಷ ಜೈಲು ಶಿಕ್ಷೆ

ಬೆಳಗಾವಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಗಣೇಶಪುರ ಲಕ್ಷ್ಮೀ ನಗರದ ಸಚಿನ ಕಾಕತ್ಕರ್ (30)ಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಚಿನ, 2022ರ ಮಾ.8ರಂದು ಬಾಲಕಿ ಎದುರು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಪ್ರಕರಣದ ವಿಚಾರಣೆ ನಡೆಸಿ, ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ …

Read More »