Breaking News
Home / ಜಿಲ್ಲೆ (page 18)

ಜಿಲ್ಲೆ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ ನಲ್ಲಿ ಶಾಲಾ ಲಾಗಿನ್‌ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ …

Read More »

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಎರಡು ದಿನ‌ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ವಿಧಾನ ಪರಿಷತ್​ನಲ್ಲಿ ಎರಡು ದಿನ‌ ಮೀಸಲಿಡುವುದರ ಜೊತೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರ ಜೊತೆಗೆ ಅಧಿವೇಶನ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮೊದಲ ವಾರದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ …

Read More »

ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …

Read More »

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ.

ಹಾವೇರಿ: ಸೋಮವಾರ ಸಂಜೆ ಹಾವೇರಿ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ನಿಧಾನವಾಗಿ ಆರಂಭವಾದ ಮಳೆ ನಂತರ ತೀವ್ರತೆ ಪಡೆಯಿತು. ಸುಮಾರು ಗಂಟೆಗೂ ಅಧಿಕ ಕಾಲ ಸುರಿದ ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಮಳೆಯ ರಭಸಕ್ಕೆ ಚರಂಡಿಗಳೆಲ್ಲ ತುಂಬಿ ಚರಂಡಿಯ ನೀರು ತ್ಯಾಜ್ಯ ರಸ್ತೆಗಳ ಮೇಲೆ ಬಂದು ನಿಂತಿತು. ರೈಲು ನಿಲ್ದಾಣದ ಬಳಿ ಇರುವ ಅಂಡರ್​​ ಬ್ರಿಡ್ಜ್‌ನಲ್ಲಿ ಮಳೆ ನೀರು ನಿಂತು ಕೆಲಕಾಲ ರಸ್ತೆ ಸಂಚಾರ ಸಹ ಸ್ಥಗಿತವಾಗಿತ್ತು. ವಾಹನ …

Read More »

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು …

Read More »

ಪೊಲೀಸರ ದಾಳಿ: ಜೂಜಾಟದಲ್ಲಿ ತೊಡಗಿದ್ದ 70 ಮಂದಿ ಬಂಧನ

ಬೈಲಹೊಂಗಲ ಪಟ್ಟದ ಲಾಡ್ಜ್​ವೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದ ಹಲವರನ್ನು ಬಂಧಿಸುವಲ್ಲಿ ಬೆಳಗಾವಿಯ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.   ಬೆಳಗಾವಿ: ಜಿಲ್ಲಾ ಸಿಇಎನ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ರಾಜಾರೋಷವಾಗಿ ನಡೆಸುತ್ತಿದ್ದ ಅಂದರ್ ಬಾಹರ್ ಜೂಜು ಅಡ್ಡೆ ಮೇಲೆ ದಾಳಿ ಮಾಡಿ 70 ಮಂದಿಯನ್ನು ಬಂಧಿಸಲಾಗಿದೆ. ಬೈಲಹೊಂಗಲ ಪಟ್ಟಣದ ಸಂಸ್ಕೃತ ಬಾರ್ ಆಂಡ್ ಲಾಡ್ಜ್​ನಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ (ಭಾನುವಾರ) ರಾತ್ರಿ ದಾಳಿ ಮಾಡಿದ ಸಿಇಎನ್ ಇನ್ಸ್​ಪೆಕ್ಟರ್​​ ಬಿ.ಆರ್.ಗಡ್ಡೇಕರ …

Read More »

“ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ..:C.M.

ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್​ ಸಹ ಇದ್ದರು. ತುಮಕೂರಿನಲ್ಲಿ ಸಚಿವ ಕೆ ಎನ್​ ರಾಜಣ್ಣ ಅವರು, ಜಿ ಪರಮೇಶ್ವರ್​​ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್​ ಸಿಎಂ …

Read More »

ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯ

ಬೆಳಗಾವಿ: ಅಭಿವೃದ್ಧಿ ಸೇರಿ ಮತ್ತಿತರ ವಿಚಾರದಲ್ಲಿ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ‌ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹೌದು, ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. …

Read More »

ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗೋಕಾಕದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಗೋಕಾಕ : ನಗರದಲ್ಲಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದರು. ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ನಗರದ ಕೊಳವಿ ಹಣಮಂತ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆದಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ, ಮಹರ್ಷಿ ವಾಲ್ಮೀಕಿಯವರ, ಡಾ. ಬಿ ಆರ್ ಅಂಬೇಡ್ಕರ್ ಅವರ, ಛತ್ರಪತಿ …

Read More »

ಬೆಳಗಾವಿಯ ರಾಜ್ಯೋತ್ಸವದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತವಾಗಿದೆ.

ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಬುಧವಾರ ಅದ್ಧೂರಿ ರಾಜ್ಯೋತ್ಸವ ಆಚರಣೆ ನಡೆಯಿತು. ಈ ಉತ್ಸವದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ಖುಷಿಯ ಸಂದರ್ಭದಲ್ಲಿ ದುರಾದೃಷ್ಟಕರ ಘಟನೆಯೂ ವರದಿಯಾಗಿದೆ. ಮೆರವಣಿಗೆ ಬಳಿಕ ರಾತ್ರಿ 15 ಕಡೆ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಎರಡು ಕಡೆಯ ಇಬ್ಬರಿಗೆ ಚೂರಿ ಇರಿತವಾಗಿರುವ ಘಟನೆ ಕೂಡ‌ ನಡೆದಿದೆ. ಚನ್ನಮ್ಮ ವೃತ್ತದ ಬಳಿಯ ರಸ್ತೆಯಲ್ಲಿ ನಡೆದ ಗಲಾಟೆಯಲ್ಲಿ ಚಿಕ್ಕೋಡಿ ತಾಲೂಕಿನ …

Read More »