ಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಕರೆದೊಯ್ದರೂ ಫಲಿಸದ ಚಿಕಿತ್ಸೆ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. …
Read More »ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಎಗರಿಸಿದ್ದ ಖದಿಮರು ಪೊಲೀಸರ ವಶಕ್ಕೆ.
ದಾವಣಗೆರೆ: ಆರೋಪಿಗಳು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಶಶಿಕಲಾ ಎಂಬವರ ಹಣಕಾಸಿನ ಸಮಸ್ಯೆ ಅರಿತು ಪೂಜೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಹೋಗಿದ್ದರು. ಸಂಜೆ 4 ರಿಂದ 6 ಗಂಟೆ ವೇಳೆಗೆ ಪೂಜೆ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಪೂಜೆ ವೇಳೆ ಚಿನ್ನಾಭರಣ ಹಾಗೂ ನಗದು ಇಡುವಂತೆ ಹೇಳಿದ್ದರು. ಅವರು ಹೇಳಿದಂತೆ ಶಶಿಕಲಾ ಹಾಗೂ ಆಕೆಯ ಕುಟುಂಬಸ್ಥರು ಪೂಜೆ ವೇಳೆ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಇರಿಸಿದ್ದರು. ಈ ವೇಳೆ …
Read More »ದಿನ ಬೆಳಗಾದರೆ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ; ಡಿ.ಕೆ.ಶಿವಕುಮಾರ್
ಬೆಂಗಳೂರು: “ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನ ಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿಯೇ ಪ್ರತಿಕ್ರಿಯಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಉತ್ತರಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಸಭೆ, …
Read More »ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!
ಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಫಾರ್ಮಾಕ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ …
Read More »ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ
ತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ ಇದರಿಂದ ಒಳಿತಾಗುವುದಿಲ್ಲ …
Read More »ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ; ಕಲಿಕಾ ಹಬ್ಬ.
ಬೆಳಗಾವಿ : ವಿದ್ಯಾರ್ಥಿಗಳು ವಿವಿಧ ಆಟ ಹಾಗೂ ವಿಜ್ಞಾನ ಪ್ರದರ್ಶನದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕೂಡಾ ಆಚರಿಸಲಾಯಿತು. ಬೆಳಗಾವಿ ಜಿಲ್ಲಾ ಮಾಹೇಶ್ವರಿ ಅಂಧರ ಸೇವಾ ಸಂಸ್ಥೆಯ ಮಕ್ಕಳ ಶಾಲೆ ಹಾಗೂ ವಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ರಾಷ್ಟ್ರೀಯ ವಿಜ್ಞಾನ ಮಹತ್ವ ಹಾಗೂ ವಿಷನ್ ಎಂಪವರ್ ಕಾರ್ಯವೈಖರಿ ಬಗ್ಗೆ ರಾಜೇಶ್ವರಿ ಪಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷರಾದ ವಾದಿರಾಜ ಕಲಘಟಗಿ ಮುಖ್ಯ ಅತಿಥಿಗಳಾದ ರವಿ ಭಜಂತ್ರಿ,ಸಂಸ್ಥೆಯ ಕಾರ್ಯದರ್ಶಿಗಳಾದ ಚಿಂತಾಮಣಿ, …
Read More »ಡಿ.ಕೆ.ಶಿ ಗೆ ವಿರೋಧವಿಲ್ಲ…ಎಲ್ಲರೂ ಒಂದೇ ಪಕ್ಷದಲ್ಲಿದ್ದೇವೆ ನಿವೃತ್ತಿಯಾದರೂ ಸಿದ್ಧರಾಮಯ್ಯ ಪಕ್ಷಕ್ಕೆ ಬೇಕೆಬೇಕು; ಸಚಿವ ಸತೀಶ ಜಾರಕಿಹೊಳಿ
ಬೆಂಗಳೂರು: ಡಿ.ಕೆ. ಶಿವಕುಮಾರ ಅವರಿಗೆ ವಿರೋಧವೆಂದಿನೂ ಇಲ್ಲ. ನಾವು ನಮ್ಮ ಹಕ್ಕುಗಳನ್ನು ಕೇಳಿದ್ದೇವೆ. ನಾವೆಲ್ಲರೂ ಒಂದೇ ಪಕ್ಷದಲ್ಲಿದ್ದೇವೆ. ಸಿಎಂ ಸಿದ್ಧರಾಮಯ್ಯನವರ ಕೊಡುಗೆ ಕಾಂಗ್ರೆಸಗೆ ಅಪಾರವಾಗಿದ್ದು, ಒಂದು ವೇಳೆ ನಿವೃತ್ತಿಯಾದರೂ ಕೂಡ ಪಕ್ಷಕ್ಕೆ ಅವರ ಮಾರ್ಗದರ್ಶನ ಅತ್ಯವಶ್ಯಕವೆಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ಧರಾಮಯ್ಯನವರು ನಮಗೆ ಬೇಕೆ ಬೇಕು. ಒಂದು ವೇಳೆ ಅವರು ರಾಜಕೀಯ ನಿವೃತ್ತಿಯಾದರೂ …
Read More »ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.
ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ ಮತ್ತು ಸಂತ ಸೇವಾಲಾಲ್ ಮಹಾರಾಜ್ ಸಂಘದ ಅಧ್ಯಕ್ಷ ಯಮನಪ್ಪ ರಾಠೋಡ್ ಅವರು ಈ ಸಂದರ್ಭದಲ್ಲಿ ಬಾಲಬ್ರಮ್ಮಚಾರಿಗಳು, ಪವಾಡ ಪುರುಷರು , ಬಂಜಾರ ಕುಲಗುರು , ಸಾಮಾಜಿಕ ಹರಿಕಾರಕರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ ಕುರಿತು ಗೌರವ ಪೂರ್ವಕ ನುಡಿಗಳು ಉಪಸ್ಥಿತ ಪಡಿಸಿದರು.ಈ ಸಂದರ್ಭದಲ್ಲಿ …
Read More »ಜಿಮ್ ಬಂಪರ್ ;ಬಿಯಾಂಡ್ ಬೆಂಗಳೂರು ಪ್ರದೇಶದಲ್ಲಿ ಶೇ 75ರಷ್ಟು ಹೂಡಿಕೆ ; ಉತ್ತರ ಕರ್ನಾಟಕಕ್ಕೆ ಹರಿದ ಶೇ.45ರಷ್ಟು ಬಂಡವಾಳ
ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ …
Read More »ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ಈಶ್ವರ ಬಿ ಖಂಡ್ರೆ ನಡೆಸಲು ಸೂಚನೆ
ಬೆಂಗಳೂರು : ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್ ಮೂಲಕ ಸಭೆ ನಡೆಸಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು. …
Read More »
Laxmi News 24×7