Breaking News

ಜಿಲ್ಲೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಶ್ರೀ ಮಾರುತೇಶ್ವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು, ಬಿಗ್‌ಬಾಸ್ -11ರ ಸ್ಪರ್ಧಿ- ಜಗದೀಶ್ ನಡುವೆ ಗಲಾಟೆ ; ದೂರು – ಪ್ರತಿದೂರು ದಾಖಲು

ಬೆಂಗಳೂರು : ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು ಹಾಗೂ ಬಿಗ್‌ಬಾಸ್ -11ರ ಸ್ಪರ್ಧಿ ಹಾಗೂ ವಕೀಲ ಜಗದೀಶ್ ನಡುವೆ ಗಲಾಟೆಯಾಗಿದ್ದು, ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಕೊಡಿಗೇಹಳ್ಳಿಯ ವಿರೂಪಾಕ್ಷನಗರದಲ್ಲಿ ಲಾಯರ್ ಜಗದೀಶ್‌ಗೆ ಸೇರಿರುವ ಕಾಂಪ್ಲೆೆಕ್ಸ್ ಇದ್ದು, ಅದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿ ಕೂರಿಸಲು ಪೆಂಡಾಲ್ ಹಾಕಿದ್ದಾರೆ. ಅದಕ್ಕೆ ಆಕ್ಷೇಪಿಸಿದ ಜಗದೀಶ್, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. …

Read More »

ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ:C.M.

ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು. ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ : ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು …

Read More »

ಫೈನಾನ್ಸ್‌ಗಳ ಹಾವಳಿಗೆ ಮೊದಲ ಬಲಿ.

ಬೆಳಗಾವಿ:  ಜಿಲ್ಲೆಯ ಕಾಕತಿ ಸಮೀಪದ ದಾಬಾ ಬಳಿ ಫೈನಾನ್ಸ್‌ ಸಂಸ್ಥೆಗಳ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಬಾವಿಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದಿದ್ದ ಸರೋಜಾ, ಸಬ್ಸಿಡಿ ಯೋಜನೆಯ ಅಸರೆಗಾಗಿ ಸಾಲದ ಅರ್ಧ ಹಣವನ್ನು ಯಮನಾಪುರದ ಹೊಳೆಪ್ಪ ದಡ್ಡಿ ಎಂಬ ವ್ಯಕ್ತಿಗೆ ನೀಡಿದ್ದರು. ಎಲ್ಲ ಕಂತು ತಾನೇ ಪಾವತಿಸುವ ಭರವಸೆ ನೀಡಿದ್ದ ಹೊಳೆಪ್ಪ ಮೋಸಮಾಡಿದ …

Read More »

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಿ – ರಮೇಶ ಕತ್ತಿ.

ಹುಕ್ಕೇರಿ : ಜನೇವರಿ 25 ರಂದು ಹುಕ್ಕೇರಿ ನಗರದಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳ ಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಅವರು ಕಾರ್ಯಕ್ರಮ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿ ನಡೆಸಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡುತ್ತಾ ಬಹುದಿನಗಳ ಬೇಡಿಕೆ ಯಾದ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಜನೇವರಿ 25 ರಂದು ಜರುಗಲಿದ್ದು ಕಾರಣ ತಾಲೂಕಿನ ಜನತೆ …

Read More »

ಮಶೀನ್ ಟೂಲ್ ತಯಾರಿಕೆಯಲ್ಲಿ ರಾಜ್ಯದ ಸಾಧನೆ ದೊಡ್ಡದು: ಎಂ ಬಿ ಪಾಟೀಲ.

ಬೆಂಗಳೂರು: ದೇಶದ ಮಶೀನ್ ಟೂಲ್ ಉತ್ಪಾದನೆಯಲ್ಲಿ ರಾಜ್ಯವು ಶೇಕಡ 52ರಷ್ಟು ಪಾಲು ಹೊಂದಿದ್ದು, ತಯಾರಿಕೆ ವಲಯದಲ್ಲಿ ಕರ್ನಾಟಕವು ನಾವೀನ್ಯತೆ ಮತ್ತು ಉತ್ಕೃಷ್ಟತೆಗಳಿಗೆ ಇನ್ನೊಂದು ಹೆಸರಾಗಿದೆ. ಹೀಗಾಗಿ, ಸರಕಾರವು ಇವುಗಳ ಬಲವರ್ಧನೆಗೆ ನಿರ್ದಿಷ್ಟ ವಿಷನ್ ಗ್ರೂಪ್ ರಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಏರ್ಪಾಡಾಗಿರುವ ಮಶೀನ್ ಟೂಲ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಾಣಿಜ್ಯ ಪ್ರದರ್ಶನದ ಮೇಳ ಇಮ್ಟೆಕ್ಸ್-2025ರ …

Read More »

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು.

ಮೈಸೂರು ; ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದು ಉದಾರಿಯಾಗಿದ್ದಾರೆ. ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಣ್ಣು, ಹೃದಯ, ಕಿಡ್ನಿ ದಾನ ಮಾಡುವ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಮೈಸೂರಿನ ರಿಂಗ್ ರಸ್ತೆಯಲ್ಲಿ ಐದು ದಿನಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್, ಖಾಸಗಿ …

Read More »

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ; ಸಿಎಂ ಭರವಸೆ

ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ …

Read More »

ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.

ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

Read More »

ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ

ಬೆಂಗಳೂರು: ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ …

Read More »