ಬಂಟ್ವಾಳ: ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ನಲ್ಲಿ ಆಗಮಿಸಿದ ತಂಡ …
Read More »ಸರ್ಕಾರದ ವಿರುದ್ಧ ಕುಂದಾನಗರಿ ಜನರ ಆಕ್ರೋಶ
ಬೆಳಗಾವಿ : ಕೆಎಸ್ಆರ್ಟಿಸಿ ದರ ಪರಿಷ್ಕರಣೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದೆಡೆ ಮಹಿಳೆಯರಿಗೆ ಉಚಿತ ಬಸ್ ಭಾಗ್ಯ ನೀಡಿ, ಮತ್ತೊಂದೆಡೆ ಪುರುಷರಿಗೆ ಶೇ.15 ರಷ್ಟು ದರ ಏರಿಸುವ ಮೂಲಕ ನಮ್ಮ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರದ ನೀತಿ ಹೇಗಿದೆ ಎಂದರೆ?- ಜನ ಹೇಳೋದು ಹೀಗೆ: ಈ ಬಗ್ಗೆ ಶೀಗಿಹಳ್ಳಿ ಗ್ರಾಮದ ಬಾಳೇಶ ಎಂಬುವವರು ಈಟಿವಿ ಭಾರತದೊಂದಿಗೆ ಮಾತನಾಡಿ, ”ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ …
Read More »ಹೆಬ್ಬಾಳಕರ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಸತೀಶ್ ಜಾರಕಿಹೊಳಿ
ಹೆಬ್ಬಾಳಕರ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ನನ್ನ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗಾಗಿ ಕಳೆದ ಆರು ತಿಂಗಳ ಹಿಂದೆಯೇ ಎಲ್ಲರೂ ಸಹಮತದಿಂದ ಒಂದೇ ಹೆಸರು ಕಳಿಸಿದ್ದೇವೆ. ಶೀಘ್ರವೇ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಶತಮಾನೋತ್ಸವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು. ಎಲ್ಲರೂ ತಮ್ಮ ತಮ್ಮ ಕೆಲಸ ಮಾಡಿದ್ದಾರೆ. ನಮಗೆ ಜನರನ್ನು ಸೇರಿಸುವ …
Read More »KLE ಕ್ಯಾನ್ಸರ್ ಆಸ್ಪತ್ರೆಗೆ 8 ಕೋಟಿ ರೂ. ದೇಣಿಗೆ
ಬೆಳಗಾವಿ : ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯು ಅತ್ಯಾಧುನಿಕ ಸೌಲಭ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಅಮೆರಿಕದಲ್ಲಿ ನೆಲೆಸಿರುವ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ವೈದ್ಯರೊಬ್ಬರು 8 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಹೆಸರನ್ನೇ ಇಟ್ಟಿರುವ ಆ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ ಸಂಪತ್ ಕುಮಾರ್. ಸದಾ ತಾಯ್ನಾಡಿಗೆ ಏನಾದರು ಮಾಡಬೇಕು ಎನ್ನುವ ಅವರಲ್ಲಿನ ತುಡಿತ ಈಗ ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ …
Read More »ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ
ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಹೊಸ ವರ್ಷದ ಆರಂಭದಲ್ಲೇ ಶಾಕ್ ನೀಡಿದ ಸರ್ಕಾರ 4 ನಿಗಮಗಳಿಂದ ಸಲ್ಲಿಸಲಾಗಿತ್ತು ದರ ಏರಿಕೆಗೆ ಪ್ರಸ್ತಾವ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ …
Read More »ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. …
Read More »ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ನಿಧನ; ತೀವ್ರ ಸಂತಾಪ ವ್ಯಕ್ತಪಡಿಸಿದ ಕೆ.ಎಫ್.ಎಂ.ಎ
ಬೆಂಗಳೂರು : ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದ್ದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ. …
Read More »ಮಾಜಿ ಪ್ರಿಯಕರನಿಗೆ ಚಾಕು ಇರಿತ; ಮನುಕುಮಾರ್ ಅಂದರ್
ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ …
Read More »ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಆರೋಪ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು;ಹೈಕೋರ್ಟ್
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸುಮಾರು 103 ಎಕರೆ ಅರಣ್ಯ ಭೂಮಿಯ ಪೋಡಿಗೆ ಶಿಫಾರಸು ಮಾಡಿದ್ದ ಭೂ ದಾಖಲೆಗಳ ಜಂಟಿ ನಿರ್ದೇಶಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಜಂಟಿ ನಿರ್ದೇಶಕ ಇ.ಪ್ರಕಾಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ …
Read More »ಸರ್ಕಾರದ ಅನುಮತಿ ಸಿಕ್ಕ ನಂತರ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಪರೀ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ನಿಗಮಗಳು ಸೇರಿದಂತೆ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಕೋರಿಕೆ ಸಲ್ಲಿಕೆಯಾಗಿದೆ. ಸರ್ಕಾರದ ಅಂತಿಮ ಒಪ್ಪಿಗೆ ದೊರೆತ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, …
Read More »
Laxmi News 24×7