ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲವಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು. ಮಹಿಳಾ ಮತ್ತು ಮಕ್ಕಳ …
Read More »ಪತಿ ಹಾಗೂ ಅವರ ಮನೆಯವರ ಕಿರುಕುಳಕ್ಕೆ ಬೆಸತ್ತು ಗೃಹಿಣಿ ಆತ್ಮಹತ್ಯೆ.
ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ …
Read More »ಮೃತಪಟ್ಟ ಗರ್ಭಿಣಿ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಪತಿ
ಹುಬ್ಬಳ್ಳಿ: ಗರ್ಭಿಣಿ ಪತ್ನಿ ಮೃತಪಟ್ಟ ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಧಿಕಾ(19) ಮೃತಪಟ್ಟಿರುವ ಗರ್ಭಿಣಿ. ಈಕೆಯ ಪತಿ ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದವರು. ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲೇ 8 ತಿಂಗಳ ಭ್ರೂಣ ಸಾವನ್ನಪ್ಪಿದ್ದ ಕಾರಣ ರಾಧಿಕಾ ಆರೋಗ್ಯದಲ್ಲಿ ತೀವ್ರವಾಗಿ …
Read More »ರಾಜ್ಯದಲ್ಲಿ ವರ್ಷದ ಮೊದಲ ದಿನವೇ ಮತ್ತೋರ್ವ ಬಾಣಂತಿ ಡೆತ್.
ರಾಯಚೂರು: ರಾಜ್ಯದಲ್ಲಿ ಹೊಸ ವರ್ಷದ ಮೊದಲ ದಿನವೇ ಮತ್ತೋರ್ವ ಬಾಣಂತಿ ಮೃತರಾಗಿದ್ದಾರೆ. ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಹಾಗೂ ಶಿಶು ಚಿಕಿತ್ಸೆಗೆ ಸ್ಫಂದಿಸದೇ ಮೃತಪಟ್ಟ ಘಟನೆ ಇಲ್ಲಿನ ರಿಮ್ಸ್ (ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಾಪೂರ ಗ್ರಾಮದ ಶಿವಲಿಂಗಮ್ಮ (22) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚೊಚ್ಚಲ ಹೆರಿಗೆಯ ಸಮಯದಲ್ಲಿಯೇ ಬಾಣಂತಿ ಸಾವನ್ನಪ್ಪಿದ್ದಾರೆ. ಅವರನ್ನು ಮಾನವಿ ಆಸ್ಪತ್ರೆಯಿಂದ ಡಿಸೆಂಬರ್ …
Read More »ನಿಮ್ಮ ಸಹಕಾರ ಹೆಚ್ಚು ಬೇಕು ; ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಸಿ.ಎಂ ಕರೆ;
ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ …
Read More »120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ; 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳು
ಹಾವೇರಿ: ಪ್ರತಿಯೊಬ್ಬರಿಗೂ ಒಂದೊಂದು ಹವ್ಯಾಸ ಇರುತ್ತದೆ. ಕೆಲವರಿಗೆ ಹಳೆಯ ಕಾರ್ಗಳ ಸಂಗ್ರಹದ ಹವ್ಯಾಸ, ಇನ್ನು ಕೆಲವರಿಗೆ ಅಂಚೆ ಚೀಟಿ ಸಂಗ್ರಹಿಸುವ ಹವ್ಯಾಸ ಇರುತ್ತದೆ. ಆದರೆ, ಹಾವೇರಿಯಲ್ಲೊಬ್ಬ ವಿಶಿಷ್ಟ ಹವ್ಯಾಸವಿರುವ ಯುವಕನೊಬ್ಬನಿದ್ದಾನೆ. ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ …
Read More »ಬೆಳಗಾವಿಯಲ್ಲಿ ಎಸ್.ಸಿ/ಎಸ್ಟಿ ದೌರ್ಜನ್ಯ ನಿಯಂತ್ರಣ ಸಭೆ…ಸ್ಮಶಾನಭೂಮಿ ಒದಗಿಸಿ…ಪೌರ ಕಾರ್ಮಿಕರಿಗೆ ಭದ್ರತೆ ನೀಡಿ.
ಬೆಳಗಾವಿ :ಬೆಳಗಾವಿಯಲ್ಲಿಂದು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು 1995, 17 ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಇಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು 1995, 17 ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಪರಿಶಿಷ್ಟ ಜಾತಿ …
Read More »ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾರ್ಯ; ನಗರಸೇವಕ ಹಣಮಂತ ಕೊಂಗಾಲಿ ಚಾಲನೆ
ಬೆಳಗಾವಿ :ನಗರದ ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ನಗರಸೇವಕ ಹಣಮಂತ ಕೊಂಗಾಲಿ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ನಗರದ ವಾರ್ಡ್ ನಂಬರ್ 46 ವ್ಯಾಪ್ತಿಯಲ್ಲಿ ಬರುವ ರಾಮತೀರ್ಥ ನಗರ ಕೆ.ಎಚ್.ಬಿ ಕಾಲನಿ, ಕಣಬರಗಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸೇವಕ ಹಣಮಂತ ಕೊಂಗಾಲಿಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಮಳಗಲಿ, ಪಾಟೀಲ್, ಚೌಗಲಾ ,ಬಡಿಗೇರ್, ವಿಜಯ ಬ್ಯಾಡಗಿ, ಮೂಲಿಮನಿ, ಬೆಳಗಲಿ, ವನ್ನೂರು,ಮನೋಜ್, ಇನ್ನುಳಿದವರು ಉಪಸ್ಥಿತರಿದ್ಧರು.
Read More »ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ನೀಡಿ; ಶ್ರೀರಾಮಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ
ಬೆಳಗಾವಿ: ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ನೀಡಿ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ಹಾಗೂ ಕೊಲೆ ಸಂಚು ರೂಪಿಸಿದ ವ್ಯಕ್ತಿಯನ್ನು ಬಂಧಿಸಬೇಕು ಹಾಗೂ ಷಡ್ಯಂತ್ರದ ರುವಾರಿ ಸಚಿವ ಪ್ರಿಯಾಂಕಾ ಖರ್ಗೆ ಅವರ ಪಿ.ಎ. ಆಗಿದ್ದು, ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಬೆಳಗಾವಿಯ ಶ್ರೀರಾಮಸೇನೆ ಆಗ್ರಹಿಸಿದೆ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ಹಾಗೂ …
Read More »ಬೆಳಗಾವಿಯಲ್ಲಿಂದು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ “ದೌರ್ಜನ್ಯ ನಿಯಂತ್ರಣ”ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರ ರೀತ್ಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿಸಲಾಯಿತು. ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಸಮಿತಿ …
Read More »
Laxmi News 24×7