ಬಾಗಲಕೋಟೆ ಉಪಚುನಾವಣೆ ಗೆಲ್ಲಲು ಕೆಪಿಸಿಸಿ ಕಳುಹಿಸಿದ 41 ಲಕ್ಷ ರೂಪಾಯಿ ಮಾಧ್ಯಮ ನಿರ್ವಹಣೆಯ ಹಣ ಈಗ ಅಬಕಾರಿ ಸಚಿವರ ಆಪ್ತ ‘ಡೀಲ್ ಮಾಸ್ಟರ್’ ಪತ್ರಕರ್ತನ ಪಾಲಾಗಿದೆಯೇ? ರಾತ್ರೋರಾತ್ರಿ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ, ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾದ ಬಲಪಂಥೀಯ ಪತ್ರಕರ್ತರಿಗೆ ಮಾತ್ರ ಲಕ್ಷಾಂತರ ರೂಪಾಯಿ ಹಂಚಿದ ಈ ‘ಬಾರ್ ಮಾಲೀಕ’ ಪತ್ರಕರ್ತನ ಅಸಲಿ ಮುಖವಾಡ ಈಗ ಕಳಚಿದೆ! ಸಂಜೆಯಾಗುತ್ತಿದ್ದಂತೆ ಮಿನಿಸ್ಟರ್ ಜೊತೆ ಪೆಗ್ ಏರಿಸುವ ಈ ಆಪ್ತ ಪತ್ರಕರ್ತ, ಅಲ್ಪಸಂಖ್ಯಾತ, …
Read More »ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಇದಕ್ಕೆ ರಾಜ್ಯ ಸರ್ಕಾರ ಅಲ್ಲಗಳೆದಿದೆ. ಈ …
Read More »ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ
ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ …
Read More »ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ
ಬೀದರ್: ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದು ಗ್ರಾಮದ ಜನರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ. ಆಂಬುಲೆನ್ಸ್ ಮೂಲಕ …
Read More »ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್
ಧಾರವಾಡ: ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್‌ನ್ನು ಪೊಲೀಸರು ಬಂಧಿಸಿದ್ದಾರೆ. ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್‌ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ. ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್‌ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್‌ಗೆ …
Read More »ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್ : ರಮೇಶ್ ಜಾರಕಿಹೊಳಿ
ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್‌ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರುತ್ತಾರೆ ಎಂದು ಅಥಣಿಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಮರಳಿ ಬಿಜೆಪಿಗೆ (BJP) ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದು ಭವಿಷ್ಯ ನುಡಿದರು. …
Read More »ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ
ದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಎರಡೂ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಇಂದು ಬಹಿರಂಗ ಪ್ರಚಾರ ಅಂತ್ಯಕ್ಕೂ ಮುನ್ನ ಕೊನೆಯ ದಿನದ ಕಸರತ್ತು ನಡೆಸಿದ್ರು. ನಾಳೆ ಸಂಜೆಯವರೆಗೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎರಡೂ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಭರ್ಜರಿ ಮತಯಾಚನೆ …
Read More »ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು
ಬೆಳಗಾವಿ: ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ. ಮಧುರಾ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ …
Read More »ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್
ಮೈಸೂರು: ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಸಿಎಂ ಬದಲಾವಣೆ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. 2013ರಲ್ಲಿ …
Read More »ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ದಾವಣಗೆರೆ: ಸಿದ್ದರಾಮಯ್ಯ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Byelection) ಪ್ರಚಾರ ಮುಗಿಸಿ ಬೆಂಗಳೂರಿಗೆ ಹೋದ್ರೆ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದರು. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಸೋಲುವ ಭೀತಿ ಕಾಡುತ್ತಿದೆ. ಹಿಂದೂಗಳ ಮತಕ್ಕೆ 7000 ರೂ., ಮುಸ್ಲಿಮರ ಮತಕ್ಕೆ 10,000 ರೂ. ದರ ನಿಗದಿ ಮಾಡಲಾಗಿದೆ …
Read More »
Laxmi News 24×7