Breaking News

ಜಿಲ್ಲೆ

ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ. ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ …

Read More »

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿ 2021ರಲ್ಲಿ ಆರಂಭವಾಗಿತ್ತು. ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ …

Read More »

ವೈಭವಯುತ ‘ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …

Read More »

ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್‌ ಹಾಗೂ ರಂಜಿತ್‌ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ. ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ …

Read More »

ಅಕ್ಟೋಬರ್‌ 21ರಿಂದ ನವೆಂಬರ್ 20ರ ವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಕಾರ್ಯಕ್ರಮ

ಬೆಳಗಾವಿ: ಜಿಲ್ಲೆಯಲ್ಲಿ ಅಕ್ಟೋಬರ್‌ 21ರಿಂದ ನವೆಂಬರ್ 20ರ ವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ರಾಜೀವ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ನಡೆದ ಲಸಿಕಾಕರಣದ ಜಿಲ್ಲಾ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.   ‘ಜಿಲ್ಲೆಯಾದ್ಯಂತ ಲಸಿಕೆದಾರರು ಮಾಲೀಕರ ಮನೆ- ಮನೆಗಳಿಗೆ ತೆರಳಿ ಜಾನುವಾರಗಳಿಗೆ ಲಸಿಕೆಯನ್ನು ಉಚಿತವಾಗಿ ಹಾಕಲಿದ್ದಾರೆ. 20ನೇ …

Read More »

ನೇತ್ರ ತಪಾಸಣಾ ಶಿಬಿರ

ರಾಮದುರ್ಗ: ರಾಮದುರ್ಗದ ಅಂಧತ್ವ ನಿವಾರಣ ಸಂಸ್ಥೆ, ಗುರು ಮಹಿಪತಿರಾವ್‌ ನೇತ್ರ ಸೇವಾ ಸಂಸ್ಥೆ, ಹುಬ್ಬಳ್ಳಿಯ ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ರಾಮದುರ್ಗದ ಸಾರ್ವಜನಿಕ ಆಸ್ಪತ್ರೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಅ.19 ರಂದು ಬೆಳಿಗ್ಗೆ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರವನ್ನು ಇಲ್ಲಿನ ಪ್ಯಾರಿಬಾಯಿ ಪಾಲರೇಶಾ ಕಣ್ಣಿನ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.   ಅಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರ ತನಕ ತಪಾಸಣೆ ನಡೆಸಿ, ಅಗತ್ಯ …

Read More »

ಮಹಾರಾಷ್ಟ್ರ ಚುನಾವಣೆ: ಬೆಳಗಾವಿಯಲ್ಲಿ ದಾಖಲೆ ಇಲ್ಲದ ₹2.73 ಕೋಟಿ ಹಣ ವಶ

ಬೆಳಗಾವಿ: ದಾಖಲೆಗಳಿಲ್ಲದೇ ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ₹2.73 ಕೋಟಿ ಹಣವನ್ನು ಬೆಳಗಾವಿ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್‌ ವಾಹನದಲ್ಲಿ ಈ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್‌ ಆಯುಕ್ತಾಲಯಕ್ಕೆ ದೊರೆತಿತ್ತು. ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಮಾರ್ಗದರ್ಶನದಲ್ಲಿ, ಸಿಸಿಬಿ ಇನ್‌ಸ್ಪೆಕ್ಟರ್‌ ನಂದೀಶ್ವರ ಕುಂಬಾರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್‌ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೋರ್ಡ್‌ ಪರೀಕ್ಷೆ ಬದಲು ಸಂಕಲಾತ್ಮಕ ಮೌಲ್ಯಮಾಪನ (ಎಸ್‌ಎ-2)ವನ್ನು 5, 8 ಹಾಗೂ 9ನೇ ತರಗತಿ ಮಾಡ ಲಾಗುವುದು. 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು …

Read More »

ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.   ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು. …

Read More »