ಚಿಕ್ಕೋಡಿ: ‘ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …
Read More »ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …
Read More »ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ
ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ …
Read More »ಪೊಲೀಸರ ಹೆಸರಿನಲ್ಲಿ ಸ್ವಾಮೀಜಿಗೆ ₹1 ಕೋಟಿ ವಂಚನೆ
ಬಾಗಲಕೋಟೆ: ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿಗೆ ಉನ್ನತ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ₹1 ಕೋಟಿ ವಂಚನೆ ಮಾಡಲಾಗಿದೆ. ಜೆಡಿಎಸ್ ಮುಖಂಡ ಪ್ರಕಾಶ ಮುಧೋಳ ಎನ್ನುವವರು ಡಿವೈಎಸ್‌ಪಿ ಹೆಸರಿನಲ್ಲಿ, ಇಬ್ಬೊಬ್ಬರು ಎಡಿಜಿಪಿ ಹೆಸರಿನಲ್ಲಿ ರಾಮಾರೂಢ ಮಠದ ಪರಮಹಂಸ ಪರಮರಾಮರೂಢ ಸ್ವಾಮೀಜಿಗೆ ಕರೆ ಮಾಡಿ, ಗೃಹ ಸಚಿವರ ಕಚೇರಿಯಿಂದ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ. ಅವುಗಳನ್ನು ವಿಚಾರಣೆ ಮಾಡಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ. ಜೈಲಿಗೆ ಕಳುಹಿಸುತ್ತೇವೆ …
Read More »ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ.
ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಅದು ಯಾವುದೇ ಕೆಲಸವಿರಲಿ. ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆಯು ಈಗಲೂ ನಮ್ಮ ಪೂರ್ವಜರಲ್ಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಏಕದಂತ ಉತ್ಸವ ಸಮೀತಿಯಿಂದ ಜರುಗಿದ ಮೂಡಲಗಿ ಮಹಾರಾಜ ಗಣೇಶನ …
Read More »3 ವರ್ಷದ ಬಾಲಕಿಯ ಅಪಹರಣ,ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ
ಬೆಳಗಾವಿ ಜಿಲ್ಲೆಯ ಹಾರೂಗೇರಿಯಲ್ಲಿ 7 ವರ್ಷಗಳ ಹಿಂದೆ ನಡೆದಿದ್ದ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ತನಿಖಾ ಅಂತಿಮ ಹಂತ ತಲುಪಿದ್ದು, ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. 2017ರ ಸೆಪ್ಟೆಂಬರ್ 21ರಂದು, ಕುರುಬಗೋಡಿ ಹಾರೂಗೇರಿಯ ನಿವಾಸಿ ಸುಧಾ ಅಪ್ಪಾಸಾಬ ಸಣ್ಣಕ್ಕಿ ಅವರು ತಮ್ಮ 3 ವರ್ಷದ ಮಗಳ ನಾಪತ್ತೆ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …
Read More »ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು?
ಬೆಳಗಾವಿ, ಸೆಪ್ಟೆಂಬರ್ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ …
Read More »ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ
ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಈಶ್ವರಪ್ಪ ಅವರನ್ನು ಪಕ್ಷದಿಂದ ಹೊರಹಾಕಿದ್ದು ರಾಷ್ಟ್ರೀಯ ನಾಯಕರು. ಸೇರಿಸಿಕೊಳ್ಳಬೇಕಾದವರೂ ಅವರೇ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ‘ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ನಾವೆಲ್ಲ ಸೇರಿದ್ದು ನಿಜ. ಆದರೆ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿಯ ಬೇಡಿಕೆ ಕುರಿತು …
Read More »ಸೈಬರ್ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು ವರ್ಷಗಳಿಂದ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ‘ಸೈಬರ್ ಕ್ರೈಂ ಅವೇರ್‌ನೆಸ್ ಟೀಮ್ ಚಿಕ್ಕೋಡಿ’ ಎಂಬ ಹೆಸರಿನಲ್ಲಿ ಎಂಟು ಯುವಕರು ತಂಡ ಉಚಿತವಾಗಿ ಡಿಜಿಟಲ್ ಸಾಕ್ಷರತೆ ನಡೆಸಿದೆ. 2020ರಲ್ಲಿ ರಚನೆಯಾದ ತಂಡವು ಈವರೆಗೆ 3,700ಕ್ಕೂ ಹೆಚ್ಚು ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಗೆ ನೆರವಾಗಿದೆ. 2,500 ‘ಲೋನ್ ಆಯಪ್’ ವಂಚನೆ ಪ್ರಕರಣ, 1,000 ವಿಡಿಯೊ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದಾಸನಹಟ್ಟಿ ಗ್ರಾಮದ ಶ್ರೀ ಬಂಡೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »
Laxmi News 24×7