ಬೆಳಗಾವಿ: ನಗರದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ‘ವಿಘ್ನ ನಿವಾರಕ’ನನ್ನು ಸ್ವಾಗತಿಸಲು ಜನರಷ್ಟೇ ಅಲ್ಲ; ಗುಂಡಿಗಳೂ ಸಜ್ಜಾಗಿವೆ. ಮುಂಬೈ, ಪುಣೆ ಬಿಟ್ಟರೆ ಸಂಭ್ರಮದ ಚೌತಿ ವೀಕ್ಷಣೆಗೆ ಜನರು ಮುಖಮಾಡುವುದೇ ಬೆಳಗಾವಿಯತ್ತ. ಗಣೇಶೋತ್ಸವದಲ್ಲಿ ಇಲ್ಲಿ 11 ದಿನಗಳ ಕಾಲ ಸಡಗರವೇ ಮೈದಳೆಯುತ್ತದೆ. ನಗರ ಮತ್ತು ಉಪನಗರ ವ್ಯಾಪ್ತಿಯಲ್ಲಿ 370ಕ್ಕೂ ಅಧಿಕ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಮೊದಲ ದಿನದಂದು ಮೆರವಣಿಗೆಯಲ್ಲಿ ಗಣೇಶನ ಮೂರ್ತಿ ತಂದು ಪ್ರತಿಷ್ಠಾಪಿಸುತ್ತಾರೆ. ವಿಸರ್ಜನಾ ಮೆರವಣಿಗೆಯೂ …
Read More »ಹುಕ್ಕೇರಿ: ಉದ್ಘಾಟನೆಗೆ ಸಜ್ಜಾದ ‘ಸುವರ್ಣ ಕರ್ನಾಟಕ ಭವನ’
ಹುಕ್ಕೇರಿ: ಇಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸರ್ಕಾರಿ ಕಾರ್ಯಕ್ರಮ ಆಯೋಜಿಸಲು ಸುಸಜ್ಜಿತ ಸಭಾಂಗಣ ಹುಡುಕುವುದೇ ಸಂಘಟಕರು ಹಾಗೂ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಇನ್ಮುಂದೆ ಆ ಕೊರತೆ ನೀಗಲಿದೆ. ಅನಿವಾರ್ಯವಾಗಿ ಅವರು ಖಾಸಗಿ ಸಭಾಂಗಣಗಳತ್ತ ಮುಖಮಾಡುವುದು ತಪ್ಪಲಿದೆ. ಪಟ್ಟಣದ ಹೊರವಲಯದ ಕ್ಯಾರಗುಡ್ಡದ ಕಾಲೇಜು ಕ್ಯಾಂಪಸ್ ಬಳಿ ತಲೆ ಎತ್ತಿರುವ ‘ಪ್ರಾದೇಶಿಕ ಸುವರ್ಣ ಕರ್ನಾಟಕ ಭವನ’ ಉದ್ಘಾಟನೆಗೆ ಸಜ್ಜಾಗಿದ್ದು, ಶೀಘ್ರವೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಹುಕ್ಕೇರಿಗೆ ಮಂಜೂರಾಗಿದ್ದ ಈ ಭವನದ ನಿರ್ಮಾಣಕ್ಕೆ …
Read More »ಸವದತ್ತಿ: 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ
ಸವದತ್ತಿ: ಇಲ್ಲಿನ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಜರುಗಿತು. ಪಿಐ ಧರ್ಮಾಕರ ಧರ್ಮಟ್ಟಿ ಮಾತನಾಡಿ, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಮಾತ್ರವಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಧರ್ಮಸ್ಥಳ ಸಂಘ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲಾಘನೀಯ. ತಾಲ್ಲೂಕಿನ 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಿ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾದರಿಯಾಗಿದೆ ಎಂದರು. ವೇದಿಕೆಯಲ್ಲಿ 99 ಮಂದಿ …
Read More »ನಿಪ್ಪಾಣಿ ನಗರಸಭೆ: ಮತ್ತೆ ಬಿಜೆಪಿ ಮೇಲುಗೈ
ನಿಪ್ಪಾಣಿ: ಸ್ಥಳೀಯ ನಗರಸಭೆಯ ಎರಡನೇಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆದು ಈ ಅವಧಿಯಲ್ಲೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಪಕ್ಷದ ಸೋನಲ್ ಕೋಠಡಿಯಾ ಅಧ್ಯಕ್ಷರಾಗಿ ಹಾಗೂ ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಬಹುಮತಗಳಿಂದ ಆಯ್ಕೆಯಾದರು. ಇಬ್ಬರೂ ತಲಾ 17 ಮತಗಳನ್ನು ಪಡೆದು ವಿರೋಧಿ ಬಣದ ಶರದ ಪವಾರ ಗುಂಪು ಎನ್‍ಸಿಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ …
Read More »ಸಿಎಂ ವಿರುದ್ದ ಆರೋಪ ಮಾಡಿದ ಬಿಜೆಪಿಯವರು ಪಶ್ಚಾತಾಪ ಪಡಲಿದ್ದಾರೆ: ಎಂ.ಬಿ.ಪಾಟೀಲ
ಬೆಳಗಾವಿ: ಮುಡಾ ಪ್ರಕರಣದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಬಿಜೆಪಿ (BJP) ನಾಯಕರಿಗೆ ಸದ್ಯದಲ್ಲೇ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಬರಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (M.B Patil) ಭವಿಷ್ಯ ನುಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಕೆಲ ಬಿಜೆಪಿ ನಾಯಕರೇ ಇದನ್ನು ಹೇಳಿದ್ದಾರೆ. ಹೀಗಾಗಿ ಬಿಜೆಪಿ …
Read More »ಸಮುದಾಯದ ಹೋರಾಟಕ್ಕೆ ಶಾಸಕರು, ಸರ್ಕಾರ ಬೆಂಬಲಿಸುತ್ತಿಲ್ಲ: ಬಸವಜಯಶ್ರೀ
ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ 7ನೇ ಹಂತದ ಹೋರಾಟಕ್ಕಾಗಿ ಸೆ.22 ರಂದು ಬೆಳಗಾವಿಯಲ್ಲಿ ವಕೀಲರ ಸಭೆ ಆಯೋಜಿಸಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರುವರೆ ವರ್ಷದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸಿದ್ದೇವೆ. ಭವಿಷ್ಯದಲ್ಲಿ ನಮ್ಮ ಹೋರಾಟ ತೀವ್ರತೆ ಪಡೆಯಲಿದೆ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ …
Read More »ರೈತರ ಪಹಣಿ ಜೊತೆ ಆಧಾರ ಲಿಂಕ್, ಹಿಂಡಲಗಾ ಗ್ರಾಮ ಆಡಳಿತ ಅಧಿಕಾರಿ ಕಾರ್ಯಕ್ಕೆ ಗ್ರಾಮಸ್ಥರ ಶ್ಲಾಘನೆ…
ಬೆಳಗಾವಿ: ರಾಜ್ಯ ಸರಕಾರ ನೂತನ ವಾಗಿ ಪ್ರಾರಂಭ ಮಾ ಡಿರುವ ಪಹಣಿ ಜೊತೆ ಆಧಾರ ಲಿಂಕ ಮಾಡುವ ಯೋಜನೆಗೆ ರಾಜ್ಯದ ಎಲ್ಲ ಕಡೆ ಪ್ರಶಂಸೆ ಸಿಗುತ್ತಿದೆ ಅದೇರೀತಿ ಹಿಂಡಾಲಗಾ ಗ್ರಾಮ ಪಂಚಾಯತಿ ವ್ಯಾಪ್ತಿ ಯಲ್ಲಿ ಬರುವ ಗ್ರಾಮ ಗಳಾದ, ಹಿಂಡಲಗಾ, ಗಣೇಶ್ ಪುರ, ಬೆನಕನ ಹಳ್ಳಿ, ಸಾವ ಗಾಂವ, ಈ ಒಂದು ಗ್ರಾಮ ಗಳಲ್ಲಿ ಪಹಣಿ ಗೆ (ಉತಾರ) ಆಧಾರ ಕಾರ್ಡ್ ಜೋಡಣೆ ಕಾರ್ಯ ವೇಗ ದಿಂದ ಸಾಗಿ ದೆ, …
Read More »ಬಿಜೆಪಿ ಸದಸ್ಯ ಅಪಹರಣ; ಮೂವರ ಮೇಲೆ ಪ್ರಕರಣ
ಚನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಗರಾಜ ತಂದೆ ಬಸವರಾಜ ಈ …
Read More »ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ನಮಗೆ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ’ ಎಂದು ಹೇಳಿದರು. ‘ಕಾಂಗ್ರೆಸ್ ಎಂದೆಂದಿಗೂ ಬಡವರ …
Read More »ಹಿಂಡಲಗಾ ಜೈಲು ಸೇರಿದ ದರ್ಶನ್ ಸಹಚರ ಪ್ರದೂಶ್
ಬೆಳಗಾವಿ: ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು ಗುರುವಾರ ಮಧ್ಯಾಹ್ನ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು. ಪ್ರಕರಣ 14ನೇ ಆರೋಪಿ ಪ್ರದೂಶ್ ಬ್ಲ್ಯಾಂಕೆಟ್ ಹಾಗೂ ಬ್ಯಾಗ್ ಸಮೇತ ಬಂದು ಜೈಲು ಸೇರಿದರು. ಭದ್ರತಾ ಸಿಬ್ಬಂದಿ ಅರೋಪಿಯ ಬ್ಯಾಗನ್ನು ಸಂಪೂರ್ಣ ಜಾಲಾಡಿದರು. ಬ್ಲ್ಯಾಂಕೆಟ್ ಅನ್ನು ಒಳಗೆ ತೆಗೆದುಕೊಂಡು ಹೋಗಲು ನಿರಾಕರಿಸಿದರು. ಬ್ಯಾಗಿನಲ್ಲಿ ಔಷಧಿ ಬಾಟಲಿ ಇದ್ದು, ವೈದ್ಯರ ಸಲಹೆ ಮೇರೆಗೆ ಕೊಡುತ್ತೇವೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.
Read More »
Laxmi News 24×7