Breaking News

ಜಿಲ್ಲೆ

ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ

78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …

Read More »

ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್. 78 ಕುರಿಗಳು ಸಜೀವ ದಹನ

ಮುಂಡಗೋಡ: ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ. ಕಲಘಟಗಿ ರಸ್ತೆಯಲ್ಲಿರುವ ನಜೀರ ಅಹ್ಮದ ದರ್ಗಾವಾಲೆ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು. ಇವರು ತಮ್ಮ ತೋಟದಲ್ಲಿ ಕುರಿ ಸಾಕಾಣಿಕೆ ಮಾಡಿದ್ದರು. ಬೆಳಿಗ್ಗೆಯಿಂದ ತೋಟದಲ್ಲಿ ಇದ್ದು ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಯ ಕಡೆ ಹೋಗಿದ್ದಾರೆ. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ …

Read More »

ಇಂದಿನಿಂದ ಗೇಟ್ ಅಳವಡಿಕೆ ಕೆಲಸ ಆರಂಭ,

ಬೆಂಗಳೂರು, ಆಗಸ್ಟ್ 14: ಕೊಪ್ಪಳದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಕಟ್ಟಾಗಿ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಯಿತು. ಈ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಇಂದು ಬುಧವಾರದಿಂದ ಜಲಾಶಯಕ್ಕೆಂದೆ ಸಿದ್ದಪಡಿಸಲಾದ ಗೇಟ್‌ಗಳನ್ನು ಅಳವಡಿಸುವ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದರು. ತುಂಗಭದ್ರಾ ಜಲಾಶಯದ ಗೇಟ್ ಕೊಚ್ಚಿ ಹೋದ ಬಳಿಕ ಇತರ ಗೇಟ್‌ಗಳ ಮೇಲೆ …

Read More »

ಬೈಲಹೊಂಗಲ ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ

ಬೈಲಹೊಂಗಲ: ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ. ಮಬನೂರ ಗ್ರಾಮದ ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21), ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಚ್ಚಿ(28) ಬಂಧಿತ ಆರೋಪಿಗಳು. ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Read More »

ಮುಡಾ’ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ.   ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ …

Read More »

ವಿದ್ಯಾರ್ಥಿಗಳ ಬದುಕಿಗೆ ‘ನಿರ್ಮಾಣ’ ಆಸರೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರು ಗ್ರಾಮದಲ್ಲಿ 15-20 ಜನ ಯುವಕ-ಯುವತಿಯರ ಗುಂಪು ಸೇರಿ ಸ್ಥಾಪಿಸಿದ ಉಚಿತ ಗ್ರಂಥಾಲಯ ಹಲವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಗೊಳ್ಳಲು ಸಹಕಾರಿಯಾಗಿದೆ. ಕಳೆದ 6 ವರ್ಷಗಳ ಹಿಂದೆ ಸ್ಥಾಪಿಸಿದ ಉಚಿತ ಗ್ರಂಥಾಲಯ ಸೇವೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುಕೂಲವಾಗುತ್ತಿದೆ. ಪ್ರತಿ ದಿನವೂ ಗ್ರಂಥಾಲಯದಲ್ಲಿ ಓದಬಹುದು. ಮನೆಗೆ ಪುಸ್ತಕಗಳನ್ನು ಎರವಲು ಪಡೆದು ಓದಬಹುದಾಗಿದೆ. ಆದರೆ ಎಲ್ಲವೂ ಇಲ್ಲಿ ಉಚಿತ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಬೇಕೆಂಬ ಕಾರಣದಿಂದ ಸ್ಪರ್ಧಾತ್ಮಕ …

Read More »

160ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾಳಜಿ ಕೇಂದ್ರಗಳಲ್ಲಿ ಆಶ್ರಯ

ಗೋಕಾಕ: ಇಲ್ಲಿನ ಹಳೆ ದನಗಳ ಪೇಟೆ, ದಾಳಂಬ್ರಿ ತೋಟ, ಮಟನ್ ಮಾರ್ಕೆಟ್, ಉಪ್ಪಾರ ಓಣಿ, ಬೋಜಗರ ಓಣಿ, ಕುಂಬಾರ ಓಣಿ, ಡೋರ ಗಲ್ಲಿ ಮುಂತಾದ ಪ್ರದೇಶಗಳ ಪ್ರತಿ ವರ್ಷ ಘಟಪ್ರಭೆ ಪ್ರವಾಹದಲ್ಲಿ ಮುಳುಗುತ್ತವೆ. ಮಹರ್ಷಿ ಭಗಿರಥ ಸರ್ಕಲ್‌ ಅಂತೂ ಮೊದಲ ಮಳೆಗೇ ಜಲಾವೃತವಾಗುತ್ತದೆ. ಮೂರು ತಲೆಮಾರುಗಳಿಂದಲೂ ಜನ ಒಂದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ನೆರೆ ಬಂದಾಗ ಜನಜೀವನ ಮಾತ್ರ ಅಸ್ತವ್ಯಸ್ತ ಆಗುವುದಿಲ್ಲ. ಇಲ್ಲಿನ ಶಾಲೆ- ಕಾಲೇಜು ಮಕ್ಕಳ ಶಿಕ್ಷಣದ ಮೇಲೂ …

Read More »

ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …

Read More »

ಬಾಲಕಿಯರ ಮೆಟ್ರಿಕ್‌ ನಂತರದ ಹಾಸ್ಟೆಲ್‌ ಕಟ್ಟಡದ ಉದ್ಘಾಟನೆ ಯಾವಾಗ?

ಚಿಕ್ಕೋಡಿ: ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಗಿದು ಒಂದು ವರ್ಷ ಕಳೆದಿದೆ. ಆದರೆ, ಅದಕ್ಕೆ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. 1997ರಲ್ಲಿ ಚಿಕ್ಕೋಡಿಗೆ ಈ ವಸತಿ ನಿಲಯ ಮಂಜೂರಾಯಿತು. ಅಂದಿನಿಂದಲೂ ಪಟ್ಟಣದಲ್ಲಿ ಬೇರೆ ಬೇರೆ ಬಾಡಿಗೆ ಕಟ್ಟಡಗಳಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಅಲ್ಲಿ ದಾಖಲಾಗುವ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಲು ಸರಿಯಾಗಿ ಬಸ್‌ …

Read More »

‘KSRTC’ಗೆ ಮತ್ತೊಂದು ಗರಿಮೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಈಗಾಗಲೇ ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ರಾಜ್ಯದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿರುವಂತ ನಿಗಮಕ್ಕೆ, ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ 2024 ಅನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ನಿಗಮದವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆ.ಎಸ್.ಆರ್.ಟಿ.ಸಿ ಗೆ ಟಿವಿ-9 ನೆಟ್ವರ್ಕ್‌ ನ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024 …

Read More »