Breaking News

ಜಿಲ್ಲೆ

ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮ ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷಗಳಿಗೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಪ್ರವೇಶಕ್ಕೆ 4 ವರ್ಷ, ಯುಕೆಜಿಗೆ 5 ವರ್ಷ ಕನಿಷ್ಠ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಒಂದು‌ ಕಳಂಕ;ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …

Read More »

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »

ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ

ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅವುಗಳನ್ನ ಜಾರಿಗೆ ತಂದು ನಿರ್ವಹಣೆ ಮಾಡುವುದು ಚುನಾವಣೆಗೂ ಮುಂಚೆ ಹೇಳಿದಷ್ಟು ಸುಲಭವಾಗಿಲ್ಲ. ಕಾಂಗ್ರೆಸ್​ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊಕ್ಕೆ ಬಿದ್ದಿದೆ. ಇದನ್ನ ಹೀಗಾಗಲೇ ಸ್ವತಃ ಕಾಂಗ್ರೆಸ್​ ನಾಯಕರೇ ಒಪ್ಪಿಕೊಂಡಿದ್ದಾರೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರೇ (Basavaraj Rayareddy) ಗ್ಯಾರಂಟಿ ಯೋಜನೆಯಿರುವುದರಿಂದ ಅಭಿವೃದ್ಧಿ …

Read More »

ಕೋತಿ ಕಚ್ಚಿ 8 ಮಂದಿಗೆ ಗಾಯ

ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು. ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.   ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ನಕಲಿ ವೈದ್ಯರ 12 ಚಿಕಿತ್ಸಾ ಕೇಂದ್ರಗಳಿಗೆ ಬೀಗ

ಬಾಗಲಕೋಟೆ: ಜಿಲ್ಲೆಯ ವಿವಿಧೆಡೆ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು 12 ನಕಲಿ ವೈದ್ಯರ ಚಿಕಿತ್ಸಾ ಕೇಂದ್ರಗಳಿಗೆ ಬೀಗ ಜಡಿದಿದ್ದಾರೆ. ‘ಮುಧೋಳ ತಾಲ್ಲೂಕಿನ ಬೆಳಗಲಿ, ಮಹಾಲಿಂಗಪುರ, ತೇರದಾಳದ ಎರಡು ಚಿಕಿತ್ಸಾ ಕೇಂದ್ರ, ಬೀಳಗಿ ತಾಲ್ಲೂಕಿನ ಮೂರು, ಬಾದಾಮಿ ತಾಲ್ಲೂಕಿನ ಒಂದು, ಬಾಗಲಕೋಟೆಯಲ್ಲಿ ಎರಡು, ಹುನಗುಂದ ಎರಡು ಚಿಕಿತ್ಸಾ ಕೇಂದ್ರ ಬಂದ್ ಮಾಡಲಾಗಿದೆ. ಒಟ್ಟು 32 ಕಡೆ ಕಾರ್ಯಾಚರಣೆ ನಡೆಸಲಾಯಿತು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ …

Read More »

ಅಥಣಿ ಬಿಜೆಪಿ ಲೀಡ್ ಪಡೆದಿದ್ದು ಖುಷಿ ಸಂಗತಿ ; ಸವದಿ ವಿರುದ್ಧ ಸಾಹುಕಾರ್ ಪರೋಕ್ಷ ವಾಗ್ದಾಳಿ

ಅಥಣಿ : ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಪಕ್ಷಕ್ಕೆ ಅಥಣಿ ಜನ ಲೀಡ್ ಕೊಟ್ಟಿದ್ದು ಖುಷಿ ವಿಚಾರ. ನಮ್ಮವರು ಒಳ್ಳೆಯ ಕೆಲಸ ಮಾಡುವ ಮೂಲಕ‌ ಕಾಂಗ್ರೆಸ್ ಲೀಡ್ ಕಡಿಮೆ ಮಾಡಿ ಬಿಜೆಪಿಗೆ ಹೆಚ್ಚಿಸಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕಾಲೆಳೆದರು. ಬಿಜೆಪಿ ಕಾರ್ಯಕರ್ತರ ಭೇಟಿ ಹಿನ್ನಲೆಯಲ್ಲಿ ಅಥಣಿ ಪಟ್ಟಣಕ್ಕೆ ಆಗಮಿಸಿದ ರಮೇಶ ಜಾರಕಿಹೊಳಿ ಮಾತನಾಡಿ. ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಲೀಡ್ ಕಳೆದುಕೊಂಡಿಟ್ಟು …

Read More »

ವಧು-ವರರ ಸಮಾವೇಶ 20ರಂದು

ಗೋಕಾಕ: ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಅಂಗವಾಗಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ಜುಲೈ 20ರಂದು ಏರ್ಪಡಿಸಲಾಗಿದೆ. ಎಂದು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ನಾವಲಗಿ ತಿಳಿಸಿದ್ದಾರೆ.   ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜುಲೈ 18ರ ಒಳಗೆ ಹೆಸರು ನೋಂದಾಯಿಸಬೇಕು. …

Read More »

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು‌. ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ. ಸ್ಥಳೀಯ ಪೊಲೀಸರಿಗೂ …

Read More »

ರಾಯಚೂರು: ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಆಗ್ರಹ

ರಾಯಚೂರು: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ ಕಟ್ಟಡಗಳನ್ನು ತಕ್ಷಣ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಲಿಂಗಸುಗೂರು ತಾಲ್ಲೂಕಿನ ಅನ್ವರಿ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ರಾಯಚೂರಿನ ಅರಸಿಗೇರ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು …

Read More »