Breaking News

ಜಿಲ್ಲೆ

ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ.   ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …

Read More »

ತಾಳಿಕೋಟೆಯ ಖಾಸ್ಗತೇಶ್ವರ ಮಠದ ಅದ್ಧೂರಿ ರಥೋತ್ಸವ

ವಿಜಯಪುರ: ಜಿಲ್ಲೆಯ ಐತಿಹಾಸಿಕ ನಗರಿ ತಾಳಿಕೋಟೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಖಾಸ್ಗತೇಶ್ವರ ಅಜ್ಜನ ಜಾತ್ರೆ ವಿಜೃಂಭಣೆಯಿಂದ ಜರುಗಿತು. ರಾಜ್ಯ, ಹೊರರಾಜ್ಯ ಸೇರಿದಂತೆ ಲಕ್ಷಾಂತರ ಭಕ್ತರನ್ನ ಹೊಂದಿರುವ ಈ ಖಾಸ್ಗತೇಶ್ವರ ಮಠದ ಜಾತ್ರೆ ಇಲ್ಲಿನ ವಿರಕ್ತ ಮಹಾಸ್ವಾಮಿಗಳ ಆಶೀರ್ವಾದದಿಂದ ಶ್ರೀ ಸಿದ್ದಲಿಂಗ ದೇವರು ಇವರ ಅಧ್ಯಕ್ಷತೆಯಲ್ಲಿ ಜಾತ್ರೆಯನ್ನ ಮಠದ ಭಕ್ತರು ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಜಾತ್ರೆಯ ಅಂಗವಾಗಿ ಕಳೆದೊಂದು ವಾರದಿಂದ ಮಠದ ಅಂಗಳದಲ್ಲಿ ಮತ್ತು ತಾಳಿಕೋಟೆಯಲ್ಲಿ ವಿವಿಧ ಧಾರ್ಮಿಕ ಹಾಗೂ …

Read More »

ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು ಮಾಡುವ ಬಗ್ಗೆ ಮಾತನಾಡಿಕೊಂಡಿದ್ದೇವೆ. ಜು.3 ಅಥವಾ 4ನೇ ತಾರೀಖು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ ಸಂಗ್ರಹ ಎಂಬ ಮಾಜಿ ಸಿಎಂ ಹೆಚ್‌. ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿ, ಕುಮಾರಸ್ವಾಮಿ ಅವರು ಕೂಡ ಸರ್ಕಾರ ನಡೆಸಿದಂತ …

Read More »

ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರ ದಾಳಿ

ಚಿಕ್ಕೋಡಿ (ಬೆಳಗಾವಿ): ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರು ದಾಳಿ ನಡೆಸಿ 30ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಳೆಯಿಲ್ಲದೇ ಬತ್ತಿ ಹೋಗಿರುವ ನದಿಯೊಡಲಿನ ಅಲ್ಲಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರ ಇದಕ್ಕಾಗಿ ನಿಯಮಗಳನ್ನು ಮಾಡಿದ್ದರೂ ಗುತ್ತಿಗೆ ಪಡೆಯದೇ ಅಧಿಕಾರಿಗಳಿಗೆ ತಿಳಿಯದಂತೆ ದಂದೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದ ಸಮೀಪದಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ರಾತ್ರಿ ಅಕ್ರಮವಾಗಿ ಮರಳು …

Read More »

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಹಶೀಲ್ದಾರ್ ಅಜಿತ್ ಕುಮಾರ್ ರೈ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ಕುಮಾರ್ ರೈ ನ್ಯಾಯಾಂಗ ಬಂಧನದಲ್ಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957ರ ನಿಯಮ 10(1)(A)(A) ಮತ್ತು 10(2(A) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಏನಿದು ಪ್ರಕರಣ: ಅಕ್ರಮ ಆಸ್ತಿ …

Read More »

ಆಗಸ್ಟ್​ ತಿಂಗಳೊಳಗೆ ಐದೂ ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತೆ ಕಾನೂನು ಜಾರಿಗೆ ತರಲಾಗಿದೆ. ನಾವು ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದರೆ ಬಿಜೆಪಿಯವರಿಗೆ ಇನ್ನು 10 ವರ್ಷ ಮಾಡಲು ಏನೂ ಕೆಲಸ ಇರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ 25 ಜನ ಬಿಜೆಪಿ ಸಂಸದರು ಪ್ರಧಾನ ಮಂತ್ರಿ ಬಳಿ ಹೋಗಿ …

Read More »

ವಿದ್ಯುತ್ ಕಂಬಕ್ಕೆ ಮಾರ್ಕೆಟ್​ನಲ್ಲಿ 20 ಸಾವಿರ ರೂ. ಬೆಲೆ ಇದ್ದರೆ, 60-70 ಸಾವಿರ ರೂ. ಹಾಕಿದ್ದಾರೆ

ಬೆಳಗಾವಿ: ಬೆಳಗಾವಿ ಅಷ್ಟೇ ಅಲ್ಲದೇ ಎಲ್ಲ ಕಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಮೂಲ ನೀಲನಕ್ಷೆ ಪ್ರಕಾರ ಆಗಿಲ್ಲ. ಮೊನ್ನೆ ಕ್ಯಾಬಿನೆಟ್​ನಲ್ಲೂ ಈ ಬಗ್ಗೆ ಚರ್ಚೆ ಆಗಿದೆ. ಅದಕ್ಕೆ ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಲೋಕೋಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಥಮ ಸಭೆ …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಬೆಳಗಾವಿ: ಇಲ್ಲಿನ ಗಾಂಧಿ ನಗರದ ಸುಭಾಷ್​ ಗಲ್ಲಿಯ ಮನೆಯೊಂದರಲ್ಲಿ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಂಧಿ ನಗರದ ಸುಭಾಷ್ ಗಲ್ಲಿಯ ಮಂಜುನಾಥ ನರಸಪ್ಪ ಅಥಣಿ (42), ಪತ್ನಿ ಲಕ್ಷ್ಮೀ (36), ವೈಷ್ಣವಿ (13), ಪುತ್ರ ಸಾಯಿಪ್ರಸಾದ (10) ಗಂಭೀರ ಗಾಯಾಳುಗಳು. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗಾಹುತಿಗಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಸುಭಾಷ್​ ಗಲ್ಲಿಯ ಕಟ್ಟಡದ ಮೊದಲ ಮಹಡಿಯಲ್ಲಿ …

Read More »