ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ ವಿಜಯಪುರ ನಗರದ ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದು ಕಳ್ಳಬಟ್ಟಿ ಮದ್ಯ ಜಪ್ತಿಗೈದಿದ್ದಾರೆ . ವಿಜಯಪುರ ನಗರದ ಗೋಳಗುಮ್ಮಟ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಗೋಳಗುಮ್ಮ ಟ್ ಹಾಗೂ ಜಲನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು …
Read More »ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿದು ಕ್ರಿಪ್ಟೋದಲ್ಲಿ ಹೂಡಿಕೆ ಮಾಡುತ್ತಿದ್ದ ಮಾಜಿ ಕಾನ್‌ಸ್ಟೇಬಲ್ ನಿಂಗಪ್ಪ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯ ಭೀತಿ ಹುಟ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆಯುತ್ತಿದ್ದುದಾಗಿ ಮಾಜಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ನಿಂಗಪ್ಪ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ. ಚಿತ್ರದುರ್ಗದ ನಿಂಗಪ್ಪ ಅಲಿಯಾಸ್ ಸಾವಂತ್ ವಿರುದ್ಧ ಲೋಕಾಯುಕ್ತ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದಾಗ, ತಾನು ಕಳೆದ ಆರು …
Read More »ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ.
ಹೊಸಪೇಟೆ (ಜೂ.18): ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಸಿಎಂ, ಹೈಕಮಾಂಡ್ ನವರು ನಿರ್ಣಯ …
Read More »2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ
2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ. ಈ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರ ವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ …
Read More »ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.
ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ಕಾಕಾಸಾಹೇಬ್ ಪಾಟೀಲ್ ಅವರು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಸುತ್ತ ಬಂದಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು. 1975ರಲ್ಲಿ ದೇವ ಚಂದ್ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಹಲವು ಬಾರಿ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ …
Read More »ನೀಟ್ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ- ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, …
Read More »ನದ ಶೆಡ್ಗೆ ಮಂಜೂರಾಗದ ಹಣ: ಪಂಚಾಯತ್ ಕಚೇರಿಯೊಳಗೆ ಎಮ್ಮೆ ಕಟ್ಟಿದ ರೈತ
ಚಿಕ್ಕೋಡಿ: ದನದಕೊಟ್ಟಿಗೆ ನಿರ್ಮಾಣದ ಹಣ ಮಂಜೂರಾಗದ ಹಿನ್ನೆಲೆ ಬೇಸತ್ತ ರೈತರೊಬ್ಬರು ಗ್ರಾಮ ಪಂಚಾಯತ್ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ಒಳಗೆ ಸತೀಶ ಕೋಳಿ ಎಂಬ ರೈತ ಎಮ್ಮೆ ಕಟ್ಟಿ ಆಕ್ರೋಶ ಹೊರಹಾಕಿದ್ದಾರೆ. ‘ಕಳೆದ ವರ್ಷ ಗ್ರಾಮ ಪಂಚಾಯತ್ ವತಿಯಿಂದ ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಆದರೆ, ನಿರ್ಮಾಣ ಮಾಡಿ ವರ್ಷ ಕಳೆದರೂ …
Read More »ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್ ಪೊಲೀಸ್ ಠಾಣೆಗೆ ಬಿಜೆಪಿ ನಿಯೋಗ ದೂರು ನೀಡಿದೆ. ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು. ಇಂದು …
Read More »ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲ
ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ವಿಷಪೂರಿತ ಆಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಖಾನಾಪುರದಲ್ಲಿರುವ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ 9 ತಿಂಗಳ ಬುನಾದಿ ತರಬೇತಿ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರಶಿಕ್ಷಣಾರ್ಥಿಗಳ ಪೈಕಿ 22 ಪ್ರಶಿಕ್ಷಣಾರ್ಥಿಗಳು ವಿಷಪೂರಿತ ಆಹಾರ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ವಾಂತಿ ಬೇಧಿ, ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ …
Read More »ಕೇಂದ್ರ ಸರ್ಕಾರ ಮಾಡುತ್ತಿರುವ ಜಾತಿಗಣತಿಗೂ ರಾಜ್ಯ ಸರ್ಕಾರ ಮಾಡುತ್ತಿರುವ ಸಮೀಕ್ಷೆಗೂ ವ್ಯತ್ಯಾಸವಿದೆ: ಸತೀಶ್ ಜಾರಕಿಹೊಳಿ
ರಾಯಚೂರು: ಕೇಂದ್ರ ಸರ್ಕಾರ ಕೇವಲ ಜನಗಣತಿ ಜೊತೆಗೆ ಜಾತಿಗಣತಿ ಮಾಡುತ್ತದೆ. ನಾವು ಶಿಕ್ಷಣ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ಬಗ್ಗೆ ಸರ್ವೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಜಾತಿ ಒಂದು ಭಾಗವಷ್ಟೇ. 52 ಮಾನದಂಡದಲ್ಲಿ ಈ ಸಮೀಕ್ಷೆ ನಡೆಯುತ್ತೆ. ನಮ್ಮದು ಜಾತಿ ಸಮೀಕ್ಷೆ ಅಷ್ಟೇ ಅಲ್ಲ, ಸ್ಥಿತಿಗತಿ ಸಮೀಕ್ಷೆ ಆಗಿದೆ. ಆದಾಯ, ಉದ್ಯೋಗ, ಭೂಮಿ ಇದರ ಬಗ್ಗೆ ಕೇಂದ್ರ ಸಮೀಕ್ಷೆ …
Read More »