Breaking News

ಜಿಲ್ಲೆ

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿ ಜೆಡಿಎಸ್​ ಭರ್ಜರಿ ಗೆಲುವು ಗಳಿಸಿತ್ತು. ಆದರೆ, ಈ ಬಾರಿ ಜೆಡಿಎಸ್​ಗೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ ಎದುರಾಗಿದೆ.ಹಾಗಾಗಿ ಭದ್ರಕೋಟೆ ಉಳಿಸಿಕೊಳ್ಳುವುದು ಜೆಡಿಎಸ್​ಗೆ ಸವಾಲಾಗಿದೆ ಎಂದೇ ಹೇಳಬಹುದು. ಹೆಚ್​ಡಿ ದೇವೇಗೌಡ ಹಾಗೂ ಹೆಚ್​ಡಿ ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವ ಪ್ರಮುಖ ನಾಯಕರು. ಆದ್ರೆ ದೇವೇಗೌಡರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ …

Read More »

ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ

ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಶುಕ್ರವಾರ ಅದ್ಧೂರಿ ರೋಡ್ ಶೋ ನಡೆಸಿದರು. ಅಭ್ಯರ್ಥಿಗಳಾದ ತೆಲ್ಕೂರ ಹಾಗೂ ಅಮೀನರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.ಕಲಬುರಗಿ/ಯಾದಗಿರಿ: ‘ಮೋದಿ ಎಂದರೆ ವಿಷವನ್ನು ನುಂಗಿ ಇಡೀ ದೇಶದ ಹಿತ ಬಯಸುವ ನೀಲಕಂಠನಿದ್ದಂತೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಶುಕ್ರವಾರ ಸೇಡಂ ಪಟ್ಟಣದಲ್ಲಿ ಅಭ್ಯರ್ಥಿ ರಾಜಕುಮಾರ್​ ಪಾಟೀಲ್ ತೆಲ್ಕೂರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ …

Read More »

ಡಿಕೆಶಿ ಭದ್ರಕೋಟೆಯಲ್ಲಿ ತ್ರಿಕೋನ ಸ್ಪರ್ಧೆ!

ರಾಮನಗರದ ಕನಕಪುರದಲ್ಲಿ ಈ ಬಾರಿ ಘಟಾನುಘಟಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಅವರ ಕುರಿತಾದ ಸಂಪೂರ್ಣ ಸ್ಟೋರಿ ಇಲ್ಲಿದೆ ನೋಡಿ.. ದಶಕಗಳಿಂದ ವಿರೋಧಿಗಳಿಲ್ಲದೇ ಪಾರುಪತ್ಯ ಸಾಧಿಸಿದ್ದ ಡಿಕೆಶಿಗೆ ಟಕ್ಕರ್ ಕೊಡಲು ಬಿಜೆಪಿಯಿಂದ ಸಚಿವ ಆರ್.ಅಶೋಕ್ ಕಣದಲ್ಲಿದ್ದಾರೆ. ಹಾಗೆಯೇ ಸ್ಥಳೀಯ ಜೆಡಿಎಸ್​ ಅಭ್ಯರ್ಥಿಯಾದ ನಾಗರಾಜ್ ಸಂಪ್ರದಾಯಿಕ ಮತಗಳನ್ನು ಸೆಳೆದರೇ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟರೂ ಅಚ್ಚರಿ ಪಡಬೇಕಿಲ್ಲ. ಕನಕಪುರ ಬಂಡೆ ಸೋಲಿಸಲು ಬಿಜೆಪಿ ರಣತಂತ್ರ: ಈ ಬಾರಿ ಕನಕಪುರ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ಅವರು …

Read More »

ಗದಗ ಬಿಜೆಪಿ ಸಮಾವೇಶ , ಕೂಲ್‌ ಡ್ರಿಂಕ್ಸ್‌ ತಂದವ ಕಕ್ಕಾಬಿಕ್ಕಿ : ಫ್ರೀ.. ಫ್ರೀ..ಎಂದು ಮುಗಿಬಿದ್ದ ಜನ, ವ್ಯಾಪಾರಿ ಕಣ್ಣೀರು

ಗದಗ: ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿ ಜನರು ಬೇಸಿಗೆಯ ಬಿಸಿಲಿಗೆ ಬಾಯಾರಿಕೆಯಿಂದ ತತ್ತರಿಸಿಹೋಗಿದ್ದರು, ಕೂಲ್‌ ಡ್ರಿಂಕ್ಸ್‌ ವ್ಯಾನ್ ಕಂಡು ಮುಗಿಬಿದ್ದು ಕೊಂಡೊಯ್ದ ಘಟನೆ ನಡೆದಿದೆ.   ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಆದ್ರೆ ಕಾರ್ಯಕ್ರಮಕ್ಕೆ ಬಂದ ಜನರಿಗೆ ಆಯೋಜಕರು ನೀರಿನ ವ್ಯವಸ್ಥೆ ಮಾಡದ ಕಾರಣದಿಂದಾಗಿ ಜನರು ಬೇಸಿಗೆಯ ಬಿಸಿಲಿನಿಂದ ನೀರು ಕುಡಿಯದೇ …

Read More »

ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಬರಲ್ಲ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸುಳ್ಳು ಹೇಳಿ ಪ್ರಚಾರ ಮಾಡಲು ತಿಳಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಯಚೂರು: ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ಕಾರ್ಯಕರ್ತರ ಜೊತೆ ನಡೆದ ಆನ್ ಲೈನ್​ ಸಮಾವೇಶದಲ್ಲಿ ಹಗುರವಾಗಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್​ನ ಭರವಸೆಗಳು ಈಡೇರಿಸಲು ಆಗಲ್ಲ ಎಂದು ಹತಾಶೆಗೊಂಡು ಈ …

Read More »

ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಲಕ್ಷ್ಮಿ ಹೆಬ್ಬಾಳ್ಕರ್ ಅಬ್ಬರದ ಪ್ರಚಾರ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ. ಗ್ರಾಮೀಣ  ಕ್ಷೇತ್ರದ ತುಮ್ಮರಗುದ್ದಿ, ಸೋಮನಟ್ಟಿ, ಭೀಮಗಡ, ಕರಿಕಟ್ಟಿ, ಸಿದ್ದನಳ್ಳಿ, ಖನಗಾಂವ (ಬಿಕೆ ಮತ್ತು ಕೆಎಚ್) ಮೊದಲಾದೆಡೆ ಪ್ರಚಾರ ನಡೆಸಿದರು. ಎಲ್ಲೆಡೆ ಜನರು ಹಬ್ಬದ ವಾತಾವರಣದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ವಾಗತಿಸಿದರು. ಮಹಿಳೆಯರು ಆರತಿ ಬೆಳಗಿ ಬರಮಾಡಿಕೊಳ್ಳುತ್ತಿದ್ದರು. ವೃದ್ಧರು ಮನೆಯ ಮಗಳೇ ಬಂದ ರೀತಿಯಲ್ಲಿ ಸಂಭ್ರಮಪಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಯಾವುದೇ …

Read More »

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ …

Read More »

ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ :ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು …

Read More »

ಮೋದಿ ಗಾಳಿಯೊಂದನ್ನು ಉಚಿತವಾಗಿ ನೀಡಿ ಎಲ್ಲದರ ಮೇಲೂ ಜಿಎಸ್​​ಟಿಹಾಕಿ ದ್ದಾರೆ

ಬೆಳಗಾವಿ: ಚುನಾವಣಾ ಪ್ರಚಾರವೆಂದು ರಾಜ್ಯಕ್ಕೆ ಅಮಿತ್ ಷಾ ಬಂದು ಮಾತನಾಡುತ್ತಾ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದಂಗೆಗಳು ಏಳುತ್ತವೆ ಎಂದ ಹೇಳಿದ್ದರು. ಅವರ ಈ ಮಾತುಗಳು ಕರ್ನಾಟಕದ ಜನತೆಗೆ ಮಾಡಿದ ಅಪಮಾನ. ಹಿಂದು-ಮುಸ್ಲಿಂ ಜಗಳ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡುವವರು ಅವರೇ ಎಂದು ಅಮಿತ್ ಷಾ ಹಾಗೂ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.   ಚಿಕ್ಕೋಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ, ಅಮಿತ್ ಷಾ ಆಡಿರುವ ಮಾತಿನ …

Read More »

ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು:ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ …

Read More »