ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …
Read More »ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು
ಗದಗ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು ಎಂಬ ಆರೋಪ ಆಗಾಗ ಕೇಳಿ ಬರುತ್ತಲಿರುತ್ತದೆ. ಅಂಥ ಪ್ರಕರಣಗಳ ಪಟ್ಟಿಗೆ ಇಂದು ಇನ್ನೊಂದು ಸೇರ್ಪಡೆ ಆಗಿದೆ. ಇಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ. ಗದಗ ಜಿಮ್ಸ್ನಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ …
Read More »ಬೆಳಗಾವಿ ಉತ್ತರದಲ್ಲಿ ಮುಗಳಿ ಹಾಳ ಅವರ್ ಭರ್ಜರಿ ಪ್ರಚಾರ ಇಬ್ಬರ ಜಗಳದಲ್ಲಿ 3ನೆ ಯವರಿಗೆ ಲಾಭ ಆಗುವ ಸಾಧ್ಯತೆ?
ಬೆಳಗಾವಿ: ವಿಧಾನ ಸಭಾ ಚುನಾವಣೆ ಬರುತ್ತಿದ್ದಂತೆ ಎಲ್ಲಾಕಡೆ ಪ್ರಚಾರ ಜೋರಾಗಿಯೇ ಇದೆ ಒಂದು ಕಡೆ ಬಿಜೆಪಿ ಯಲ್ಲಿ ಒಳ ಜಗಳ ಇದ್ದರೆ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಇಲ್ಲಿ ಜೆಡಿಎಸ್ ನಿಂದ ಮುಗಳಿಹಾಳ ಅವರು ಸ್ಪರ್ಧೆಗೆ ರೆಡಿ ಆಗಿದ್ದಾರೆ ಇವಾಗಿನಿಂದಲೆ ಕ್ಷೇತ್ರಗಳಲ್ಲಿ ತಮ್ಮ ಪ್ರಚಾರ ವನ್ನಾ ಪ್ರಾರಂಭ ಮಾಡಿದ್ದಾರೆ ಬೆಳಗಾವಿ ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ರೈತ ಸಂಘದ ಚುನಪ್ಪ ಪೂಜಾರಿ ಅವರು ಕೂಡ ಸಾಥ್ ನೀಡಿದ್ದಾರೆ ವಿಧಾನ ಸಭೆ …
Read More »ಬುಧವಾರ ಮತ್ತಷ್ಟು ನಗದು ಹಣ ವಶ
ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಬೆಳಗಿನ ಜಾವ ಹಿರೇಬಾಗೇವಾಡಿ ಟೋಲ್ ನಾಕಾ ಬಲಿ 2 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಸಂಜೆ ಹಿಟ್ನಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿ, ಸಿಪಿಐ, ಹುಕ್ಕೇರಿ ಮತ್ತು ಸಿಪಿಐ ಸಂಕೇಶ್ವರ ತಂಡದ ಸಮನ್ವಯದಲ್ಲಿ ವಶಪಡಿಸಿಕೊಂಡಿದ್ದಾರೆ. …
Read More »ದಾಖಲೆ ರಹಿತ 95ಲಕ್ಷ ರೂ. ನಗದು, 80,252 ರೂ ಮೌಲ್ಯದ 188.28ಲೀ. ಮದ್ಯ ವಶ
ಗದಗ: ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ವಿವಿಧೆಡೆ ದಾಖಲೆ ರಹಿತ 95 ಲಕ್ಷ ರೂ. ನಗದು ಹಾಗೂ 80,252 ರೂ ಮೌಲ್ಯದ 188.28 ಲೀ. ಮದ್ಯ ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್‌ಪೋಸ್ಟ್ನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ. ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ; ಈ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದೇನು..?
ಸ್ಯಾಂಡಲ್ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಕ್ಯಾಂಪೇನ್ ಮಾಡುವುದಾಗಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದರ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾತಾಡಿದ್ದಾರೆ. ಬಿಜೆಪಿ ಪರ ಸುದೀಪ್ ಪ್ರಚಾರ ಮಾಡುವುದರ ಬಗ್ಗೆ ನಾನು ಟೀಕೆ ಮಾಡಲು ಹೋಗುವುದಿಲ್ಲ. ನನ್ನ ಕಾರ್ಯಕರ್ತರೇ ನಮ್ಮ ಪಕ್ಷದ ಸ್ಟಾರ್ ಪ್ರಚಾರಕರು. ಸುದೀಪ್ ಪ್ರಚಾರಕ್ಕೆ ಅಭಿಮಾನಿಗಳು ಜೈಕಾರ ಹಾಕಬಹುದು. ಆದರೆ, ಅದು ಮತವಾಗಿ ಪರಿವರ್ತನೆ …
Read More »ದಾಖಲೆ ಇಲ್ಲದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 40 ಲಕ್ಷ ರೂ ಮೌಲ್ಯದ ಚೆನ್ನಾಭರಣವನ್ನು ಖಾನಾಪುರ ತಾಲೂಕಿನ ನಂದಗಡ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 21.25 ಲಕ್ಷ ರೂ.ಮೌಲ್ಯದ 395 ಗ್ರಾಂ ಚಿನ್ಮಾಭರಣ ಹಾಗೂ 19 ಲಕ್ಷ ರೂ.ಮೌಲ್ಯದ 28 ಕೆ.ಜಿ. ಬೆಳ್ಳಿಯ ಆಭರಣ, ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬೆಳಗಾವಿಯ ಹಲವು ಕಡೆಗಳಲ್ಲಿ …
Read More »ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಜಿಲ್ಲೆಯ 18ಮತಕ್ಷೇತ್ರಗಳಿಗೆ ಬಿಗಿಭದ್ರತೆಯೊಂದಿಗೆ EVM ರವಾನೆ :ನಿತೇಶ್ ಪಾಟೀಲ
ಬೆಳಗಾವಿ : ಪ್ರಥಮ ರ್ಯಾಂಡಮೈಜೇಷನ್ ಬಳಿಕ ಕ್ಷೇತ್ರವಾರು ಹಂಚಿಕೆಯಾಗಿರುವ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳಿಗೆ ಬಿಗಿಭದ್ರತೆಯೊಂದಿಗೆ ರವಾನೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿ ಇರುವ ಭಾರತ ಚುನಾವಣಾ ಆಯೋಗದ ಇವಿಎಂ ಉಗ್ರಾಣದಲ್ಲಿ ಇರುವ ಇವಿಎಂ ಗಳನ್ನು ರ್ಯಾಂಡಮೈಜೇಷನ್ ಪ್ರಕಾರ ಆಯಾ ಕ್ಷೇತ್ರಗಳಿಗೆ ರವಾನಿಸುವ ಪ್ರಕ್ರಿಯೆಯನ್ನು ಬುಧವಾರ (ಏ.5) ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. …
Read More »SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು. ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು …
Read More »ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’
ಬೆಳಗಾವಿ: ‘ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡುವಾಗ, ಎರಡೂ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟರು. ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಸೋಮವಾರ ನಡೆದ ಲಿಂಗಾಯತ ಸಂಘಟನೆಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. …
Read More »
Laxmi News 24×7