ಬೆಂಗಳೂರು, ಏಪ್ರಿಲ್ 20: ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ. ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …
Read More »ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆದಾಯದಲ್ಲಿ ಗಣನೀಯ ಏರಿಕೆ ಕಂಡಿದೆ. 2018ರಲ್ಲಿ ₹36.58 ಲಕ್ಷ ಆದಾಯ ಹೊಂದಿದ್ದ ಅವರು, 2022ರ ಹೊತ್ತಿಗೆ ₹7.15 ಕೋಟಿ ಏರಿಸಿಕೊಂಡಿದ್ದಾರೆ. ಅಂದರೆ ಐದು ವರ್ಷಗಳಲ್ಲಿ ₹6.70 ಕೋಟಿ ಆದಾಯ ಏರಿಕೆ ಕಂಡಿದೆ. 2019ರಲ್ಲಿ ₹41.67 ಲಕ್ಷ, 2020ರಲ್ಲಿ ₹ 43.71 ಲಕ್ಷ, 2021ರಲ್ಲಿ ₹42.14 ಲಕ್ಷ ಆದಾಯ ಹೊಂದಿದ್ದಾಗಿ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿದೆ. ಆದರೆ, 2022ರಲ್ಲಿ ಏಕಾಏಕಿ …
Read More »ಬೆಳ್ಳಂ ಬೆಳಗ್ಗೆ ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶ
ಬೆಳಗಾವಿ: ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಂಟ್ಟೂ 1.54 ಕೋಟಿ ರೂ. ಪತ್ತೆಯಾಗಿದ್ದು, ಆದಾಯ ತೇರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.
Read More »ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …
Read More »ಬೆಳಗಾವಿ ಜಿಲ್ಲೆಯಲ್ಲಿ 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬೆಳಗಾವಿ: ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿ ನಡೆದಿದ್ದು, ಈವರೆಗೆ ಒಟ್ಟು 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಶಿಕಲಾ ಜೊಲ್ಲೆ, ಜೆಡಿಎಸ್ ದಿಂದ ರಾಜಾರಾಮ ಪವಾರ, ಚಿಕ್ಕೋಡಿ ಸದಲಗಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಮೋಹನ ಮೋಟನ್ನವರ, ರಿಪಬ್ಲಿಕ್ ಮೂಮೆಂಟ್ ಪಾರ್ಟಿಯಿಂದ ಅಪ್ಪಾಸಾಹೇಬ ಕುರಣೆ, ಕಾಂಗ್ರೆಸ್ ನಿಂದ ಗಣೇಶ ಹುಕ್ಕೇರಿ, ಅಥಣಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ನಾಮಪತ್ರ …
Read More »ರಾಜಕೀಯ ವ್ಯವಸಾಯ ಇದ್ದಂತೆ, ಉತ್ತಮ ಬೆಳೆಗೆ ಕಾಯಬೇಕು ಅಷ್ಟೇ: ಡಿ.ಕೆ.ಶಿವಕುಮಾರ್
ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಕನಕಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ನಂತರ ಬೃಹತ್ ಬೈಕ್ ರ್‍ಯಾಲಿ ಹಾಗೂ ರೋಡ್ಶೋ ನಡೆಸಿದರು. ಈ ವೇಳೆ ಅಪಾರ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಡಿಕೆಶಿ ರಾಜಕಾರಣ ಅನ್ನೋದು ವ್ಯವಸಾಯ ಇದ್ದಂತೆ ವ್ಯವಸಾಯದಲ್ಲಿ ಹೇಗೆ ಬಿತ್ತನೆ ಹಾಕಿ, …
Read More »ಪಕ್ಷ ಬದಲಾವಣೆ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್
ಬಾಗಲಕೋಟೆ: ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್ ಪಾಟೀಲ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ. ಕಾಂಗ್ರೆಸ್ ಮುಖಂಡ ವೇಣುಗೋಪಾಲ್ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಪಕ್ಷ ಬದಲಾವಣೆ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.
Read More »ಬೆಳಗಾವಿ ಗ್ರಾಮೀಣ ,ಅಥಣಿ ಕಾಗವಾಡ ಎಲ್ಲಾಕಡೆ ಬಿಜೆಪಿ ಪಕ್ಷದ ಬಾವುಟ ಹಾರಿಸುತ್ತವೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಎಲ್ಲ ಬಿಜೆಪಿ ಕಾರ್ಯ ಕರ್ತರ ಸಮ್ಮಿಲನ ವಾಗಿ ಒಂದು ಕಾರ್ಯಕ್ರಮ ನಡೆಯಿತು. ಅಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ಬಿಜೆಪಿಯ ಪ್ರಮುಖರಾದ ಎಲ್ಲರೂ ಭಾಗ ವಹಿಸಿದ್ದರು. ಹಾಗೂ ಟಿಕೆಟ್ ವಂಚಿತರಾದ ಧನಂಜಯ ಜಾಧವ ಹಾಗೂ ಸಂಜಯ್ ಪಾಟೀಲ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲ್ಲಿಸುದುವು ನಮ್ಮ ಗುರಿ ಯಾಗಿರಲಿ ಗ್ರಾಮೀಣ ಭಾಗದಲ್ಲಿ ಪ್ರಮುಖ ರಾದ ಧನಂಜಯ್ …
Read More »ಮಹಾರಾಷ್ಟ್ರದಿಂದ 6 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರದ ಮನವಿ
ಬೆಳಗಾವಿ: ಬೆಳಗಾವಿ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ತಲಾ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿರುತ್ತದೆ. ಈ ಕುರಿತು ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು, …
Read More »ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ಡಿಸಿ
ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ ಸಭೆ ನಡೆಸಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವೆಚ್ಚ ವೀಕ್ಷಕ ಸುಬೋಧ ಸಿಂಗ್ ಮಾತನಾಡಿ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಲಾಗಿರುವ ವಿವಿಧ ತಂಡಗಳು …
Read More »
Laxmi News 24×7