Breaking News

ಜಿಲ್ಲೆ

ಎಸ್‌.ಯಡಿಯೂರಪ್ಪ ಅವರ ಆಪ್ತ ಮೋಹನ ಲಿಂಬಿಕಾಯಿ ಕಾಂಗ್ರೆಸ್‌ ಸೇರ್ಪಡೆ

ಬೆಳಗಾವಿ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರಾಗಿದ್ದ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ನಗರದಲ್ಲಿ ಗುರುವಾರ ಕಾಂಗ್ರೆಸ್‌ ಸೇರಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.   ನಂತರ ಮಾತನಾಡಿದ ಮೋಹನ, ‘ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದೆ. ಅಲ್ಲಿ ಕಾರ್ಯಕರ್ತರಿಗೆ ಬೆಲೆ ಉಳಿದಿಲ್ಲ. ಕೆಲವೇ ನಾಯಕರು ಎಲ್ಲ ನಿರ್ಧಾರ …

Read More »

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಟಿಕೆಟ್ ಆಕಾಂಕ್ಷಿಗಳ ಮಹತ್ವದ ಸಭೆ

ಬೆಳಗಾವಿ: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಶಾಸಕರು ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.   ಬೆಳಗಾವಿ ಧಾರವಾಡ ಗದಗ ಹಾವೇರಿ ಸೇರಿದಂತೆ 10 ಜಿಲ್ಲೆಗಳ …

Read More »

ಕಿಸಾನ್ ಸಮ್ಮಾನದಲ್ಲಿ ಬೆಳಗಾವಿ ಮುಂಚೂಣಿ

ಬೆಳಗಾವಿ :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಲಾಭವನ್ನು ರೈತರಿಗೆ ತಲುಪಿಸುವಲ್ಲಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. 5 ಲಕ್ಷಕ್ಕೂ ಅಧಿಕ ರೈತರ ಖಾತೆಗೆ 13ನೇ ಕಂತಿನ ಹಣ ಜಮೆ ಮಾಡಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ರೈತರಿಗೆ ಕಿಸಾನ್ ಸಮ್ಮಾನ್ ದೊರಕಿಸಿಕೊಟ್ಟ ಜಿಲ್ಲೆಗಳಲ್ಲಿ ಬೆಳಗಾವಿ ಅಗ್ರಸ್ಥಾನ ಪಡೆದಿದೆ.   ಗಡಿ ಜಿಲ್ಲೆಯ ಬೆಳಗಾವಿಗೆ ಇತ್ತೀಚೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಒಟ್ಟು 8 …

Read More »

ಗಡಿ ಜನರಿಗೆ ಮಹಾರಾಷ್ಟ್ರ “ಆರೋಗ್ಯ ಭಾಗ್ಯ’ ವಿವಾದ

ಬೆಳಗಾವಿ/ಬೆಂಗಳೂರು: ಮಹಾರಾಷ್ಟ್ರ ವಿಚಾರದಲ್ಲಿ ತನ್ನ ಮೊಂಡುತನ ಪ್ರದರ್ಶಿಸುತ್ತ ಬಂದಿರುವ ಮಹಾರಾಷ್ಟ್ರ ಈಗ ಕರ್ನಾಟಕದ 865 ಹಳ್ಳಿ ಮತ್ತು ಪಟ್ಟಣಗಳಲ್ಲಿ ಮಹಾತ್ಮಾ ಜ್ಯೋತಿ ಬಾ ಫ‌ುಲೆ ಜನ ಆರೋಗ್ಯ ಯೋಜನೆ ಜಾರಿಗೆ ತರುವುದಾಗಿ ಹೇಳುವ ಮೂಲಕ ಗಡಿ ಕಿಚ್ಚು ಹಚ್ಚಿದೆ. ಮಹಾ ಸರಕಾರದ ಈ ಕ್ರಮದ ವಿರುದ್ಧ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗಮನಾರ್ಹವೆಂದರೆ, ಸುಪ್ರೀಂ ಕೋರ್ಟ್‌ನಲ್ಲಿ ಗಡಿ ವಿವಾದ ಕುರಿತಂತೆ ವಿಚಾರಣೆ ಹಂತದಲ್ಲಿರುವಂತೆಯೇ ರಾಜ್ಯದ ಐದು …

Read More »

ಈ ಬಾರಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು

ಬಳ್ಳಾರಿ: ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದ್ದೇನೆ. ಇದೀಗ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈ ಕುರಿತು ಪಕ್ಷದ ಹೈಕಮಾಂಡ್‌ ಗಮನಕ್ಕೂ ತಂದಿದ್ದೇನೆ. ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರ ಎಂಬ ಆಯ್ಕೆಯಿತ್ತು. ಆದರೆ, ಬಹುತೇಕ ಎಲ್ಲರ ಅಪೇಕ್ಷೆಯ ಮೇರೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಮಾಜಿ …

Read More »

ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ

ಬೆಳಗಾವಿ: ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ ಈಗ ಆರ್ಥಿಕ ನೆರವು ನೀಡುವ ದಾನಿಗಳತ್ತ ಮುಖ ಮಾಡಿದ್ದಾರೆ. ದುಡಿದು ಮಗನನ್ನು ಸಲಹುವ ತಾಯಿಯ ಸಂಕಟಕ್ಕೀಗ ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚುವ ಉದಾರ ಹೃದಯಿಗಳ ಅಗತ್ಯ ಬಂದೊದಗಿದೆ. ಅಥಣಿ ತಾಲೂಕಿನ ಮದಬಾವಿಯ ಪ್ರಜ್ವಲ್ ಮಹಾದೇವ ನಿವಾಲಗಿ 9ನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾವಂತ ಬಾಲಕ. ಈತ ಶೋಭಾ- ಮಹಾದೇವ ದಂಪತಿಯ ಏಕಮಾತ್ರ ಪುತ್ರ. ಶೋಭಾ ಅವರು …

Read More »

ಗಡಿ ಭಾಗದವರಿಗೆ ಮಹಾರಾಷ್ಟ್ರ ಸರ್ಕಾರದ ವಿಮೆ; ಹೇಗೆ ತಡೆಯಬೇಕು ಯೋಚಿಸುತ್ತೇನೆ:ಸಿಎಂ

ಬೆಳಗಾವಿ: ‘ಕರ್ನಾಟಕ ಗಡಿ ಭಾಗದ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದರೆ, ಅದನ್ನು ಪರಿಶೀಲಿಸಿ ಹೇಗೆ ತಡೆಯಬೇಕು ಯೋಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದಕ್ಕೆ ನಾನೇಕೆ ರಾಜೀನಾಮೆ ಕೊಡಬೇಕು. ನಾಡು, ನುಡಿ, ಗಡಿ ಜನರ ರಕ್ಷಣೆ ವಿಚಾರದಲ್ಲಿ ನಾನು ಡಿ.ಕೆ.ಶಿವಕುಮಾರ ಅವರಿಂದ ಪಾಠ ಕಲಿಯಬೇಕಾಗಿಲ್ಲ’ ಎಂದರು. ‘ನಾವು ಕೂಡ …

Read More »

ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ.

ಬೆಳಗಾವಿ: ಇಲ್ಲಿನ ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ. ಸುಳೇಬಾವಿ ಗ್ರಾಮದ ರಾಮು ನಾರಾಯಣ ಬಂಗೋಡಿ (54) ಮೃತಪಟ್ಟವರು. ಅವರು ವಡಗಾವಿ ದೇವಾಂಗನಗರ ನಿವಾಸಿ, ಗೋಪಾಲ ಬಸಪ್ಪ ತಾಳೂಕರ (58) ಅವರೊಂದಿಗೆ ಬುಧವಾರ ಮಧ್ಯಾಹ್ನ ಹಿರೇಬಾಗೇವಾಡಿಯಿಂದ ಬೈಕ್ ನಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ ಗುದ್ದಿದೆ. ಗೋಪಾಲ ತಾಳೂಕರ ಅವರಿಗೆ ಗಾಯಗಳಾಗಿದ್ದು ತಲೆ ಹಾಗೂ ಮುಖಕ್ಕೆ ತೀವ್ರ ಏಟು ತಗುಲಿದ ರಾಮು ಬಂಗೋಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …

Read More »

ಮುಖ್ಯಮಂತ್ರಿ ಭೇಟಿಗಾಗಿ ಒಂದು ಗಂಟೆ ಕಾದು ವಾಪಸ್‌ ಆದ ಶಾಸಕಿ ಕುಸುಮಾವತಿ ಶಿವಳ್ಳಿ

ಹುಬ್ಬಳ್ಳಿ: ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಮುಖ್ಯಮಂತ್ರಿಗಳ ಭೇಟಿಗಾಗಿ ಸುಮಾರು ಒಂದು ಗಂಟೆ ಕಾದರೂ ಭೇಟಿಯಾಗದ ಹಿನ್ನೆಲೆಯಲ್ಲಿ ವಾಪಸ್ಸು ತೆರಳಿದ ಘಟನೆ ನಡೆಯಿತು. ಇಲ್ಲಿನ ಆದರ್ಶ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಶಾಸಕಿ ಕುಸುಮಾವತಿ ತೆರಳಿದ್ದರು. ಸುಮಾರು ಒಂದು ಗಂಟೆ ಕಾಲ ಕಾದರು ಕುಳಿತರು. ಆದರೆ ಬೆಳಗಾವಿಗೆ ತೆರಳುವ ಭರದಲ್ಲಿ ಭೇಟಿಯಾಗದೆ ಸಿಎಂ ಬೊಮ್ಮಾಯಿ ಹೊರಟು ಹೋದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಕುಸುಮಾವತಿ ಶಿವಳ್ಳಿ, ಕ್ಷೇತ್ರದ …

Read More »

ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!

ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ …

Read More »