Breaking News

ಜಿಲ್ಲೆ

ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ವಿಜಯಪುರ:ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.   ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

2023 : ಪಕ್ಷ, ನಾಯಕರ ಮೇಲೆ ಬಿಎಸ್‌ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್‌ ಬಿಗ್‌ ಪ್ಲ್ಯಾನ್‌?

ಬೆಂಗಳೂರು, ಮಾರ್ಚ್‌ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್‌ ಟೈಮ್ಸ್‌’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …

Read More »

ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ.

ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ …

Read More »

ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ

ಬೆಂಗಳೂರು: ಲಂಡನ್‌ ಭಾಷಣದ ವೇಳೆ ರಾಹುಲ್‌ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.   ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …

Read More »

ಮಾ.16ರಂದು ಶಿವಚರಿತ್ರ’ ಉದ್ಘಾಟನಾ ಸಮಾರಂಭ

ಬೆಳಗಾವಿ: ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 5.30ಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Read More »

ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಡಿ.ಕೆ.ಶಿ. ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ:. ರಮೇಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಮಂತ್ರಿಯೋರ್ವರಿಗೆ ಡಿ.ಕೆ.ಶಿ ಕಾಂಗ್ರೆಸ್ ಸೇರ್ತಿಯಾ ಇಲ್ಲ ಸಿಡಿ ಬಿಡುಗಡೆ ಮಾಡ್ಲಾ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಸಿಡಿ ರಾಜಕಾರಣ ಪ್ರಸ್ತಾಪಿಸಿದ್ದಾರೆ. ನಾವು ಯುದ್ಧ ಮಾಡುವವರು ಹೊರತು ಷಡ್ಯಂತ್ರ ಮಾಡುವವರಲ್ಲ. …

Read More »

ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ.     ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ …

Read More »

ಹಾಲಿನ ಕೊರತೆ: ಹೋಟೆಲ್‌ಗ‌ಳಿಗೆ ತೊಂದರೆ. ರಾಜ್ಯಗಳಿಗೆ ಹಾಲು ಸರಬರಾಜು ಸ್ಥಗಿತಕ್ಕೆ ಆಗ್ರಹ

ಬೆಂಗಳೂರು: ಹಾಲಿನ ಬೇಡಿಕೆ ಹೆಚ್ಚಾಗಿರುವುದರಿಂದ ಹೊರರಾಜ್ಯಗಳಿಗೆ ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘ ಇದೀಗ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ಕ್ಕೆ ಮನವಿ ಮಾಡಿದೆ.   ಈ ಬಗ್ಗೆ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಬೃಹತ್‌ ಬೆಂಗಳೂರು ಹೋಟೆಲ್‌ಗ‌ಳ ಸಂಘದ ಅಧ್ಯಕ್ಷ ಪಿ.ಸಿ.ರಾವ್‌, ಇತ್ತೀಚೆಗೆ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಕೊರತೆ ಬಹಳಷ್ಟು ಉಂಟಾಗಿದೆ. ಬೆಂಗಳೂರಿನ ಹೋಟೆಲ್‌ಗ‌ಳಲ್ಲಿ ಹೆಚ್ಚಾಗಿ ನಂದಿನಿ ಹಾಲು …

Read More »

ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …

Read More »

ಪ್ರಜಾಧ್ವನಿ ಯಾತ್ರೆ15ರಂದು:ಸತೀಶ ಜಾರಕಿಹೊಳಿ

ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.   ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ ‍ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …

Read More »