ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಕುರುಬರಹಳ್ಳಿ ಗ್ರಾಮಕ್ಕೆ ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದ್ದ ಬೆನ್ನಲ್ಲಿಯೇ ಗ್ರಾಮಸ್ಥರು ವರ್ತೂರು ಪ್ರಕಾಶ್ ಅವರನ್ನು ಆಹ್ವಾನಿಸಿ ಸಿದ್ದರಾಮಯ್ಯರಿಗೆ ಒಂದು ಮತವನ್ನೂ ಹಾಕುವುದಿಲ್ಲ ಎಂದು ಭರವಸೆ ನೀಡಿರುವ ಕುತೂಹಲ ಸಂಗತಿ ನಡೆದಿದೆ. ಕುರುಬರಹಳ್ಳಿ ಗ್ರಾಮಸ್ಥರು ಸಾಮೂಹಿಕವಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಗ್ರಾಮಕ್ಕೆ ಕರೆಯಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿ ಸನ್ಮಾನಿಸಿ, ನಮ್ಮ ಗ್ರಾಮದಿಂದ ಒಂದು ಮತ ಕೂಡ ಸಿದ್ಧರಾಮಯ್ಯನವರಿಗೆ …
Read More »ತಡವಾಗಿ ಬಂದ ವೈದ್ಯರು; ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ
ವಿಜಯಪುರ: ಬೆಳಗ್ಗೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದಿದ್ದು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಹೊರಗಡೆಯೇ ಹೆರಿಗೆಯಾಗಿದೆ. ಅರ್ಧ ಗಂಟೆಯಾದರೂ ಶಿಶುವಿನ ಹುರಿ ಕಟ್ ಮಾಡದ …
Read More »ಬೆಳಗಾವಿ: ಪ್ರಧಾನಿ ಮೋದಿ ಆಗಮನಕ್ಕೆ ವಾಹನ ನೀಡಲು ಅಧಿಕಾರಿಗಳ ನಿರಾಕರಣೆ!
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಕರ್ತವ್ಯಕ್ಕಾಗಿ ಸರ್ಕಾರಿ ಇಲಾಖೆಯ ವಾಹನಗಳು ಅಗತ್ಯ ಇವೆ. ಆದರೆ ಸಂಬಂಧಿಸಿದ ಇಲಾಖೆಯಿಂದ ವಾಹನಗಳನ್ನು ಬಿಡುಗಡೆ ಮಾಡಲು ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ 70ಕ್ಕೂ ಹೆಚ್ಚು ಇನ್ನೋವಾ ಹಾಗೂ ಸುಮೋ, ಬೊಲೆರೋ ಸೇರಿದಂತೆ ಇತರೆ ವಾಹನಗಳ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಆದರೆ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ
ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …
Read More »ಕಮಿಷನ್ ಕಿರುಕುಳ: ಗ್ರಾ.ಪಂ ಸದಸ್ಯೆ ರಾಜೀನಾಮೆ
ರಾಯಬಾಗ : ತಾಲ್ಲೂಕಿನ ಮೇಖಳಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ, ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಬಿಜಿಪಿ ಶಾಸಕ ಡಿ.ಎಂ. ಐಹೊಳೆ ಅವರ ಕ್ಷೇತ್ರವ್ಯಾಪ್ತಿ ಇದಾಗಿದ್ದು, ಕಮಿಷನ್ ಆರೋಪ ಕೇಳಿ ಬಂದಿದೆ. ‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ’14 …
Read More »ಸಿದ್ದರಾಮಯ್ಯ ಜಾತಿ ಧರ್ಮದ ರಾಜಕಾರಣ ಬಿಟ್ಟು ಬೇರೆ ಏನೂ ಮಾಡಿಲ್ಲ: ಶೋಭಾ ಕರಂದ್ಲಾಜೆ
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಜಾತಿ ಮತ್ತು ಧರ್ಮದ ರಾಜಕಾರಣ ಬಿಟ್ಟು ಬೇರೆ ಏನೂ ಮಾಡಲಿಲ್ಲ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಟೀಕಾಪ್ರಹಾರ ನಡೆಸಿದರು. ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಚುನಾವಣೆ ಬಂದಾಗಲೊಮ್ಮೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರು ರೈತರಿಗೆ ಏನೂ ಮಾಡಲಿಲ್ಲ ಎಂದು ನಿರಾದಾರ ಆರೋಪ ಮಾಡುತ್ತಾರೆ. ಇದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕಟುಕಿದರು. …
Read More »ರಾಜಕೀಯ ರಿ ಎಂಟ್ರಿ’ ಮುಂದೂಡಿದ ನಟ ಅನಂತ್ ನಾಗ್ : ‘ಬಿಜೆಪಿ’ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರು
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕಾರಣಾಂತರದಿಂದ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ. ಹೌದು. ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ …
Read More »ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳ ಪೈಕಿ 10ರಲ್ಲಿ ಮರಾಠಿ ಮತದಾರರೇ ನಿರ್ಣಾಯಕ.
ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳ ಪೈಕಿ 10ರಲ್ಲಿ ಮರಾಠಿ ಮತದಾರರೇ ನಿರ್ಣಾಯಕ. ಹೀಗಾಗಿ, ಮರಾಠಿ ಮತದಾರರ ಓಲೈಕೆಗೆ ಇನ್ನಿಲ್ಲದ ಕಸರತ್ತುಗಳು ನಡೆದಿವೆ. ಕೆಲವೇ ವರ್ಷಗಳ ಹಿಂದೆ 4ರಿಂದ 6 ಶಾಸಕರನ್ನು ಹೊಂದಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಈಗ ದೂಳೀಪಟವಾಗಿದೆ. ಆ ಎಲ್ಲ ಮತಗಳನ್ನು ಸೆಳೆಯಲು ರಾಜಕೀಯ ಪಕ್ಷಗಳು, ಟಿಕೆಟ್ ಆಕಾಂಕ್ಷಿಗಳೂ ಓಲೈಕೆ ಆರಂಭಿಸಿದ್ದಾರೆ. ಶಿವಾಜಿ ಮೂರ್ತಿ ಪ್ರತಿಷ್ಠಾಪನೆ, ಮರಾಠಿ ಸಾಹಿತ್ಯ ಸಮ್ಮೇಳನ, ಮರಾಠಿಗರೇ ಹೆಚ್ಚಿರುವ ಹಳ್ಳಿಗಳಲ್ಲಿ ಭೂಮಿಪೂಜೆ, ಮಹಾರಾಷ್ಟ್ರ …
Read More »ವರ್ತುಲ ರಸ್ತೆ: ಟೆಂಡರ್‌ಗೆ ಸರ್ಕಾರ ಅನುಮತಿ
ಬೆಳಗಾವಿ: ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ರಿಂಗ್ ರಸ್ತೆ ನಿರ್ಮಿಸಲು ಸರ್ಕಾರ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡಿದೆ. ಅಲ್ಲದೇ, ಕಳೆದ ಜನವರಿ 1ರಂದು ಟೆಂಡರ್ ಪ್ರಕ್ರಿಯೆಗೂ ಅನುಮತಿ ನೀಡಿದೆ. ತಮ್ಮ ಫಲವತ್ತಾದ ಭೂಮಿ ಹಾಳಾಗುತ್ತದೆ ಎಂದು 31 ಹಳ್ಳಿಗಳ ರೈತರು ಈ ರಿಂಗ್ ರಸ್ತೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಎರಡು ವರ್ಷಗಳಿಂದ ಇದರ ಕೆಲಸಗಳು ಆಮೆಗತಿಯಲ್ಲಿ ಸಾಗಿವೆ. ಮತ್ತೆ ಕೆಲವು ರೈತರು ನ್ಯಾಯಾಲಯದ ಮೆಟ್ಟಿಲೂ ಹತ್ತಿದ್ದಾರೆ. ಇದೆಲ್ಲರ ಆಚೆಗೂ ಸರ್ಕಾರದ …
Read More »ನಿವೃತ್ತಿ ವೇಳೆ ಇಡಗಂಟು ನೀಡಿ’
ಬೆಳಗಾವಿ: ನಿವೃತ್ತಿ ವೇಳೆ ಬಿಸಿಯೂಟ ತಯಾರಕ ಸಿಬ್ಬಂದಿಗೆ ಇಡಗಂಟು ಅಥವಾ ನಿವೃತ್ತಿ ವೇತನ ನೀಡಬೇಕೆಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೌಕರರು ಇಲ್ಲಿನ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ರವಾನಿಸಿದರು. ಈಗಾಗಲೇ ಸೇವೆಯಿಂದ ಬಿಡುಗಡೆಗೊಳಿಸಿದ 6 ಸಾವಿರ ನೌಕರರಿಗೆ ₹1 ಲಕ್ಷ ಇಡಗಂಟು ನೀಡಬೇಕು. …
Read More »
Laxmi News 24×7