Breaking News

ಜಿಲ್ಲೆ

ರಾಜ್ಯಕ್ಕೆ ಕೇಂದ್ರ ಕೊಟ್ಟಿದ್ದೆಷ್ಟು ಮೋದಿ ಅವರೇ: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಜಿಎಸ್‌ಟಿ ಸೇರಿ ರಾಜ್ಯದಿಂದ ಕೇಂದ್ರ ಸರಕಾರದ ಬೊಕ್ಕಸಕ್ಕೆ ತೆರಿಗೆ ಹಣ ಹರಿದು ಹೋಗುತ್ತಿದ್ದರೂ ರಾಜ್ಯಕ್ಕೆ ಕೊಟ್ಟಿದ್ದು ಎಷ್ಟು ಎಂಬುದು ರಾಜ್ಯಕ್ಕೆ ಬಂದಾಗ ಲೆಕ್ಕ ಕೊಡಿ ಮೋದಿ ಅವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.   ಕೇಂದ್ರ ಸರಕಾರದ ಪಾಲಿಗೆ ಕರ್ನಾಟಕವು ಕಾಮಧೇನು. ಅದರ ಖಜಾನೆ ತುಂಬುವಲ್ಲಿ ನಮ್ಮದು ದೊಡ್ಡ ಪಾಲಿದೆ. ದುರದೃಷ್ಟವಶಾತ್‌, ದೇಶದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ರಾಜ್ಯಕ್ಕೆ ತೆರಿಗೆ, ಜಿಎಸ್‌ಟಿಯಲ್ಲಿ ಸಮರ್ಪಕ ಪಾಲು ಸಿಗುವುದಿಲ್ಲ. …

Read More »

ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ

ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ.   ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ. ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ. ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ …

Read More »

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾಲ ಸಮಾಜದವರು ತಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮದುರ್ಗ ತಾಲೂಕಿನ ಪಂಚಗಾವ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಪಂಚಾಗಾವ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ …

Read More »

ವಿಧಾನಸೌಧಕ್ಕೆ ಪೇಶ್ವೆ ನಾಯಕ; ಬಿಜೆಪಿ ಉತ್ತರಿಸಲಿ -ಕುಮಾರಸ್ವಾಮಿ

ಬೆಂಗಳೂರು: ‘ವಿಧಾನಸೌಧದಲ್ಲಿ ಪೇಶ್ವೆ ವಂಶದ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ಬಿಜೆಪಿ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು, ತಾಕತ್ತು ತೋರಿಸುತ್ತಿಲ್ಲ ಏಕೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.   ಸರಣಿ ಟ್ವೀಟ್‌ ಮಾಡಿ, ‘ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ್ದ ಪೇಶ್ವೆಗಳ ವಂಶದ ವ್ಯಕ್ತಿಯನ್ನು ಸಿ.ಎಂ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂಬ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಬ್ರಾಹ್ಮಣ ಸಮೂಹವನ್ನು ನಿಂದಿಸಿಲ್ಲ. ಗರ್ಭಗುಡಿಯಲ್ಲಿ …

Read More »

ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ.   ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ …

Read More »

ಕಣಬರ್ಗಿ ಸಿದ್ದೇಶ್ವರ ಮಂದಿರದ ಭವ್ಯ ಕಳಸಾರೋಹಣ ಕಾರ್ಯಕ್ರಮ

ಬೆಳಗಾವಿ-: ಜಿಲ್ಲೆಯ ಕಣಬರ್ಗಿ ಗ್ರಾಮದ ಆರಾಧ್ಯ ದೇವರಾದ ಶ್ರೀ ಸಿದ್ದೇಶ್ವರ ಮಂದಿರದ ಪುರಾತನ ಕಟ್ಟಡವನ್ನು ಜಿರ್ಣೋದ್ದಾರ ಮಾಡಿ ನವೀಕೃತ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ಕಾಮಗಾರಿಗೆ ಅನೇಕ ಭಕ್ತರು ಸಹ ಉದಾರವಾಗಿ ದೇಣಿಗೆಯನ್ನು ನೀಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯದ ನವೀಕೃತ ಭವ್ಯ ಕಟ್ಟಡದ ಭವ್ಯ ಉದ್ಘಾಟನಾ, ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಶ್ರೀ ಸಿದ್ಧೇಶ್ವರ ವ್ಯವಸ್ಥಾಪಕ ಮಂಡಳಿ ಕಣಬರ್ಗಿ ಹಾಗೂ ಶ್ರೀ ಸಿದ್ದೇಶ್ವರ …

Read More »

ಹಾಸನ ಕ್ಷೇತ್ರಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ: ಹೆಚ್ ಡಿಕೆ ಪುನರುಚ್ಚಾರ

ಬೆಳಗಾವಿ: ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮುಖ್ಯವಾಗಿ ಭವಾನಿ ರೇವಣ್ಣ ಅವರು ಈ ಚುನಾವಣೆಯಲ್ಲಿ ಅನಿವಾರ್ಯ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಹಾಸನ ಟಿಕೆಟ್ ವಿಚಾರ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ. ಚುನಾವಣೆ ಗೆಲ್ಲಬೇಕಾದ ಹಿನ್ನಲೆಯಲ್ಲಿ ನಾವು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ನಮಗೆ 30 ರಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಈ ಕೊರತೆ ತುಂಬಿಕೊಳ್ಳಲು ಜನರ ವಿಶ್ವಾಸ ಪಡೆದುಕೊಳ್ಳುವ ಹೊಸ …

Read More »

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದರು’

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ಗೋಕರ್ಣ/ ಹಾಸನ: ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ರಾಜಕೀಯ ಗೊತ್ತಿಲ್ಲದ ನಳಿನ್ ಕುಮಾರ್ ಕಟೀಲ್ಗೆ ತಿಳುವಳಿಕೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ …

Read More »

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »