Breaking News

ಜಿಲ್ಲೆ

ಅಧಿವೇಶನ: ಪೂರ್ಣ ಕಲಾಪ ಅನುಮಾನ

ಬೆಂಗಳೂರು: ಪಕ್ಷದ ಪರ ಅಲೆ ಎಬ್ಬಿಸಲು ವಿವಿಧ ಕಡೆಗಳಲ್ಲಿ ಯಾತ್ರೆ ನಡೆಸುತ್ತಿರುವ ನಾಯಕರು, ಮತ್ತೊಮ್ಮೆ ಗೆಲ್ಲಲೇಬೇಕೆಂಬ ಹಟಕ್ಕೆ ಬಿದ್ದಿರುವ ಎಲ್ಲ ಪಕ್ಷದ ಶಾಸಕರು ಕ್ಷೇತ್ರದಲ್ಲೇ ಬೆವರು ಹರಿಸುತ್ತಿರುವುದರಿಂ ದಾಗಿ 15 ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕಲಾಪ ನಿಗದಿಯಾದಷ್ಟು ದಿನ ನಡೆಯುವುದೇ ಅನುಮಾನ.   ಈ ಅಧಿವೇಶನ ಮುಗಿದ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದೆ. ಮುಂದೆಯೂ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳುವ ಸಲುವಾಗಿ ಶಾಸಕರು ಹರಸಾಹಸ ಪಡುತ್ತಿದ್ದು, ಕ್ಷೇತ್ರದಲ್ಲೇ ಮೊಕ್ಕಾಂ …

Read More »

ಬಳ್ಳಾರಿಯಲ್ಲಿ 20 ಜನರ ಮೇಲೆ ಬೀದಿ ನಾಯಿ ದಾಳಿ, ನಾಲ್ವರು ಐಸಿಯುಗೆ ದಾಖಲು

ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ಬಳ್ಳಾರಿ: ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಚ್ಚಿದ ನಾಲ್ಕು …

Read More »

ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಅಗತ್ಯವೆಂದ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ದೇಶದ ರಾಜಕೀಯ ಸ್ಥಿತಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕುರಿತು ಮಕ್ಕಳಿಗೆ ಅರಿವು ಅಗತ್ಯ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು.   ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್ ಗೆ …

Read More »

ಅಂಬಲಿ ಹಳಸಿ ಕಂಬಳಿ ಬಿಸಿತಲೆ ಪರಾಕ್ ಎಂದು ಕಾರ್ಣಿಕ ನುಡಿದ ಗೊರವಯ್ಯ; ರೈತರು ಖುಷ್, ರಾಜಕಾರಣಿಗಳಿಗೆ ಢವ ಢವ

ಹಾವೇರಿ: ರಾಜ್ಯದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು (Mailara Karnikotsva) ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ (Farmers) ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ (Political Parties) ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ …

Read More »

ನೋಂದಣಿ: ನಕಲಿ ತಡೆಗೆ ತಮಿಳುನಾಡು ಮಾದರಿ- ಮುದ್ರಾಂಕ ?

ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಿರಾಸ್ತಿಗಳ ನೋಂದಣಿ ಮಾಡಿಸಿ ಪರರ ಆಸ್ತಿಗಳನ್ನು ಕಬಳಿಸುವವರನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡು ಮಾದರಿಯಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವಂತೆ ನೋಂದಣಿ ಮತ್ತು ಮುದ್ರಾಂಕ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ.   ಒಬ್ಬರ ಆಸ್ತಿಯನ್ನು ಬೇರೊಬ್ಬರು ನಕಲಿ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಿಸಿಕೊಂಡರೆ ಅಥವಾ ಸರ್ಕಾರಿ ಆಸ್ತಿಗಳನ್ನು ಪರಭಾರೆ ಮಾಡಿದರೆ ನೋಂದಣಿ ರದ್ದುಪಡಿಸಲು ನ್ಯಾಯಾಲಯದ ಮೊರೆಹೋಗಬೇಕಿದೆ. ತಮಿಳುನಾಡು ಸರ್ಕಾರವು ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು, ಅಂತಹ ನೋಂದಣಿಗಳನ್ನು …

Read More »

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ: ನಿತೇಶ್ ಪಾಟೀಲ

ಬೆಳಗಾವಿ  : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ ತಾಲೂಕಿನ ಉಗಾರ ಬದ್ರುಕ 1, ಗೋಕಾಕ್ ತಾಲೂಕಿನ ನಲ್ಲಾನಟ್ಟಿ 1 ಸದಸ್ಯ …

Read More »

ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ

ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು.   ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ …

Read More »

ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚಿಕ್ಕೋಡಿ: ಸಂಬಂಧಿಕ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ. 2018ರಿಂದ 2021ರವರೆಗೆ ಒಟ್ಟು 115 ಕೃತಿಗಳು ಆಯ್ಕೆಯಾಗಿ ಬಂದಿದ್ದವು. ನಿರ್ಣಾಯಕರು ಪ್ರತಿ ಸಾಲಿನಲ್ಲಿ ಮೂರು ಕೃತಿಗಳಂತೆ ಆಯ್ಕೆ ಮಾಡಿ ಒಟ್ಟು 12 ಕೃತಿಗಳಿಗೆ ಬಹುಮಾನ ನೀಡಿದ್ದಾರೆ. 2018ನೇ ಸಾಲಿನಲ್ಲಿ ಬೆಂಗಳೂರಿನ ಉಮಾ ಮುಕುಂದ ಅವರ ‘ಕಡೆ ನಾಲ್ಕು ಸಾಲು’ ಕವನ ಸಂಕಲನ, ಕೊಪ್ಪದ ದೀಪಾ …

Read More »

ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಿಂದ ಯಾರಾದರೂ ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.   ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ತಾರೀಹಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕಗಳ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ …

Read More »