ಬೆಳಗಾವಿ: ‘ಕಣ್ಣಿದ್ದವರಗಿಂತ ಕಣ್ಣಿಲ್ಲದವರೇ ಹೆಚ್ಚು ಸಮರ್ಥರು. ಅವರ ಆಲೋಚನಾ ಶಕ್ತಿ ಅಪರಿಮಿತ. ಸಾಮಾನ್ಯರಿಗಿಂತ ಹತ್ತು ಪಟ್ಟು ಬುದ್ಧಿವಂತಿಕೆ ಅವರಲ್ಲಿ ಇರುತ್ತದೆ. ಹಾಗಾಗಿ, ಯಾರನ್ನೂ ಹಗುರವಾಗಿ ಕಾಣಬಾರದು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ನಗರದಲ್ಲಿ ಶನಿವಾರ ನಡೆದ ಸಮರ್ಥನಂ ಅಂಗವಿಕಲರ ಸಂಸ್ಥೆ, ಪ್ರಜಾವಾಣಿ, ಇಂಡಸ್‌ಇಂಡ್ ಬ್ಯಾಂಕ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಸಹಯೋಗದಲ್ಲಿ ಆಯೋಜಿಸಿದ ಐದು ದಿನಗಳ …
Read More »ದಂಡ ಕಟ್ಟಿದ ಮೈಸೂರಿನ ಶಾಸಕ ಎಲ್.ನಾಗೇಂದ್ರ
ಮೈಸೂರು: ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11೧ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ. ಬಹುತೇಕ ವಾಹನ ಸವಾರರು ಈ ಆದೇಶ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಬಾಕಿ ಇರಿಸಿಕೊಂಡಿದ್ದ ದಂಡ ಕಟ್ಟುತ್ತಿದ್ದಾರೆ. ಇದೀಗ ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶೇ.50 ರಿಯಾಯಿತಿಯಲ್ಲಿ ದಂಡ ಕಟ್ಟಿದ್ದಾರೆ. ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಶೇ.50ರಷ್ಟು …
Read More »ದ.ರಾ.ಬೇಂದ್ರೆ ಕಾವ್ಯದಲ್ಲಿದೆ ಹಲವು ವೈಶಿಷ್ಟ್ಯ; ಪ್ರೊ.ಎನ್.ಬಿ. ಝರೆ
ಕಾಗವಾಡ: ಬೇಂದ್ರೆಯವರ ಕಾವ್ಯ ಹಲವು ವೈಶಿಷ್ಟ್ಯ ಗಳಿಂದ ಕೂಡಿದೆ. ಅದನ್ನು ಸುಲಭವಾಗಿ ಅರ್ಥೈಸಲು ಸಾಧ್ಯವಿಲ್ಲ. ಬೇಂದ್ರೆಯವರ ಕಾವ್ಯದಲ್ಲಿ ತಾಯಿ, ಅಜ್ಜಿ, ಹೆಂಡತಿ, ಪರಿಸರ, ಸಾಹಿತ್ಯದ ಹಲವು ಪ್ರಕಾರಗಳು ಪ್ರಭಾವವನ್ನು ಬೀರಿವೆ ಎಂದು ಕೆ.ಎ.ಲೋಕಾಪೂರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಬಿ. ಝರೆ ಅಭಿಪ್ರಾಯ ವ್ಯಕ್ತಪಡಿಸಿದರು. ಶುಕ್ರವಾರ ಸ್ಥಳೀಯ ಶಿವಾನಂದ ಮಹಾ ವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಿತ ಕಾಲೇಜು ಒಕ್ಕೂಟ ಹಾಗೂ ಕನ್ನಡ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಾ|ದ.ರಾ.ಬೇಂದ್ರೆಯವರ 127ನೆ ಜನ್ಮದಿನಾಚರಣೆಯ ಪ್ರಯುಕ್ತ …
Read More »ಅಥಣಿ| ವೃದ್ಧೆ ಸಾವು, 9 ಮಂದಿಗೆ ಗಾಯ
ಅಥಣಿ: ತಾಲ್ಲೂಕಿನ ಘಟನಟ್ಟಿ ಕ್ರಾಸ್ ಸಮೀಪ ಶನಿವಾರ ಕ್ರೂಸರ್ ಹಾಗೂ ಗೂಡ್ಸ್ ಲಾರಿ ಮಧ್ಯೆ ಮುಖಾ-ಮುಖಿ ಡಿಕ್ಕಿ ಸಂಭವಿಸಿ, ಒಬ್ಬ ವೃದ್ಧೆ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯವರಾದ ದೇವಕಿ ನಿಂಗಣ್ಣ ಕಿಚಡಿ (65) ಮೃತಪಟ್ಟವರು. ಈ ಕ್ರೂಸರ್‌ನಲ್ಲಿ 10 ಮಂದಿ ಯಲ್ಲಮ್ಮನ ಗುಡ್ಡಕ್ಕೆ ದರ್ಶನಕ್ಕೆ ಬಂದಿದ್ದರು. ಶನಿವಾರ ದೇವಿ ದರ್ಶನ ಮಾಡಿಕೊಂಡು ಮರಳಿ ಸಿಂದಗಿ ಕಡೆಗೆ ಹೊಟರಿದ್ದರು. ಅಥಣಿ ಮಾರ್ಗವಾಗಿ ಬರುತ್ತಿದ್ದ ಗೂಡ್ಸ್ ಲಾರಿ ಹಾಗೂ …
Read More »ಬೆಳಗಾವಿ: ‘ದಂಡ ಪಾವತಿಗೆ ಶೇ 50 ರಿಯಾಯಿತಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ದಂಡದ ಮೊತ್ತ ಪಾವತಿಸಲು ಫೆ.11ರವರೆಗೆ ಶೇ 50ರಷ್ಟು ರಿಯಾಯಿತಿ ನೀಡಲಾಗಿದೆ. ವಾಹನ ಸವಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ. ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 6.28 ಲಕ್ಷ ಪ್ರಕರಣಗಳಲ್ಲಿ ₹26 ಕೋಟಿ ದಂಡ ಪಾವತಿಯಾಗಬೇಕಿದೆ. ವಾಹನ ಸವಾರರು ತಮಗೆ ವಿಧಿಸಿದ ದಂಡದ …
Read More »ಪ್ರಮೋದ್ ಮುತಾಲಿಕ್ ಗೆ ಸಿಎಂ ಟಾಂಗ್
ವಿಜಯಪುರ; ; ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ ಬಜೆಟ್ ಘೋಷಣೆ ಗಳ ಪೈಕಿ ಕೇವಲ 10 ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದಿರು. ಬಜೆಟ್ …
Read More »ಆಂಬುಲೆನ್ಸ್ ಹಾಗೂ ಟ್ರ್ಯಾಕ್ಟರ್ ಭೀಕರ ಅಪಘಾತ; ರೋಗಿ ದುರ್ಮರಣ
ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ನಡುವೆ ಸಂಭವಿದ ಭೀಕರ ಅಪಘಾತದಲ್ಲಿ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ. ಅಕ್ಬರಸಾಬ್ ನೇಸರಗಿ (28) ಮೃತ ದುರ್ದೈವಿ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಅಕ್ಬರ್ ಸಾಬ್ ನೇಸರಗಿಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಹಾಗೂ ಆಂಬುಲೆನ್ಸ್ ಡಿಕ್ಕಿಹೊಡೆದಿದ್ದು, ಅದಾಗಲೇ ಅಪಘಾತದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅಕ್ಬರಸಾಬ್ ಕೊನೆಯುಸಿರೆಳೆದಿದ್ದಾನೆ. ಉಳಿದ …
Read More »ಬೆಳಗಾವಿ: ಜಿ.ಪಂ ಕಚೇರಿ ಮುಂದೆ ಹಿರಿಯರ ಧರಣಿ
ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡಿ ನಿವೃತ್ತರಾದ ಆಯಾಗಳ ಬೇಸಿಗೆ ರಜೆಯ ಬಾಕಿ ವೇತನ ನೀಡಬೇಕು ಹಾಗೂ ತಡೆಹಿಡಿಯಲಾದ ಆರು ತಿಂಗಳ ವೇತನವನ್ನೂ ಕೊಡಮಾಡಬೇಕು ಎಂದು ಆಗ್ರಹಿಸಿ, ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಹಿರಿಯರು ಜಿಲ್ಲಾ ಪಂಚಾಯಿತಿ ಮುಂದೆ ಶುಕ್ರವಾರ ಇಡೀ ದಿನ ಧರಣಿ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಆಯಾಗಳ ಸಂಘದ ನೇತೃತ್ವದಲ್ಲಿ ಸೇರಿದ ಹಲವು ಮಹಿಳೆಯರು ಧರಣಿ ಕುಳಿತರು. ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ …
Read More »ಕಲಾವಿದರನ್ನೂ ಬಿಡದ ಪರ್ಸೆಂಟೇಜ್; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಅಮಾನತು
ಬಳ್ಳಾರಿ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸರ್ಕಾರದ ಶೇ. 40 ಕಮಿಷನ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಇನ್ನಷ್ಟು ಅಕ್ರಮ ಹೊರಬಿದ್ದಿದೆ. ಈ ಹಿಂದೆ ಗುತ್ತಿಗೆದಾರರ ವಿಷಯದಲ್ಲಿ ಕಮಿಷನ್ ವಿರುದ್ಧ ಕೂಗೆದ್ದಿತ್ತು, ಈಗ ಕಲಾವಿದರೂ ಕಮಿಷನ್ ವಿರುದ್ಧ ದನಿ ಎತ್ತಿದ್ದಾರೆ. ಪರಿಣಾಮವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯೊಬ್ಬರು ಅಮಾನತುಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯಾಗಿರುವ ಸಿದ್ದಲಿಂಗೇಶ್ವರ್ ರಂಗಣ್ಣನವರ್ ಅಮಾನತು ಆದವರು. ಇವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ …
Read More »ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ: ಕೋಡಿಮಠದ ಶ್ರೀ
ಜಮಖಂಡಿ ಫೆಬ್ರವರಿ 4: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ಭರದಿಂದ ಸಾಗುತ್ತಿದೆ. ಇನ್ನೇನು ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳು ಪ್ರಚಾರ ಕಾರ್ಯಯವನ್ನು ಚುರುಕುಗೊಳಿಸಲಿವೆ. ಈ ನಡುವೆ ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಮುಂಚುಣಿಯಲ್ಲಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಮತ್ತೊಂದು ರಾಜಕೀಯ ಭವಿಷ್ಯ …
Read More »
Laxmi News 24×7