ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ಸರ್ವೇಗಳು ಕೂಡ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ಆಗ್ತಾ ಇವೆ. ಇದರ ಬೆನ್ನಲ್ಲೇ ರಾಯಚೂರು ಜಿಲ್ಲೆಯಲ್ಲಿ ವಿಭಿನ್ನವಾಗಿ ಅಭ್ಯರ್ಥಿಯ ರಾಜಕೀಯ ಭವಿಷ್ಯ ನುಡಿದಿದ್ದಾನೆ ಓರ್ವ ವ್ಯಕ್ತಿ. ಹೌದು, ನಾಗರ ಹಾವು ಹಿಡಿದು ಕುತ್ತಿಗೆಗೆ ಹಾಕೊಂಡು ಚುನಾವಣಾ ಭವಿಷ್ಯ ನುಡಿದ್ದಾನೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ …
Read More »ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ: ಕುಮಠಳ್ಳಿ
ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದರು 2ಕೋಟಿ 20ಲಕ್ಷ ರೂ ವೆಚ್ಚದ ಶೆಡಶಾಳ ರಸ್ತೆ ಕಾಮಗಾರಿಕೆ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಶ್ರೀ ಲಕ್ಷ್ಮಿ ದೇವಸ್ಥಾನ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಇಂಚಗೇರಿ ಮಠದ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 57ಲಕ್ಷ ರೂ ಮೊತ್ತದ ಗೋಕಾಕ್ ಮುಖ್ಯ ರಸ್ತೆಯಿಂದ ಮಂಗಸೂಳಿ ತೋಟದ ರಸ್ತೆ ವರೆಗೆ ಸಿ. …
Read More »ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ.: ಬಾಲಚಂದ್ರ ಜಾರಕಿ
ಬೆಳಗಾವಿ: ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ, ಡಿ.ಕೆ. ಶಿವಕುಮಾರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕ ದ್ವೇಷ, ನಿಂದನೆ ಮಾಡುವುದು ಬೇಡ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಮುಗಿದು ಮನವಿ ಮಾಡಿದರು. ಗೋಕಾಕ ತಾಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ. ರಾಜಕೀಯವಾಗಿ ಎಲ್ಲರೂ ಬೆಳೆದಿದ್ದೀರಿ, ಬಹಿರಂಗ ಹೇಳಿಕೆ ನೀಡುವುದು ಬೇಡ. …
Read More »ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು …
Read More »ಕವಿಯತ್ರಿಯರ ಸಮ್ಮೇಳನ ಸಂಪನ್ನ
ಬೆಳಗಾವಿ: ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಸಂಸ್ಥೆ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ 22ನೇ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಸೋಮವಾರ ಸಂಪನ್ನಗೊಂಡಿತು. ಪಂಜಾಬ್‌ನ ಅಮೃತಸರದಲ್ಲಿ 23ನೇ ಸಮ್ಮೇಳನ ನಡೆಸುವ ನಿರ್ಣಯ ಕೈಗೊಳ್ಳಲಾಯಿತು. ಪದಾಧಿಕಾರಿಗಳ ಆಯ್ಕೆ: ಆಲ್ ಇಂಡಿಯಾ ಪೋಯಿಟ್ ಕಾನ್ಫರೆನ್ಸ್(ಎಐಪಿಸಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಸ್ಸಾಂನ ಮೋನೋಮತಿ ಕುರಮಿ, ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಕೋಸಗಿ, ಮಂಗಲಾ ಮೆಟಗುಡ್ಡ, ಜ್ಯೋತಿ ಬದಾಮಿ, ಡಾ.ಕೆ.ಪಿ.ಸುಧೀರಾ, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಸರೋಜಾ …
Read More »ಪಂಚಮಸಾಲಿ ಮೀಸಲಾತಿ: ಆಯೋಗದ ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ …
Read More »ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ
ಬೆಳಗಾವಿ: ರೈತರು ಸಾವಯವ ಕೃಷಿಗೆ ಆದ್ಯತೆ ನೀಡುವಂತೆ ದೇಶದ ಒಂದು ಲಕ್ಷ ಹಳ್ಳಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ನಗರದಲ್ಲಿ ಎರಡು ದಿನಗಳ ಕಾಲ ಜರಗಿದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊನೆಯ ದಿನವಾದ ಸೋಮವಾರ ಸಭೆಯ ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ, ಕೃಷಿ ಸಚಿವ ಬಿ.ಸಿ. ಪಾಟೀಲ್, ರೈತ …
Read More »ಎಸಿಪಿ ನಾರಾಯಣ ಭರಮಣಿ ವರ್ಗಾವಣೆ ಗೊಳಿಸಿ ಆದೇಶ
ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ. ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು …
Read More »ಜಾರಕಿಹೊಳಿ ‘ಸಿಡಿ’ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಕೈವಾಡ : ಮಾಜಿ ಶಾಸಕ ನಾಗರಾಜ್ ಹೊಸ ಬಾಂಬ್
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಕೈವಾಡವಿದೆ ಎಂದು ಮಾಜಿ ಶಾಸಕ ಹಾಗೂ ರಮೇಶ್ ಜಾರಕಿಹೊಳಿ ಆಪ್ತ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವ ವಿಚಾರ ಗೊತ್ತಾಯ್ತು, ಈ ವಿಚಾರವನ್ನು ನಾನು 2 ಬಾರಿ ರಮೇಶ್ ಗೆ ಹೇಳಿದ್ದೆ, ಅವರು ಇಂತಹ ನೂರು ಸಿಡಿ ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು. ಸಿಡಿ …
Read More »ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಪತ್ನಿಗೆ ಚಾಕು ಇರಿದ ಪತಿರಾಯ
ಬೆಂಗಳೂರು: ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಗಂಡನನ್ನೇ ಪತ್ನಿಗೆ ಚಾಕು ಇರಿದ ಘಟನೆ ನಡೆದಿದೆ.ನಗರದ ಜಕ್ಕೂರು ಬಳಿಯ ಮುನೇಶ್ವರ ಬೀದಿಯಲ್ಲಿ ನಡೆದಿದೆ. 33 ವರ್ಷದ ಜಯಶ್ರೀ ಮೃತ ದುರ್ದೈವಿ. ಇವರಿಬ್ಬರು 15 ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ಮಕ್ಕಳ ಜೊತೆ ಮುನೇಶ್ವರ ಬೀದಿಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ನಾಗರಾಜ್ ಹಣ ನೀಡುವಂತೆ ಪದೇ ಪದೇ ಪತ್ನಿಗೆ ಪೀಡಿಸುತ್ತಿದ್ದ. ಇದರಿಂದ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ನಾಗರಾಜ್ ಕೂಲಿ ಕೆಲಸ …
Read More »
Laxmi News 24×7