ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. 73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮುಂಬೈನವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ …
Read More »ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು
ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಯುದ್ಧ ವಿಮಾನಗಳ ಪತನದಲ್ಲಿ ಮೃತಪಟ್ಟ ಪೈಲೆಟ್ ಬೆಳಗಾವಿ ಮೂಲದವರು
ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್ 30 ಎಂಕೆಐ ಹಾಗೂ ಮಿರಾಜ್-2000 ಯುದ್ಧ ವಿಮಾನಗಳ ಮಧ್ಯೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ (34) ಬೆಳಗಾವಿ ಮೂಲದವರು. ಇಲ್ಲಿನ ಗಣೇಶಪುರದ ಮನೆಯಲ್ಲಿ 1987ರಲ್ಲಿ ಜನಿಸಿದ ಅವರು, ಬಾಲ್ಯವನ್ನು ಇಲ್ಲಿಯೇ ಕಳೆದಿದ್ದರು. ನಗರದ ಕೇಂದ್ರೀಯ ವಿದ್ಯಾಲಯ-2ರಲ್ಲಿ ಶಿಕ್ಷಣ ಪೂರೈಸಿದ್ದರು. ಪೈಲೆಟ್ ಆದ ಮೇಲೆ ಪತ್ನಿ, ಮಕ್ಕಳ ಸಮೇತ ಗ್ವಾಲಿಯರ್‌ನಲ್ಲಿ ನೆಲೆಸಿದ್ದರು. 2009ರಿಂದ ಭಾರತೀಯ …
Read More »ಬಿಎಸ್‌ವೈಗೆ ಕಲ್ಲು ಎಸೆದರೆ ಪಕ್ಷಕ್ಕೆ ಪೆಟ್ಟು: ಬಿ.ವೈ ವಿಜಯೇಂದ್ರ
ವಿಜಯಪುರ: ‘ಯಡಿಯೂರಪ್ಪ ಅವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಪೆಟ್ಟು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಿಎಸ್‌ವೈ ಬಗ್ಗೆ ಶಾಸಕ ಬಸನಗೌಡ ಯತ್ನಾಳ ಇನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಯತ್ನಾಳ ಬಗ್ಗೆ ನಮಗೆ ವೈಯಕ್ತಿಕ ವಿರೋಧವಿಲ್ಲ. …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’
ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ 15 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿ ಈಗ ಮರೆತಿದ್ದಾರೆ. ಆದ್ದರಿಂದ …
Read More »ಐವರು ಶತಾಯುಷಿಗಳಿಗೆ ಸನ್ಮಾನ
ಅಂಕಲಗಿ: ಹಿರಿಯರು ನಮ್ಮ ಇಂದಿನ ಬಹು ದೊಡ್ಡ ಆಸ್ತಿ. ಅವರ ನಡೆ, ನುಡಿ, ಆದರ್ಶಗಳು ನಮಗೆಲ್ಲ ಸ್ಫೂರ್ತಿ ಎಂದು ಸತೀಶ ಶುಗರ್ಸ್‌ನ ಉಪಾಧ್ಯಕ್ಷ ಎಲ್.ಆರ್.ಕಾರಗಿ ಹೇಳಿದರು. ಸಮೀಪದ ಮಿಡಕನಟ್ಟಿ ಗ್ರಾಮದಲ್ಲಿ ಶುಕ್ರವಾರ ಶತಾಯುಷಿಗಳಿಗಾಗಿ ಹಮ್ಮಿಕೊಂಡ ಶತಮಾನೋತ್ಸವ ಸಮಾರಂಭದಲ್ಲಿ ಐವರು ಶತಾಯುಷಿಗಳನ್ನು ಕಾರಗಿ ಪರಿವಾರದ ಪರವಾಗಿ ಸನ್ಮಾನಿಸಿ ಮಾತನಾಡಿದರು. ಶತಾಯುಷಿಗಳಾದ ರಾಮಸಿದ್ದಪ್ಪ ಹಾಲಪ್ಪ ಕಾರಗಿ (105), ಹಾಲಪ್ಪ ಸಿದ್ದಪ್ಪ ಸಂಸುದ್ದಿ (104), ಶಿವಲಿಂಗಪ್ಪ ಶಿದ್ಲಿಂಗಪ್ಪ ಪಾಟೀಲ (ನಬಾಪೂರ)-102), ಭೀಮಪ್ಪ ಹನುಮಂತಪ್ಪ …
Read More »‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನ
ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನರಾಗಿದ್ದಾರೆ. ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಅಶೋಕ ಚಂದರಗಿ ಪಡೆದಿದ್ದಾರೆ. ಕಳೆದ ಬಾರಿ ಇದೇ ಪ್ರಶಸ್ತಿಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿತ್ತು. ಎಂಇಎಸ್ ಉಪಟಳದ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಕನ್ನಡಪರ ಹೋರಾಟವನ್ನು ಜೀವಂತವಾಗಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ತಡರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ.. ಸಿಎಂ, ಬಿಜೆಪಿ ನಾಯಕರಿಂದ ಸ್ವಾಗತ
ಹುಬ್ಬಳ್ಳಿ/ಧಾರವಾಡ/ಬೆಳಗಾವಿ: ವಿಶೇಷ ವಿಮಾನದ ಮೂಲಕ ದೆಹಲಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ತಡರಾತ್ರಿ ನಗರಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಇಲ್ಲಿನ ಡೆನಿಸನ್ ಹೋಟೆಲ್ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದು ಹುಬ್ಬಳ್ಳಿ, ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ …
Read More »ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ ಬರುವ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳು ಆದಷ್ಟು ಬೇಗನೇ ಪೂರ್ಣ ಮಾಡುವಂತೆ ಸೂಚಿಸಿದರು. ಕಲ್ಲೋಳಿ ಪಟ್ಟಣದ ನಾಗರೀಕರಿಗೆ …
Read More »
Laxmi News 24×7