*ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …
Read More »102 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಜ್ಜಾದ ರೆಡ್ಡಿ; ಜ.16ಕ್ಕೆ 25 ಅಭ್ಯರ್ಥಿಗಳ ಘೋಷಣೆ
ಬಳ್ಳಾರಿ: ಬಿಜೆಪಿ ಮೇಲೆ ಮುನಿಸಿಕೊಂಡು ಪ್ರತ್ಯೇಕ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಗಣಿನಾಡು ಬಳ್ಳಾರಿ, ದಕ್ಷಿಣ ಭಾರತದಲ್ಲೇ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅ ಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜನಾರ್ದನ ರೆಡ್ಡಿ ಈಗ ಬಿಜೆಪಿ ಮೇಲೆಯೇ ಮುನಿಸಿಕೊಂಡು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ …
Read More »ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಆಶ್ರಮದತ್ತ ಭಕ್ತರು ಬರದಂತೆ ಮನವಿ
ವಿಜಯಪುರ: ಸಿದ್ದೇಶ್ವರ ಶ್ರೀಗಳ ಅನಾರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ತಂಡ ಶ್ರೀಗಳ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಮತ್ತೊಂದೆಡೆ ಭಕ್ತರ ದಂಡು ಆಶ್ರಮದತ್ತ ಆಗಮಿಸುತ್ತಿದ್ದು, ಶ್ರೀಗಳ ಆರೋಗ್ಯದ ದೃಷ್ಟಿಯಿಂದ ಆಶ್ರಮಕ್ಕೆ ಆಗಮಿಸದೇ ಭಕ್ತರು ಸಹಕರಿಸಬೇಕು ಎಂದು ಆಶ್ರಮದ ಸಾಧಕರು ಮನವಿ ಮಾಡುತ್ತಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆಗಾಗಿ ಬಿಎಲ್ ಡಿಇ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ತಂಡ ಟೊಂಕ ಕಟ್ಟಿದೆ. ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ವೈದ್ಯರಾದ ನ್ಯೈರೋಲಾಜಿಸ್ಟ್ ಡಾ.ಎಸ್.ಬಿ.ಪಾಟೀಲ, …
Read More »ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್
ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …
Read More »ಮೀಸಲಾತಿ | ರಂಗನ ಮಂಗ ಮಾಡಲು ಹೊರಟಿದ್ದಾರೆ” H.D.K
ತುಮಕೂರು: ಒಕ್ಕಲಿಗ, ಲಿಂಗಾಯತ ಸಮುದಾಯದ ಮೀಸಲಾತಿ ಸಂಬಂಧ ಪ್ರವರ್ಗ ಬದಲಾವಣೆ ಮಾಡುವ ಮೂಲಕ ‘ರಂಗನ ಮಂಗ ಮಾಡಲು’ ಬಿಜೆಪಿಯವರು ಹೊರಟಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಶುಕ್ರವಾರ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರವರ್ಗ ಬದಲಾವಣೆ ಮಾಡಿರುವುದರಿಂದ ಎರಡೂ ಸಮುದಾಯಗಳಿಗೂ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಆಗುವುದಿಲ್ಲ. ಪ್ರವರ್ಗ ಬದಲಾವಣೆ ಮಾಡಿರುವುದೇ ಸಾಧನೆ. ಈವರೆಗೆ ಮೂಗಿಗೆ ತಪ್ಪ ಹಚ್ಚುತ್ತಿದ್ದವರು, ಈಗ ಹಣೆಗೆ ಹಚ್ಚಿದ್ದಾರೆ. …
Read More »ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*
ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …
Read More »ಬೆಳಗಾವಿಗೆ ಗಡಿ ಸಂರಕ್ಷಣ ಆಯೋಗ ಕಚೇರಿ ಕೂಗು
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಗಡಿ ವಿವಾದ ಮತ್ತೆ ಸದ್ದು ಮಾಡುತ್ತಿರುವುದು ಗಡಿ ಭಾಗದಲ್ಲಿ ಹಲವು ಹೊಸ ಚಟುವಟಿಕೆಗಳಿಗೆ ಜೀವ ನೀಡಿದೆ. ಗಡಿ ಅಭಿವೃದ್ಧಿಗಾಗಿರುವ ಕಚೇರಿಗಳ ಸ್ಥಾಪನೆ ವಿಷಯ ಪ್ರಧಾನವಾಗಿ ಮುನ್ನೆಲೆಗೆ ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆಲವು ದಿನಗಳ ಹಿಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಸಿಎಂಗಳ ಸಭೆ ನಡೆಸಿ ಎರಡೂ ರಾಜ್ಯಗಳ ಗಡಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ವಿಷಯ ಪ್ರಸ್ತಾವಿಸಿದ ಬಳಿಕ ಸುವರ್ಣ …
Read More »ಸಿದ್ದೇಶ್ವರ ಸ್ವಾಮೀಜಿ ಯೋಗಕ್ಷೇಮ ವಿಚಾರಿಸಿದ ಯತಿಗಳು
ಬಿಜಾಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ವಿವಿಧ ಯತಿಗಳು ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಸ್ವಾಮೀಜಿ ವಿಜಯಾನಂದಜಿ, ಸ್ವಾಮೀಜಿ ಸ್ವಾಮಿ ಸುಮೇಧಾನಂದಜಿ, ಸ್ವಾಮೀಜಿ ಸ್ವಾಮಿ ನರೇಶಾನಂದಜಿ, ಸ್ವಾಮೀಜಿ ಶಾರದೇಶಾನಂದಜಿ, ಸ್ವಾಮೀಜಿ ಸುಖದೇವಾನಂದಜಿ ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯದ ನಡುವೆಯೂ ಭಜನೆ ಮಾಡಲು ಆದೇಶ ನೀಡಿದರು. ಅದರಂತೆ ಸ್ಥಳದಲ್ಲೇ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಯತಿಗಳು ಭಜನೆ ಮಾಡಿ ಆಶಯ ಪೂರೈಸಿದರು.
Read More »ಕುಮ್ಕಿ ಜಮೀನು ಸಮಸ್ಯೆಗೆ ಪರಿಹಾರ: ಸಚಿವ ಆರ್. ಅಶೋಕ್
ಸುವರ್ಣವಿಧಾನಸೌಧ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ಐದಾರು ಜಿಲ್ಲೆಗಳಲ್ಲಿರುವ ಕುಮ್ಕಿ ಜಮೀನು ಸಮಸ್ಯೆ ಕುರಿತಾಗಿ ಸಾಧಕ-ಬಾಧಕಗಳು, ಕಾನೂನು ಪರಿಣಾಮಗಳನ್ನು ಕೂಲಂಕುಷವಾಗಿ ಚರ್ಚಿಸಿ ಪರಿಹಾರ ರೂಪದಲ್ಲಿ ಹೊಸ ಕಾಯ್ದೆ ತರುವ ಚಿಂತನೆ ಸರ್ಕಾರದ್ದಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಪರಿಷತ್‌ನಲ್ಲಿ ಬುಧವಾರ ಬಿಜೆಪಿ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಸರ್ಕಾರ ಸಕಾರಾತ್ಮಕ ಚಿಂತನೆ ಹೊಂದಿದೆ ಎಂದು ತಿಳಿಸಿದರು. ಕನ್ನಡ, …
Read More »ಮಿತಿಮೀರಿದ ಅಡಿಕೆ ಬೆಳೆಯಿಂದ ಅಸಮತೋಲನ: ಸದನ ಆತಂಕ
ಬೆಳಗಾವಿ: ಬೇಕಾಬಿಟ್ಟಿಯಾಗಿ ಅಡಿಕೆ ಬೆಳೆಯನ್ನು ಬಯಲುಸೀಮೆ ಸಹಿತ ಹಲವು ಜಿಲ್ಲೆಗಳಲ್ಲಿ ವಿಸ್ತರಣೆ ಮಾಡುತ್ತಿರುವುದು ಅಪಾಯಕಾರಿ. ಇದರಿಂದ ಮುಂದೆ ಬೆಳೆಗಳ ಅಸಮತೋಲನ ಉಂಟಾಗುವ ಭೀತಿ ಇದೆ ಎಂಬ ಕಳವಳ ಬುಧವಾರ ವಿಧಾನಸಭೆಯಲ್ಲಿ ವ್ಯಕ್ತವಾಯಿತು. ಕೃಷಿ ಎದುರಿಸುತ್ತಿರುವ ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ವಿಷಯ ಪ್ರಸ್ತಾವಿಸಿ, ಅಡಿಕೆ ಬೆಳೆ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವುದನ್ನು ನೋಡಿದರೆ ಅದುವೇ ರೈತರಿಗೆ ಮಾರಕವಾಗುವ ದಿನಗಳು …
Read More »
Laxmi News 24×7