ಬೆಳಗಾವಿ: ‘ಶಿಕ್ಷಣ ರಂಗದಲ್ಲಿ ರಾಜ್ಯ ಸರ್ಕಾರ ಮಾಡದ ಕೆಲಸವನ್ನು ಮಠ-ಮಾನ್ಯಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಿವೆ. ಗ್ರಾಮೀಣ ಭಾಗದ ಬಡ ಮಕ್ಕಳ ಬದುಕು ರೂಪಿಸಿವೆ’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ ಶ್ಲಾಘಿಸಿದರು. ಇಲ್ಲಿನ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ನಲ್ಲಿ ಲಿಂ. ಡಾ.ಶಿವಬಸವ ಸ್ವಾಮೀಜಿ 133ನೇ ಜಯಂತಿ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಡಾ.ಶಿವಬಸವ ಸ್ವಾಮೀಜಿ ಅವರ ವಸ್ತು ಸಂಗ್ರಹಾಲಯ ಉದ್ಘಾಟನೆ ಮತ್ತು ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ …
Read More »ಬೇಕರಿ ಸಿಬಂದಿಗೆ ಮನಸೋ ಇಚ್ಛೆ ಹಲ್ಲೆ ಮೂವರ ಬಂಧನ
ಬೆಂಗಳೂರು: ಚಹಾ ಹಾಗೂ ಸಿಗರೇಟ್ ಕೊಡುವ ವಿಚಾರದಲ್ಲಿ ಕುಂದಲಹಳ್ಳಿ ಗೇಟ್ ಬಳಿಯ ಬೇಕರಿ ಸಿಬಂದಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪಕ್ಕದ ಅಂಗಡಿಯ ಮಾಲಕನೇ ತನ್ನ ಸಹಚರರ ಮೂಲಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ಸಂಬಂಧ ನಾಲ್ವರನ್ನು ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ನಡೆದ ಬೇಕರಿಯ ಪಕ್ಕದ ಅಂಗಡಿಯ ಮಾಲಕ ಮಂಜುನಾಥ್, ಡೆಲಿವರಿ ಬಾಯ್ ಅಶ್ವತ್ಥ ನಗರದ ಕಾರ್ತಿಕ್, ಅಲ್ಯೂಮಿನಿಯಂ ಕೆಲಸ …
Read More »ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: C.M. ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 10 : ರುಡ್ ಸೆಟ್ ನಂತಹ ಉತ್ತಮ ತರಬೇತಿ ಕೇಂದ್ರದಿಂದ ಕರ್ನಾಟಕದ ಮಕ್ಕಳು ಲಾಭವನ್ನು ಪಡೆದು, ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶನಿವಾರ ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪ್ರಧಾನ ಮಂತ್ರಿಗಳು ಕೌಶಲ್ಯ ಭಾರತದಡಿ ಶೇ 44 ರಷ್ಟಿರುವ ಯುವಕರಿಗೆ ಕೌಶಲ್ಯ …
Read More »ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ
ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಅದು ಎಲ್ಲಿ ಅಂತೀರಾ ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ 2023 ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕಲಾಗಿದೆ. ಇದರ ಕುರಿತು ಗ್ರಾಮಸ್ಥರು ಸೂಚನಾ ಫಲಕ ಅಳವಡಿಸುವ ಮೂಲಕ ಯಾವುದೇ ಪಕ್ಷ ಅಥವಾ ಸ್ವತಂತ್ರ ವ್ಯಕ್ತಿಗಳು ಚುನಾವಣಾ ಪ್ರಚಾರಕ್ಕಾಗಿ ಗ್ರಾಮದಲ್ಲಿ ಪ್ರಚಾರ ಅಥವಾ ಸಭೆ ನಡೆಸಬಾರದು, ಖಾನಾಪುರ ತಾಲೂಕಿನ ಶಾಸಕರು ಹಾಗೂ ಇತರೆ ಪಕ್ಷಗಳ …
Read More »ಕೊರೆಯುವ ಚಳಿಗೆ ವೃದ್ಧ ಬಲಿ
ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ. ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ ಡಾ. ಸಂಜೀವ ಪಾಟೀಲ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ಕೊನೆಯ ಶನಿವಾರದಂದು ನಡೆಸುತ್ತಿರುವ ಫೋನ್ ಇನ್ ಮೂರನೇ ಕಾರ್ಯಕ್ರಮದಲ್ಲಿಯೂ ಜನರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಎಸ್ಪಿ ಸ್ಪಂದನೆ ಮಾಡಿದ್ದಕ್ಕೆ ಜನರು ಕೃತಜ್ಞತೆ ತಿಳಿಸಿದರು. ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ …
Read More »ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ …
Read More »ಬೆಳಗಾವಿಯಲ್ಲಿ ದೇಶದ ಮೊದಲ ಸೆನ್ಸಾರ್ ಕಸದ ತೊಟ್ಟಿ! ವಿಶೇಷತೆ ಏನು?
ಬೆಳಗಾವಿ: ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಪರಿಸರ ಹಾಳಾಗುತ್ತಿರುವುದನ್ನು ತಡೆಯಲು ಶಾಸಕ ಅಭಯ ಪಾಟೀಲ್ ಅವರು ದೇಶದಲ್ಲೇ ಮೊದಲ ಸೆನ್ಸಾರ್ ತಂತ್ರಜ್ಞಾನ ಆಧಾರಿತ ಭೂಗತ ಕಸದ ತೊಟ್ಟಿಗಳನ್ನು ಬೆಳಗಾವಿಯ ತಮ್ಮ ಕ್ಷೇತ್ರದಲ್ಲಿ ಅಳವಡಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ಮತ ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ಅಂಡರ್ ಗ್ರೌಂಡ್ ಡಸ್ಟ್‌ಬಿನ್ (ಭೂಗತ ಕಸದ ತೊಟ್ಟಿ)ಯನ್ನು ಅಳವಡಿಸಿದ್ದಾರೆ. ಒಟ್ಟು 24 ಕಸದ ತೊಟ್ಟಿಗಳಿಗೆ ಆರ್ಡರ್ ಮಾಡಲಾಗಿದ್ದು, 18 ತೊಟ್ಟಿ ಗಳು ಕಾರ್ಯ ನಿರ್ವಹಿಸುತ್ತಿವೆ. ಸಂಪೂರ್ಣ …
Read More »ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಬಸ್ ಗಳಿಲ್ಲದೇ …
Read More »ಸತ್ತು ಹೋಗಿರುವ M.E.S.ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ: ಲಕ್ಷ್ಮಣ ಸವದಿ
ಸತ್ತು ಹೋಗಿರುವ ಎಮ್.ಇ.ಎಸ್ ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ ಎಂದು ಮಾಜಿ ಉಪ ಮುಖ್ಯ ಮಂತ್ರಿ , ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜಕೀಯ ಲಾಭಕ್ಕಾಗಿ ಗಡಿ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಈಗಾಗಲೇ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮರಾಠ ಸಮಾಜ ಭಾರತೀಯ ಜನತಾ ಪಕ್ಷದ …
Read More »
Laxmi News 24×7