ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ಜೆಸಿಎಸ್ ಆವರಣದಲ್ಲಿನ ಉರ್ದು ಹೆಣ್ಣು ಮಕ್ಕಳ ಶಾಲೆಯ ಕೊಠಡಿ, ಅದರಂತೆ ಮರಾಠಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು. ಈ ಸಂದರ್ಭದಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳೊಂದಿಗೆ,ದುವಾ ಅದರಂತೆ ಮರಾಠಿ ಶಾಲೆಯ ಮಕ್ಕಳೊಂದಿಗೆ ಪೂಜೆ ಸಲ್ಲಿಸಿ ಮಕ್ಕಳಲ್ಲಿ ಸರಳತೆಯಿಂದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಿಕ್ಷಕರಿಂದ ಶಾಸಕಿ ಅಂಜಲಿ ಅವರನ್ನು …
Read More »ಅಕ್ರಮಕ್ಕೆ ಅಧಿಕಾರಿಗಳ ನೆರವು ಚಿಲುಮೆ ಆಯಪ್ ರೂಪಿಸಿದ್ದ ವ್ಯಕ್ತ ವಿಚಾರಣೆ
ಬೆಂಗಳೂರು: ಮತದಾರರ ದತ್ತಾಂಶ ಕಳವು ಆರೋಪ ಹೊತ್ತಿರುವ ‘ಚಿಲುಮೆ’ ಸಂಸ್ಥೆಯ ಅಕ್ರಮಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೆಲವು ವಲಯ ಅಧಿಕಾರಿಗಳೇ ಬೆಂಬಲವಾಗಿದ್ದರು ಎನ್ನುವ ಅಂಶ ಪೊಲೀಸ್ ತನಿಖೆಯಿಂದ ಹೊರಬಿದ್ದಿದೆ. ‘ಚಿಲುಮೆ’ ಸಮೀಕ್ಷಾ ತಂಡವು ಬೆಂಗಳೂರಿನ ಬಹುತೇಕ ವಿಧಾನ ಸಭಾ ಕ್ಷೇತ್ರಗಳ ಸಮೀಕ್ಷೆ ನಡೆಸಿದ್ದು, ಅದಕ್ಕೆ ಬಿಬಿಎಂಪಿಯ ವಲಯದ ಕಂದಾಯ ಅಧಿಕಾರಿಗಳು (ಆರ್‌ಒ) ಹಾಗೂ ಸಿಬ್ಬಂದಿ ನೆರವು ನೀಡಿ ದ್ದರು. ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಈ ಸಂಸ್ಥೆಗೆ ಅಧಿಕಾರಿಗಳೇ …
Read More »ಕಾಮಿಡಿ ನಟಿ ನಯನಾ ವಿರುದ್ಧ ನಿಂದನೆ ಆರೋಪ, ಕೇಸ್ ದಾಖಲು
ಕಾಮಿಡಿ ನಟಿ ನಯನಾ ವಿರುದ್ಧ ಕೇಸ್ ದಾಖಲಾಗಿದೆ. ಜೀವ ಬೆದರಿಕೆ ಮತ್ತು ನಿಂದನೆ ಆರೋಪದಲ್ಲಿ ಕೇಸ್ ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ನಯನಾ ಅವರು ಮತ್ತೊಬ್ಬ ಕಾಮಿಡಿ ನಟ ಸೋಮಶೇಖರ್‌ಗೆ ಬೆದರಿಕೆ ಹಾಕಿದ್ದಾರೆ (Crime news) ಎಂದು ಆರೋಪಿಸಲಾಗಿದೆ. ಸೋಮಶೇಖರ್ ರಿಂದ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ಸೋಮಶೇಖರ್ ತಂಡ ಭಾಗವಹಿಸಿತ್ತು. ಖಾಸಗಿ ಚಾನಲ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ಬಹುಮಾನದ ಹಣವಾಗಿ 3 ಲಕ್ಷ ಹಣ …
Read More »ಇಬ್ರಾಹಿಂ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಬೆಳಗಾವಿ : ‘ಕುಮಾರಸ್ವಾಮಿ’ ಸಿಎಂ ಆಗಲಿ ಎಂದು ‘ಕೈ’ ನಾಯಕರು ದೇವೇಗೌಡರ ಕಾಲಿಗೆ ಬಿದ್ದಿದ್ದರು’ ಎಂದು ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಇಬ್ರಾಹಿಂ, ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು H.D.ದೇವೇಗೌಡರ ಕಾಲಿಗೆ ಬಿದ್ದಿದ್ದರು. ಸಿಎಂ ಮಾಡಿದ 14 ತಿಂಗಳಲ್ಲೇ ಶಾಸಕರನ್ನ ಮುಂಬೈಗೆ ಕಳಿಸಿದ್ರು. ಮುಂಬೈಗೆ ಕಳಿಸಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಇಬ್ರಾಹಿಂ ಹೇಳಿಕೆ …
Read More »ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ
ದಾವಣಗೆರೆ : ಸಾರ್ವಜನಿಕ ಸಮಸ್ಯೆಗೆ ಸ್ಪಂಧಿಸಿರುವ ಅಭಿವೃದ್ದಿಗೆ ಶ್ರಮಿಸಿದವರನ್ನು ಬೆಂಬಲಿಸಿ ಆರ್ಶಿವದಿಸಿ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಹೇಳಿದರು. ಸಂತೆಬೆನ್ನೂರಿನಲ್ಲಿ ಶನಿವಾರ ಜಿಲ್ಲಾಡಳಿತದಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಂಗವಾಗಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಅಲಿಸಿ ಮಾತಾನಾಡಿದರು. ಜನಸ್ಪಂದನ ಕಾರ್ಯಕ್ರಮ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ಕಚೇರಿ ಕೆಲಸಗಳಿಗಾಗಿ ಜನರು ಅಲೆಯುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ …
Read More »ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್: 2 ತಾಸು ನರಳಾಡಿದ ತುಂಬು ಗರ್ಭಿಣಿ
ಕಿತ್ತೂರು : ಸಮೀಪದ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ …
Read More »ಬೆಳಗಾವಿ: ಜನರ ಮನಸೂರೆಗೊಂಡ ಫಲ-ಪುಷ್ಪ ಪ್ರದರ್ಶನ
ಬೆಳಗಾವಿ: ಒಂದೆಡೆ ಕಾಂತಾರ ಚಲನಚಿತ್ರದ ಪರಿಸರ ದೇವತೆ ಪಂಜುರ್ಲಿ, ಇನ್ನೊಂದೆಡೆ ಎತ್ತುಚಕ್ಕಡಿ ಕಟ್ಟಿ ಬಿತ್ತಲು ನಡೆದ ರೈತ, ಮತ್ತೊಂದೆಡೆ ಕೇಶರಾಶಿ ಹರಡಿ ನಿಂತ ಸುಂದರ ಜಲಕನ್ಯೆ, ಎಲ್ಲರನ್ನೂ ಬರಸೆಳೆಯುವ ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್… ಇಲ್ಲಿನ ಹ್ಯೂಮ್ ಪಾರ್ಕಿನಲ್ಲಿ ಆಯೋಜಿಸಿದ ಮೂರು ದಿನಗಳ 63ನೇ ಫಲ ಪುಷ್ಪ ಪ್ರದರ್ಶನದಲ್ಲಿ ಕಂಡುಬರುವ ದೃಶ್ಯಗಳಿವೆ. ಶುಕ್ರವಾರವೇ ಆರಂಭವಾದ ಈ ಪ್ರದರ್ಶನ ಪರಿಸರ ಪ್ರೇಮಿಗಳನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ವಿವಿಧ ಶಾಲಾ ಮಕ್ಕಳು, ಯುವಜನರು, ರೈತರು, …
Read More »ಮದ್ಯದ ಅಂಗಡಿಗಳಿಗೆ ಡಿ.ಸಿ ಭೇಟಿ: ಪರಿಶೀಲನೆ
ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎರಡು ಮದ್ಯದ ಅಂಗಡಿಗಳಿಗೆ ತೆರಳಿದರು. ಲೈಸೆನ್ಸ್, ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು. ಡಿ.ಸಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಡೆದ ಮಹಿಳೆಯರು, ಊರ ಮಧ್ಯದಲ್ಲಿರುವ ಎರಡು ಮದ್ಯದಂಗಡಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿದರು. ಆಗ, ಪಾಟೀಲ ಸ್ವತಃ ಅಂಗಡಿಗಳಿಗೆ ಹೋಗಿ ಪರಿಶೀಲಿಸಿದರು. ಸದ್ಯ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದೆ. ಸಮಗ್ರವಾಗಿ …
Read More »ಸ್ಮಾರ್ಟ್ ಕ್ಯಾಷು ಫ್ಯಾಕ್ಟರಿಯನ್ನು ಮಾಜಿ ಸಚಿವರು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಬೆಳಗಾವಿ ತಾಲೂಕಿನಲ್ಲಿ ಸ್ಮಾರ್ಟ್ ಕ್ಯಾಷು ಫ್ಯಾಕ್ಟರಿಯನ್ನು ಮಾಜಿ ಸಚಿವರು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಹೌದು ಬೆಳಗಾವಿ ತಾಲೂಕಿನ ಸುಪುತ್ರ, ಸಮಾಜ ಸೇವಕ, ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರು ಈ ಭಾಗದ ಜನರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಕಾಜು ಫ್ಯಾಕ್ಟರಿಯನ್ನು ಸ್ಥಾಪಿಸಿದ್ದಾರೆ. ದೇಶದ ಪ್ರಸಿದ್ಧ ಎಮೋಸಿಸ್ ಗ್ರೂಪ್‍ನೊಂದಿಗೆ ಸ್ಮಾರ್ಟ್ ಕ್ಯಾಷು ಫ್ಯಾಕ್ಟರಿಯನ್ನು ಬೆಳಗುಂದಿ ಸಮೀಪ ಸೋನೋಲಿ ಎಳೆಬೈಲ ಗ್ರಾಮದಲ್ಲಿ ಪ್ರಾರಂಭ ಮಾಡಿದ್ದಾರೆ. ಶನಿವಾರ ಶಾಸಕ …
Read More »ಸ್ಥಳೀಯ ಸಂಸ್ಥೆಗಳ ಆಸ್ತಿ ದಾಖಲೆಗೆ ಹೈಟೆಕ್ ಸ್ಪರ್ಶ: ಡಿಜಿಟಲೀಕರಣಕ್ಕೆ ‘ಇ-ಆಸ್ತಿ ತಂತ್ರಾಂಶ’ ಜಾರಿ; ಆನ್ಲೈನ್ನಲ್ಲೇ ಸಕಲ ಮಾಹಿತಿ
ಬೆಳಗಾವಿ :ನಗರ -ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸರ್ಕಾರಿ, ಖಾಸಗಿ ಒಡೆತನದ ಲಕ್ಷಾಂತರ ಆಸ್ತಿ ದಾಖಲೆಗಳಿಗೆ ಇನ್ಮುಂದೆ ಹೈಟೆಕ್ ಸ್ಪರ್ಶ ಸಿಗಲಿದೆ. ಏಕಕಾಲದಲ್ಲಿ ಆನ್ಲೈನ್ನಲ್ಲಿಯೇ ಆಸ್ತಿ ದಾಖಲೆಗಳ ಮಾಹಿತಿ ಲಭ್ಯವಾಗಲಿದೆ. ಹೌದು. ರಾಜ್ಯದಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು 1.20 ಕೋಟಿ ಆಸ್ತಿಗಳಿವೆ. ಆದರೆ, ಲಕ್ಷಾಂತರ ಆಸ್ತಿಗಳ ದಾಖಲೆಗಳ ನಿರ್ವಹಣೆ, ಸಂರಕ್ಷಣೆ ಇಲ್ಲದೆ ಸಂಪೂರ್ಣ ಹಾಳಾಗಿವೆ. ಇದರಿಂದಾಗಿ ಸಾರ್ವಜನಿಕರಿಗೆ ಆಸ್ತಿಯ ಮೂಲ ದಾಖಲೆಗಳು ಲಭ್ಯವಾಗುತ್ತಿಲ್ಲ. …
Read More »
Laxmi News 24×7