Breaking News

ಜಿಲ್ಲೆ

ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ.

ಬೆಂಗಳೂರು: ಶಿಕ್ಷಣ ಇಲಾಖೆಯಿಂದ (Education Department) ಹೊಸ ಪಿಯು ಕಾಲೇಜು ಪ್ರಾರಂಭಿಸಲು ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ ಈ ಕೆಳಗಿನಂತಿದೆ. 1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ. 2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ …

Read More »

ಅಂಗವೈಕಲ್ಯದ ಮಧ್ಯೆಯೂ ಕ್ರೀಡಾ ಕ್ಷೇತ್ರದಲ್ಲಿ ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ನಿವಾಸಿ, ಅಂಗವಿಕಲ ಈಜುಪಟು ರಾಘವೇಂದ್ರ ರತ್ನಾಕರ ಅಣ್ವೇಕರ್‌(35) ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವರು. ಎಂ.ಎ(ರಾಜ್ಯಶಾಸ್ತ್ರ) ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. 2014ರಿಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. 14ನೇ ವಯಸ್ಸಿನಿಂದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಅವರು, ಹಾಂಕಾಂಗ್‌, ಮಲೇಷ್ಯಾ, ಡೆನ್ಮಾರ್ಕ್‌ ಮತ್ತಿತರ …

Read More »

ನಂದಿನಿ ಪ್ರತಿ ಲೀಟರ್‌ ಹಾಲಿಗೆ 3 ರೂ.ಹೆಚ್ಚಳದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ: ಬಾಲಚಂದ್ರ ಜಾರಕಿಹೊಳಿ:

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು. ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಭಾನುವಾರ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.ದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ …

Read More »

ಕೊಪ್ಪಳ :ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆಗೆ ಬದಲಾಯಿಸಿ ಕಲಿಯುವ ವಿದ್ಯಾರ್ಥಿಗಳು

ಕೊಪ್ಪಳ : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈಗ ಸಮಾಜವಿಜ್ಞಾನದ ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆ, ಕವನದ ರೂಪಕ್ಕೆ ಬದಲಾಯಿಸಿಕೊಂಡು ಕಲಿಕೆ ಸರಳೀಕರಣಗೊಳಿಸಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ.   ಸಮಾಜವಿಜ್ಞಾನ ಶಿಕ್ಷಕ ಕಿಶನರಾವ್ ಕುಲಕರ್ಣಿ ಸಮಾಜ ವಿಜ್ಞಾನದ ಎಲ್ಲ ಸಿಲೆಬಸ್ ಅನ್ನು ನಾಟಕ ಹಾಗೂ ಕಥೆಗಳಿಗೆ ಬದಲಾವಣೆ ಮಾಡಿದ ಕಾರಣಕ್ಕಾಗಿ ವಿದ್ಯಾರ್ಥಿಗಳು ಅಭಿನಯಿಸುವದರೊಂದಿಗೆ ಕಲಿಕೆ ದೃಢೀಕರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸಮಾಜ ವಿಜ್ಞಾನ …

Read More »

ಭಗತ್ ಸಿಂಗ್ ಪಾತ್ರದ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ 7ನೇ ತರಗತಿ ಬಾಲಕ

ಚಿತ್ರದುರ್ಗ : ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ. ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ …

Read More »

ಕರಾಳ ದಿನಾಚರಣೆಗೆ ಅನುಮತಿ ಬೇಡ- ಕರವೇ

ಬೆಳಗಾವಿ-ಕ್ರಾಂತಿಯ ನೆಲ,ಐತಿಹಾಸಿಕ ಬೆಳಗಾವಿ ನಗರದಲ್ಲಿ ಲಕ್ಷಾಂತರ ಕನ್ನಡಿಗರು ಸೇರಿ ಕರ್ನಾಟಕ ರಾಜ್ಯೋತ್ಸವದ ದಿನ ಕನ್ನಡದ ಹಬ್ಬವನ್ನಾಗಿ ಆಚರಿಸುವ ಸಂಧರ್ಭದಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಗೆ ಕರಾಳ ದಿನ ಆಚರಿಸಲು,ಸೈಕಲ್ ರ್ಯಾಲಿ ನಡೆಸಲು ಅನುಮತಿ ನೀಡಬಾರದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ರಾಜ್ಯ ಸರ್ಕಾರ ಎಂಇಎಸ್ ಸಂಘಟನೆಗೆ ಅನುಮತಿ ನೀಡಿದ್ರೆ,ಸರ್ಕಾರ ನಾಡವಿರೋಧಿ ಸರ್ಕಾರ, ಎಂದು ಸಾಭೀತಾಗುತ್ತದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಂಇಎಸ್ …

Read More »

ಕನ್ನಡ ರಾಜ್ಯೋತ್ಸವ ನಿಮಿತ್ತ Team AK Creations ವತಿಯಿಂದ ಅದ್ಭುತ ವಾದ ಗೀತೆ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.   ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …

Read More »

ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ಬೆಳಗಾವಿ: ರಾಜ್ಯದಲ್ಲಿನ ಮುಸ್ಲಿಂ (Muslims) ಅಲ್ಪಸಂಖ್ಯಾತರಿಗೂ ಮೀಸಲಾತಿ (Reservation) ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್-ಎ-ಇಸ್ಲಾಂ ಸಂಘಟನೆ (Muslim Organization) ಜಿಲ್ಲಾಡಳಿತದ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ. ಇಲ್ಲಿನ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪ್ರಮುಖರು, ರಾಜ್ಯದಲ್ಲಿ ಮುಸ್ಲಿಂ (Muslims) ಅಲ್ಪಸಂಖ್ಯಾತರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜನಸಂಖ್ಯೆಗೆ (Population) ಅನುಗುಣವಾಗಿ ನೋಡಿದರೂ ಶೈಕ್ಷಣಿಕ ಸಂಸ್ಥೆಗಳಲ್ಲಾಗಲಿ, ಸರ್ಕಾರಿ ಉದ್ಯೋಗ ಕ್ಷೇತ್ರಗಳಲ್ಲಾಗಲಿ ಸಮರ್ಥವಾದ ಪ್ರಾತಿನಿಧ್ಯ ಹೊಂದಿಲ್ಲ …

Read More »

ಅವಧಿಪೂರ್ವ ಚುನಾವಣೆ ಎದುರಿಸಲು ಸಿದ್ಧ: ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಂದರೆ ಎದುರಿ ಸಲು ಕಾಂಗ್ರೆಸ್‌ ಪಕ್ಷ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅವ ಧಿಗೂ ಮುನ್ನ ಚುನಾವಣೆ ಬರುತ್ತದೆಯೇ ಎಂಬ ಬಗ್ಗೆ ಏನನ್ನೂ ಹೇಳುವುದಿಲ್ಲ. ಇದು ಸರಕಾರಕ್ಕೆ ಬಿಟ್ಟ ವಿಚಾರ. ನಾವಂತೂ ಚುನಾವಣೆಗೆ ಸನ್ನದ್ಧರಾಗಿದ್ದೇವೆ ಎಂದು ಹೇಳಿದರು. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ನಡೆದಿರುವ ಸಿದ್ಧತೆಗಳ ಬಗ್ಗೆ ಮುಂದಿನ ನಾಲ್ಕೈದು ದಿನಗಳಲ್ಲಿ …

Read More »

ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು

ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಜೊತೆಗೆ ನೆನಪಾಗೋದು ಹಿರೇಮಠದ ಹೋಳಿಗೆ ಊಟ. ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧಗೊಳ್ಳುತ್ತಿದೆ. ಹೌದು ಹೌದು ಕರ್ನಾಟಕ ರಾಜ್ಯೋತ್ಸವದ ದಿನ ತಾಯಿ ಭುವನೇಶ್ವರಿಯ ತೇರು ಎಳೆಯಲು ಲಕ್ಷಾಂತರ ಕನ್ನಡಿಗರ ಸಮಾಗಮ ಬೆಳಗಾವಿಯಲ್ಲಿ ಆಗುತ್ತದೆ. ನಾಡಿನ ಮೂಲೆ ಮೂಲೆಯಿಂದ ಕನ್ನಡಿಗರು ಬೆಳಗಾವಿಗೆ ಬರುತ್ತಾರೆ. ಹೀಗೆ ಬರುವ ಕನ್ನಡಿಗರಿಗೆ ಹುಕ್ಕೇರಿಯ ಹಿರೇಮಠದ …

Read More »