Breaking News

ಜಿಲ್ಲೆ

‘ಕಿತ್ತೂರು ಕೇಸರಿ’ ಪಟ್ಟಕ್ಕಾಗಿ ಪಟ್ಟುಬಿಡದ ಜಟ್ಟಿಗಳು

ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಎರಡನೇ ದಿನವಾದ ಮಂಗಳವಾರ ನಡೆದ ರಾಷ್ಟ್ರಮಟ್ಟದ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನೋಡಲು ಅಪಾರ ಸಂಖ್ಯೆಯ ಕ್ರೀಡಾಭಿಮಾನಿಗಳು ಸೇರಿದರು. ಮಹಿಳಾ ಹಾಗೂ ಪುರುಷ ವಿಭಾಗ ಸೇರಿ ಒಟ್ಟು 234 ಪೈಲ್ವಾನರು ಇಲ್ಲಿ ಮುಖಾಮುಖಿಯಾಗಿದ್ದಾರೆ.   ಪ್ರತಿವರ್ಷ ಜಂಗಿ ನಿಕಾಲಿ ಕುಸ್ತಿ ನಡೆಯುತ್ತಿದ್ದವು. ಇದೇ ಮೊದಲ ಬಾರಿ ಪಾಯಿಂಟ್ ಆಧರಿತ ಕುಸ್ತಿ ಆಯೋಜಿಸಲಾಗಿತ್ತು. ಎರಡು ದಿನಗಳ ಟೂರ್ನಿಯಲ್ಲಿ ನಡೆದ ಬಹುತೇಕ ಪಂದ್ಯಗಳು ಪೈಪೋಟಿಯಿಂದ …

Read More »

ಚಿಣ್ಣರಿಗೂ ಬಂತು ಉತ್ಸವದ ಹಿಗ್ಗು

ಕಿತ್ತೂರು: ಐತಿಹಾಸಿಕ ಉತ್ಸವದಲ್ಲಿ ಒಂದೆಡೆ ವರ್ಣರಂಜಿತ ವೇದಿಕೆಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದರೆ, ಮತ್ತೊಂದೆಡೆ ಮಕ್ಕಳು ವಿವಿಧ ಆಟಗಳನ್ನಾಡಿ ಸಂಭ್ರಮದಲ್ಲಿ ಮಿಂದೆದ್ದರು. ಇಲ್ಲಿನ ಕೋಟೆ ಆವರಣದ ಮುಂಭಾಗದಲ್ಲಿ ಮಕ್ಕಳು ಹಾಗೂ ಯುವಕರಿಗಾಗಿ ವಿವಿಧ ಆಟಿಕೆಗಳನ್ನು ಅಳವಡಿಸಲಾಗಿದೆ. ಎಲ್ಲವೂ ವಿದ್ಯುತ್ ಚಾಲಿತ ಆಟಿಕೆಗಳೇ ಇರುವುದು ಈ ಬಾರಿಯ ವಿಶೇಷ. ಚಿಣ್ಣರು ಬಾತುಕೋಳಿ, ಬೈಕ್‌ಗಳ ತಿರುಗುಂಡಿ ಮೇಲೆ ಕುಳಿತು ಸಂಭ್ರಮಿಸಿದರು. ಮತ್ತೆ ಕೆಲವರು ಜಾರುಬಂಡೆಯಿಂದ ಜಾರಿ ನಲಿದರು. ರಬ್ಬರ್‌ನಿಂದ ಮಾಡಿದ ಡಾನ್ಸಿಂಗ್‌ ರೋಪ್ …

Read More »

198ನೇ ಕಿತ್ತೂರು ಉತ್ಸವಕ್ಕೆ ವೈಭವದ ತೆರೆ, ರಾತ್ರಿಯವರೆಗೂ ಸಾಂಸ್ಕೃತಿಕ ವೈಭವ

ಚನ್ನಮ್ಮನ ಕಿತ್ತೂರು (ರಾಣಿ ಚನ್ನಮ್ಮ ವೇದಿಕೆ): ‘ರಾಣಿ ಚನ್ನಮ್ಮ ದೇಶದ ಸ್ವಾತಂತ್ರ್ಯದ ಹೆಗ್ಗುರುತು ಮಾತ್ರವಲ್ಲ; ವಿಶ್ವದ ಹೆಣ್ಣುಮಕ್ಕಳ ಸಮಾನತೆಯ ಪ್ರತೀಕ’ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ಸ್ವಾಮೀಜಿ ಹೇಳಿದರು.   ಇಲ್ಲಿ ಮಂಗಳವಾರ ನಡೆದ 198ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ‘ಹೆಣ್ಣುಮಗಳು ಸಮಾಜದಿಂದ ಹೊರ, ಧರ್ಮದಿಂದ ಹೊರ ಎಂಬ ಸಂಪ್ರದಾಯಗಳು ಇದ್ದ ಕಾಲದಲ್ಲಿ ಚನ್ನಮ್ಮ ಖಡ್ಗ ಹಿಡಿದಳು. ಪ್ರಪಂಚದ ಬಹಳಷ್ಟು ರಾಜರು ಮಂತ್ರಿಗಳ ಮಾರ್ಗದರ್ಶನದಲ್ಲಿ …

Read More »

ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ …

Read More »

ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ M.E.S.ಸಿದ್ಧತೆ

ಬೆಳಗಾವಿ: ನಾಡದ್ರೋಹಿ ಎಂಇಎಸ್‍ನಿಂದ (MES) ಮತ್ತೆ ಗಡಿ ಖ್ಯಾತೆ ಆರಂಭವಾಗಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು (Kannada Rajyotsava) ಎಂಇಎಸ್ ಮುಖಂಡರು ಕರಾಳ ದಿನಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಾಡದ್ರೋಹಿಗಳು ಕರಾಳ ದಿನ ಆಚರಿಸುವ ಕುರಿತಾಗಿ ಪೋಸ್ಟ್ ಹಾಕಿದ್ದಾರೆ. ನವೆಂಬರ್ 1ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ (Belagavi) ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಮೂಲೆಮೂಲೆಗಳಿಂದ ಕನ್ನಡ ರಾಜ್ಯೋತ್ಸವ ನೋಡಲು …

Read More »

ಬೆಳಗಾವಿ: ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥ

ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ …

Read More »

ಎಲ್ಲಾ ಕಡೆ ಬಿಜೆಪಿ ಇದೆ, ನಮಗೆ ರಕ್ಷಣೆ ಯಾವಾಗ?: ಹರ್ಷ ಸಹೋದರಿ ಪ್ರಶ್ನೆ

ಶಿವಮೊಗ್ಗ: ಹರ್ಷನ ಕಳಕೊಂಡು 8 ತಿಂಗಳು ಆಗಿದೆ, ಈಗಲೂ ಪ್ರೇಮಸಿಂಗ್ ಚೂರಿ ಇರಿತ ಸೇರಿದಂತೆ ಪ್ರಕರಣ ನಡೆಯುತ್ತಲೇ ಇದೆ. ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ಇದೆ, ಮೇಲಾಗಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಇದೆ.ನಮಗೆ ರಕ್ಷಣೆ ಯಾವಾಗ ಸಿಗುತ್ತದೆ ಎಂದು ಹರ್ಷ ಸಹೋದರಿ ಅಶ್ವಿನಿ ಮಂಗಳವಾರ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.   ಸುದಿಗಾರರೊಂದಿಗೆ ಮಾತನಾಡಿ,ಹಿಂದುತ್ವದ ಕೆಲಸ ಮಾಡುತ್ತಿದ್ದ ಎಂದು ಹರ್ಷನ ಟಾರ್ಗೆಟ್ ಮಾಡಿ ಹೊಡೆದರು. ಅಂಥವನನ್ನೇ ಕೊಲ್ಲುತ್ತಾ ರೆಂದರೆ, ನಮಗೆ ಯಾವ ರಕ್ಷಣೆ …

Read More »

ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ – C.M. ಇಬ್ರಾಹಿಂ

ದಾವಣಗೆರೆ: ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಕಾಂಗ್ರೆಸ್ (Congress) ಪಕ್ಷದಲ್ಲಿ ಮುಸ್ಲಿಮರಿಗೆ ಊಟದ ಕೊನೆಯಲ್ಲಿ ಅಳಿದುಳಿದ ಎಂಜಲು ರೀತಿಯಲ್ಲಿ ಸ್ಥಾನಮಾನ ನೀಡ್ತಿದ್ರು. ಆದರೆ ಜೆಡಿಎಸ್ (JDS) ರಾಜ್ಯಾಧ್ಯಕ್ಷರ ಸ್ಥಾನ ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಮಲೆಬೇನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ ಮಾಡಿ ಹಬೀವುಲ್ಲಾ ಷಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ‌ ಬಳಿಕ ಮಾತನಾಡಿದ ಅವರು, ನಾವು ಗುರುವಾರದ …

Read More »

ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ನಾಪತ್ತೆ,ಮುಂದುವರಿದ ಶೋಧ ಕಾರ್ಯ

ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಓರ್ವ ಬಹಳ ಸಮಯದವರೆಗೆ ಮೇಲೆ ಬಂದಿಲ್ಲ. ಹೀಗೆ ನೀರಿನಲ್ಲಿ ನಾಪತ್ತೆಯಾಗಿರುವ ಯುವಕನ ಹೆಸರು 22 ವರ್ಷದ ಸತೀಶ ಎನ್ನಲಾಗುತ್ತಿದೆ. ಈತ …

Read More »

ರಾಜ್ಯದಲ್ಲಿ ತಾಪಮಾನ ಭಾರಿ ಕುಸಿತ : ಮೈನಡುಗುವ ಚಳಿಗೆ ಹೊರಬಾರದ ಜನ!

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.   ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ …

Read More »