ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆಗಳಿರುವ ಕಾರಣ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು …
Read More »ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ
ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »ಅ.3ರಿಂದ ರಾಜ್ಯ ಹೈಕೋರ್ಟ್ ಗೆ 5 ದಿನಗಳ ದಸರಾ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಅ.3ರಿಂದ 7ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಅ.1 ಮತ್ತು 2 ಶನಿವಾರ ಹಾಗೂ ಭಾನುವಾರ ಅದೇ ರೀತಿ ಅ.8 ಮತ್ತು 9 ಕ್ರಮವಾಗಿ ಶನಿವಾರ ಹಾಗೂ ಭಾನುವಾರ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆಗೆ ಅ.6ರಂದು ಬೆಂಗಳೂರು ಪ್ರಧಾನ ಪೀಠದಲ್ಲಿ ರಜಾ ಕಾಲದ ವಿಶೇಷ ಪೀಠಗಳ ಕಲಾಪ …
Read More »ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ಮಾಡಿಕೊಂಡಿದ್ದ ಲೋಕಾಯುಕ್ತ ಪೊಲೀಸರು ರಾಜ್ಯದ 9 ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಮುಂಜಾನೆ 4.30ಕ್ಕೆ ಏಕಕಾಲದಲ್ಲಿ ನೂರಾರು ಲೋಕಾಯಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪೈಕಿ 7 ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮವಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸಂಗ್ರಹಿಸಿಟ್ಟಿದ್ದ ಕಂತೆ-ಕಂತೆ ನೋಟುಗಳನ್ನು ಕಂಡು ಲೋಕಾ ಪೊಲೀಸರೇ ದಂಗಾಗಿದ್ದಾರೆ. ಇನ್ನು …
Read More »ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ವಿಜಯಪುರ : ಕೋವಿಡ್ ನಂತರದ ಭಾರತಕ್ಕೆ ವಿಶ್ವದಲ್ಲೇ ವಿಶೇಷ ಸ್ಥಾನ, ವಿಶೇಷ ಗುರುತಿಸುವಿಕೆ ಆರಂಭಗೊಂಡಿದೆ. 21ನೇ ಶತಮಾನದಲ್ಲಿ ಬಲಿಷ್ಠ ಭಾರತ ಕಟ್ಟುವ ಕನಸು ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಸಾಗಿದೆ. ಯುಎನ್ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರಾತಿನಿಧ್ಯವಿಲ್ಲದೇ ಯಾವ ಸಭೆಗಳೂ ನಡೆಯುವುದಿಲ್ಲ. ಅಷ್ಟರ ಮಟ್ಟಿಗೆ ಭಾರತ ವಿಶ್ವಕ್ಕೆ ಅನಿವಾರ್ಯ ಎನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಶುಕ್ರವಾರ ನಗರದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ …
Read More »ಸರ್ಕಾರ ಇ ಕಚೇರಿ ಜಾರಿಗೊಳಿಸಿದೆ. ಆದ್ರೆ ಅದಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸುವಲ್ಲಿ ಸರ್ಕಾರ ವಿಫಲ
ಬೆಂಗಳೂರು: ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಇ ಕಚೇರಿ ಕಡ್ಡಾಯಗೊಳಿಸಲಾಗಿದೆ. ಇ-ಕಚೇರಿಯನ್ನೇನೋ ಕಡ್ಡಾಯಗೊಳಿಸಿದೆ ಆದರೆ ಅದಕ್ಕೆ ಬೇಕಾಗಿರುವ ಸ್ಕ್ಯಾನರ್ ಮತ್ತು ಪ್ರಿಂಟರ್ಗಳನ್ನು ಪೂರೈಸಲು ಸರ್ಕಾರ ಮರೆತಿದೆ. ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಅದರ ನಿದರ್ಶನವಾಗಿ ಇ-ಆಡಳಿತ ಕೇಂದ್ರದ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಎಲ್ಲಾ ಇಲಾಖೆಗಳಲ್ಲಿ ಇ …
Read More »ನಿಪ್ಪಾಣಿ: ಡೆಂಗಿಯಿಂದ ಯುವಕ ಸಾವು
ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು. ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು. ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ. ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ …
Read More »ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ
ರಾಯಬಾಗ: ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಎಟಿಎಂ ಒಡೆಯಲು ಯತ್ನಿಸಿದ ಆರೋಪಿಯನ್ನು ಎಂಟು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಾವಾನಸೌದತ್ತಿ ನಿವಾಸಿ ಖಾಜಾಸಾಬ್ ಬಾಬಾಸಾಬ್ ಮುಜಾವರ (25) ಬಂಧಿತ. 2022ರ ಫೆಬ್ರುವರಿ 4ರಂದು ರಾತ್ರಿ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿದ ಯುವಕ ತಲೆ ಮರೆಸಿಕೊಂಡಿದ್ದ. ಕಬ್ಬಿಣದ ರಾಡ್ ಬಳಸಿ ಎಟಿಎಂ ಮುರಿಯಲು ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆರೋಪಿ ಗುರುತು ಸರಿಯಾಗಿ ಪತ್ತೆಯಾಗಿರಲಿಲ್ಲ. ಪ್ರಕರಣದ ತನಿಖೆ ಕೈಗೊಂಡ ರಾಯಬಾಗ …
Read More »ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ದೇಗುಲಕ್ಕೆ ಸಿಎಂ ಪತ್ನಿ ಚನ್ನಮ್ಮ ಬೊಮ್ಮಾಯಿ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ ಅವರು ನವರಾತ್ರಿ ನಿಮಿತ್ತ ಮನೆ ದೇವತೆ ಸವದತ್ತಿ ಶ್ರೀ ರೇಣುಕಾ ದೇವಿಯ ದರ್ಶನ ಪಡೆದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಘಟ್ಟಕ್ಕೆ ಎಣ್ಣೆ ಸಮರ್ಪಿಸಿದರು. ಬಳಿಕ ಭಕ್ತಿ ಭಾವದಿಂದ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರೇಣುಕಾದೇವಿ ಯಲ್ಲಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ದೇವತೆ. ಹಾಗಾಗಿ ಹುಬ್ಬಳ್ಳಿಯಿಂದ ಖಾಸಗಿ ವಾಹನದಲ್ಲಿ ಬಂದು ಚನ್ನಮ್ಮ ಬೊಮ್ಮಾಯಿ ದೇವಿ ದರ್ಶನ ಪಡೆದರು. ಈ …
Read More »ಯುವಕನ ಮಿದುಳು ನಿಷ್ಕ್ರಿಯ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ …
Read More »
Laxmi News 24×7