Breaking News

ಜಿಲ್ಲೆ

ರಾಂಪೂರದಲ್ಲಿ ಚರಂತಿಮಠ ಪರ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ರಾಂಪೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾರ್ವಜನಿಕ ಸಭೆಯಲ್ಲಿ ಮತಯಾಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಚರಂತಿಮಠರು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಣ, ಹೆಂಡ ಮತ್ತು ಜಾತಿ ಆಧಾರಿತ ರಾಜಕಾರಣಕ್ಕೆ ಜನರು ತಲೆಬಾಗುವುದಿಲ್ಲ; ಬದಲಾವಣೆಯ ಪರ ಜನರು ತೀರ್ಮಾನಿಸಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ಹಲವು ಜನಪರ …

Read More »

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ

ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು  ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್  ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ …

Read More »

ನೂರಕ್ಕೆ ನೂರರಷ್ಟು ಸಮರ್ಥ್‌ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್

ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ  ಉಪಚುನಾವಣೆಯಲ್ಲಿ  ಕಾಂಗ್ರೆಸ್‌  ಅಭ್ಯರ್ಥಿ ಸಮರ್ಥ್‌ ಶಾಮನೂರು  ಅವರನ್ನು ನೂರಕ್ಕೆ ನೂರರಷ್ಟು ಗೆಲ್ಲಿಸುವ ಕೆಲಸ ಮಾಡ್ತೀನಿ ಎಂದು ಜಮೀರ್ ಅಹ್ಮದ್  ಹೇಳಿದ್ದಾರೆ. ದಾವಣಗೆರೆಯಲ್ಲಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್‌ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾನು ಕೇರಳದಲ್ಲಿ ಸ್ಟಾರ್ ಪ್ರಚಾರಕನಾಗಿದ್ದೆ. ಹತ್ತು ಕ್ಷೇತ್ರ ಕೊಟ್ಟಿದ್ದರು. ಇಂದು (ಏ.5) ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದೆ. ದಾವಣಗೆರೆಗೆ ಬಂದಿದ್ದೇನೆ ಸಮರ್ಥ್ ಗೆಲ್ಲಿಸಿಕೊಂಡು ಹೋಗುತ್ತೇನೆ. ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡುತ್ತೇನೆ …

Read More »

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಇಂದು (ಏ.5) ನಾಮಕರಣ ಮಹೋತ್ಸವ ನಡೆಯಿತು. 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಯಿತು. ಶಿವಕುಮಾರ ಶ್ರೀಗಳ ದಾಸೋಹ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಡು ಮಕ್ಕಳಿಗೆ ಶಿವಕುಮಾರ ಅಂತಲೂ, ಹೆಣ್ಣು ಮಕ್ಕಳಿಗೆ ಶಿವಾನಿ ಅಂತಲೂ ನಾಮಕರಣ ಮಾಡಲಾಯಿತು. ಪ್ರತಿ ಮಕ್ಕಳಿಗೆ ಒಂದು ತೊಟ್ಟಿಲು, ಬಟ್ಟೆ, ಮಾಸ್ಕಿಟೋ ಕಾಯಿಲ್, ಹಾಸಿಗೆ ದಿಂಬು ಉಚಿತವಾಗಿ ವಿತರಣೆ ಮಾಡಲಾಯಿತು. ಮಕ್ಕಳೊಂದಿಗೆ ಬಂದ ದಂಪತಿ ಶಿವಕುಮಾರ ಶ್ರೀಗಳ ನಾಮಸ್ಮರಣೆ …

Read More »

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಈ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ. ಸಿದ್ದರಾಮಯ್ಯ ಅತ್ಯಂತ ಕಷ್ಟದಲ್ಲಿ ಇದ್ದಾಗ ಅವರ ಕೈಯನ್ನು ಹಿಡಿದವರು ಬಾಗಲಕೋಟೆಯ ಬಾದಾಮಿ ಜನರು. ಕಷ್ಟ ಕಾಲದಲ್ಲಿ ಕೈ ಹಿಡಿಬೇಕಾದರೆ ಬಾದಾಮಿ ಬೇಕಾಗಿತ್ತು. ಈಗ ಮುಖ್ಯಮಂತ್ರಿ ಆದ ಮೇಲೆ ಬಾದಾಮಿ, ಬಾಗಲಕೋಟೆ ಬೇಕಾಗಿಲ್ಲ. ಇಂಥವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆಯ  ಉಪಚುನಾವಣೆಯ ಹಿನ್ನೆಲೆಯಲ್ಲಿ …

Read More »

ಮುಖ್ಯಮಂತ್ರಿ ,ಉಪ ಮುಖ್ಯಮಂತ್ರಿ ಹಾಗೂ ಮಹದೇವಪ್ಪ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನವಾಗಲಿದೆ ವೀನಾ ಕಾರಣ ಗೊಂದಲಕ್ಕೆ ಒಳಗಾಗದಿರಿ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ

ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಹಾಗೂ ತಳ ಸಮುದಾಯಗಳ ಆಶಾಕಿರಣ ಡಾ. ಬಾಬು ಜಗಜೀವನರಾಮ್ ರವರ 119ನೇ ಜಯಂತೋತ್ಸವದಲ್ಲಿ ಬಾಬುಜಿ ರವರ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರ. ವಿಧಾನ ಸೌಧದ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು. ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಸಮರ್ಥ ಸಂಸದೀಯ ಹೋರಾಟಗಾರ ಮತ್ತು ಹಿರಿಯ ದಲಿತ …

Read More »

ಎರಡು ಬಾರಿ ಶಾಸಕರಾಗಿ ಕುಡುಚಿ ಮತಕ್ಷೇತ್ರವನ್ನ ಅಭಿವೃದ್ಧಿ ಮಾಡಿಲ್ಲಾ 

ಇಟನಾಳ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಮತ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿರುವ ನೀವು ಮಾಡಿದ್ದಾದರೂ ಏನು ಪಿ.ರಾಜೀವ್ ಅವರೇ ಹಲವಾರು ಆಶ್ವಾಸನೆಗಳನ್ನು ಕೊಟ್ಟಿದ್ರಿ. ಆಶ್ವಾಸನೆಗಳ ಬದ್ಧವಾಗಿ ಕುಡಚಿ ಮತ ಕ್ಷೇತ್ರ ಜನರಿಗೆ ಯಾವ ಕೊಡುಗೆ ಕೊಡಲಿಲ್ಲ. ತಮಗೆ ಬೇಕಾದ ಚೌಹಾಣ್ ಮತ್ತು ರಾಥೋಡ್ ಎಂಬ ಗುತ್ತಿಗೆದಾರರನ್ನು ಗಳನ್ನು ಬೆಳೆಸಿಕ್ಕೊಂಡು ಇವರಿಗೆ ಗುತ್ತಿಗೆ ಕೆಲಸಗಳನ್ನ ಕೊಟ್ಟು ಅವರನ್ನು ಬೆಳಸಿ ತಾವು ಬೆಳದರಿ ಪಿ. ರಾಜೀವ್ ಅವರು ತಮ್ಮ ಬಕೆಟ್ …

Read More »

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ.!

ದಾವಣಗೆರೆ: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಶನಿವಾರ ದಾವಣಗೆರೆಯಲ್ಲಿ ಮಹತ್ವದ ದಾಳಿ ನಡೆಸಿದ್ದಾರೆ. ಜಮೀನು ಹದ್ದುಬಸ್ತಿಗೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI) ಚಂದ್ರಪ್ಪ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚದ ಹಣದ ಸಮೇತ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಹಿನ್ನೆಲೆ ದಾವಣಗೆರೆಯ ವೈದ್ಯರಾದ ಡಾ. ಉಮೇಶ್ ಹಿರೇಮಠ ಅವರು ನಾಗನೂರು ಗ್ರಾಮದ …

Read More »

ರಾಮದುರ್ಗ ಮಂಡಲದ ನೂತನ ಬಿಜೆಪಿ ಪದಾಧಿಕಾರಿಗಳು ಪದಗ್ರಹಣ ಸಮಾರಂಭ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರಿಂದ ಉದ್ಘಾಟನೆ..

ರಾಮದುರ್ಗ ನಗರದ ಶ್ರೀ ವಿಶ್ವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾದ ರಾಮದುರ್ಗ ಮಂಡಲದ ನೂತನ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರು ಭಾಗವಹಿಸಿ ಪದ ಗ್ರಹಣ ಸಮಾರಂಭ ಉದ್ಘಾಟನೆ ನೆರವೇರಿಸಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಪಕ್ಷ ಸಂಘಟನೆಗೆ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸುವಂತೆ ಕಾರ್ಯಕರ್ತರಿಗೆ …

Read More »

ಬೆಳಗಾವಿ: ಬೆಡ್‌ರೂಮ್‌ನಲ್ಲಿ ಪತ್ನಿ, ಮಕ್ಕಳನ್ನು ಕೂಡಿ ಹಾಕಿ ಪತಿಯಿಂದ ಕ್ರೂರ ಹಿಂಸೆ; ಅಕ್ಕಪಡೆಯಿಂದ ಸಾಹಸಮಯ ರಕ್ಷಣೆ

ಬೆಳಗಾವಿ ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಜಾರಿಗೆ ಬಂದಿರುವ ‘ಅಕ್ಕಪಡೆ’ ಇಂದು ಅತ್ಯಂತ ಶ್ಲಾಘನೀಯ ಕಾರ್ಯಾಚರಣೆ ನಡೆಸಿದೆ. ನಗರದ ಟಿಳಕವಾಡಿ ಪ್ರದೇಶದಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮನೆಯ ಬೆಡ್‌ರೂಮ್‌ನಲ್ಲಿ ಕೂಡಿ ಹಾಕಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಅಕ್ಕಪಡೆ ಸಿಬ್ಬಂದಿಗಳು ಮಹಿಳೆಯನ್ನು ರಕ್ಷಿಸಿ ಸುರಕ್ಷಿತವಾಗಿ ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ಬೆಳಗಾವಿ: ನಗರದ ಟಿಳಕವಾಡಿ ಪ್ರದೇಶದಲ್ಲಿ ಗಂಡನ ಕ್ರೌರ್ಯಕ್ಕೆ ಬಲಿಯಾಗಿ ಮನೆಯೊಳಗೆ ಬಂಧಿಯಾಗಿದ್ದ ಮಹಿಳೆ ಮತ್ತು ಇಬ್ಬರು …

Read More »