Breaking News

ಜಿಲ್ಲೆ

ಸರ್ಕಾರಿ ಸಂಬಳ ಸಾಲ್ತಿಲ್ವಂತೆ: ಈ ಅಗ್ನಿಶಾಮಕ ಸಿಬ್ಬಂದಿಗೆ ತಿಂಗಳಿಗಿಷ್ಟು ಬೇಕೇ ಬೇಕಂತೆ!

ಬೆಳಗಾವಿ: ಜನರ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ, ಸರ್ಕಾರಿ ನೌಕರರೇ ದಂಧೆಗಿಳಿದ ಹಲವು ಪ್ರಕರಣಗಳು ನಡೆದಿವೆ. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.   ಹೌದು, ಆನಂದ್ ಎಂಬ ಅಗ್ನಿಶಾಮಕದಳ ಸಿಬ್ಬಂದಿ, ಸಿಸಿಬಿ ವಿಭಾಗದ ಎಸಿಪಿ ರಿನಾ ಸುವರ್ಣ ಹೆಸರು ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ತಿಂಗಳು ಗೌರವ ಮೊತ್ತದ ಸರ್ಕಾರಿ ಸಂಬಳ ಬರುತ್ತಿದ್ದರೂ, ಹಣದೆ …

Read More »

ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು …

Read More »

ಬಿಜೆಪಿ ಶಾಸಕರು ನಾಳೆ ಸಂಜೆಯೊಳಗೆ ಕಾಂಗ್ರೆಸ್‌ಗೆ ಸೇರುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಳ್ಳಾರಿ, ಸೆ.27 : ಮುಹೂರ್ತ ಫಿಕ್ಸ್ ಮಾಡಿಕೊಳ್ಳಿ, ಇಂದು ಅಥವಾ ನಾಳೆ ಸಂಜೆಯೊಳಗೆ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮುನಿಸಿಪಲ್ ಮೈದಾನವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲಿದ್ದಾರೆ ಎಂಬ ಶಾಸಕ ಸೋಮಶೇಖರ ರೆಡ್ಡಿ …

Read More »

ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಅರ್ಜಿ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ.     ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …

Read More »

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು ಬೇರೆಡೆ ಆಸೀನರಾಗುವಂತೆ ಸಲಹೆ ನೀಡುತ್ತಾರೆ. ಇದೀಗ ವೇದಿಕೆ ಮೇಲೆಯೇ ನಡೆದ ದಂಪತಿಗಳ ಕುರ್ಚಿ ಕಾದಾಟ ಸದ್ದು …

Read More »

ಯಾದಗಿರಿ ಮತ್ತು ಕಲಬುರಗಿಯ ಬಂಧಿತ ಪಿಎಫ್‌ಐ ನಾಯಕರನ್ನು ನ್ಯಾಯಾಂಗ ಬಂಧನ

ಯಾದಗಿರಿ/ಕಲಬುರಗಿ: ಯಾದಗಿರಿ ಮತ್ತು ಕಲಬುರಗಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಪಿಎಫ್ಐ ಮುಖಂಡರನ್ನು ನ್ಯಾಯಾಂಗ ವಶಕ್ಕೆ ನೀಡಲು ತಾಲೂಕು ದಂಡಾಧಿಕಾರಿ‌ಗಳು ಆದೇಶ ಹೋರಡಿಸಿದ್ದಾರೆ. ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ ಮಜರ್ ಹುಸೇನ್ , ಮಿಲ್ಲತ್ ನಗರದ ಇಸಾಮೊದ್ದಿನ್ ಇಬ್ಬರ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿ, ನಂತರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬಳಿಕ ಕಲಬುರಗಿ ತಾಲೂಕು ದಂಡಾಧಿಕಾರಿ ಪ್ರಕಾಶ ಕುದರಿ ಅವರ ಮುಂದೆ ಇಬ್ಬರನ್ನು …

Read More »

ಹೆಂಡತಿ ಹೊಟ್ಟೆಗೆ ಚೂರಿ ಹಾಕಿದ ಗಂಡ: ಭಯಗೊಂಡು ಆತ್ಮಹತ್ಯೆಗೆ ಶರಣು

ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ – ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

  ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …

Read More »

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ.   ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. …

Read More »

ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು. ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು. ಇದಕ್ಕೂ ಮುನ್ನ ಜಮಖಂಡಿಯಲ್ಲಿ‌ ನಡೆದ ಸಿದ್ದು ನ್ಯಾಮಗೌಡರ …

Read More »