Breaking News

ಜಿಲ್ಲೆ

ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವು

ಬೆಳಗಾವಿ : ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೇಟೆಬಸವಣ್ಣ ಓಣಿಯ ಸಿದ್ಧಾರೂಢ ಮಂಜುನಾಥ ಗಾಣಗಿ (8) ಮೃತ ಬಾಲಕ. ಇಂದು ಬೆಳಗಿನ ಜಾವ ಅಜ್ಜನ ಜೊತೆಗೆ ಈಜು ಕಲಿಯಲು ಸಿದ್ಧಾರೂಢ ಹೋಗಿದ್ದನು. ಈ ವೇಳೆ, ಬೆನ್ನಿಗೆ ಪ್ಲಾಸ್ಟಿಕ್‌ ಡಬ್ಬಿ ಕಟ್ಟಿಕೊಂಡು ಬಾಲಕ ನೀರಿಗೆ ಇಳಿದಿದ್ದನು. ಆದರೆ, ಬಾವಿಯಲ್ಲಿ ಈಜುವಾಗಲೇ ಡಬ್ಬಿ ಕಳಚಿದ್ದರಿಂದ …

Read More »

ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್‌ಐ ಮಾಡುತ್ತಿದ್ದವು: ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು. ಎಸ್ ಡಿಪಿಐ ಮತ್ತು ಪಿಎಫ್‌ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. …

Read More »

ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು: BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, ಅವರಿಗೆ ಮೆಚ್ಯೂರಿಟಿ ಇಲ್ಲ ಎಂದು ಕಿಡಿಕಾರಿದ್ದಾರೆ.   ಬಾಗಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ನಾವು 40% ಕಮಿಷನ್ ಆರೋಪ ಮಾಡಿದ ಮೇಲೆ ಬಿಜೆಪಿಯವರು ಈಗ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಹೋಗಿ ಎಷ್ಟು …

Read More »

7 ಜನ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ 110ರ ಅಡಿ ಪ್ರಕರಣ ದಾಖಲಾಗಿದ್ದು, ಹಿಂಡಲಗಾ ಜೈಲಿಗೆ

ಬೆಳಗಾವಿ: ನಗರದಲ್ಲಿ ಇಂದು ಬೆಳಗ್ಗೆ ವಶಕ್ಕೆ ಪಡೆಯಲಾದ 7 ಜನ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ 110ರ ಅಡಿ ಪ್ರಕರಣ ದಾಖಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಆಜಂ ನಗರದ ನಿವಾಸಿ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ, ಅಸಾದ್‌ಖಾನ್ ಸೊಸೈಟಿ ನಿವಾಸಿ ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಶಿವಾಜಿ ನಗರದ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಅಸಾದ್‌ಖಾನ್ ನಿವಾಸಿ ಬದ್ರುದ್ದೀನ್ ಪಟೇಲ್, ಅಮನ್ ನಗರ ನಿವಾಸಿ ಸಮೀವುಲ್ಲಾ …

Read More »

ಮಾತಿಗೆ ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ

ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀಗಳು ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. …

Read More »

ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ; ನವರಾತ್ರಿಯಲ್ಲೇ ಹಲವರಿಗೆ ಶುಭ ಯೋಗ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಒಂದು ಮೂಲದ ಪ್ರಕಾರ ಗುರುವಾರ ಇಲ್ಲವೇ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆ ಇದೆ. ‌ಇಲ್ಲವಾದರೆ ನವರಾತ್ರಿ ಬಳಿಕ‌ ಮುಹೂರ್ತ ಕೂಡಿ …

Read More »

ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ

ಸವದತ್ತಿ: ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ ಮನೆ ಮಾಡಿದೆ. ಮೊದಲ ದಿನವಾದ ಸೋಮವಾರದಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಹರಿದುಬಂದರು. ಘಟಸ್ಥಾಪನೆಯ ಮೂಲಕ ನವವೈಭವಕ್ಕೆ ವಿಧ್ಯುಕ್ತ ಚಾಲನೆಯೂ ದೊರೆಯಿತು.   ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ಅವಮಾಸ್ಯೆ ನಂತರದ ಮೊದಲ ದಿನ ಸೋಮವಾರ ಸಂಜೆ 4.30 ರಿಂದ 6.30 ಒಳಗಾಗಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮೂಲಕ ಘಟಸ್ಥಾಪನೆ ಜರುಗಿತು. …

Read More »

ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ 12 ವಾರ ಗಡುವು

ಬೆಂಗಳೂರು: ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021ರ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ …

Read More »

ನಾಡಹಬ್ಬ ಉತ್ಸವಕ್ಕೆ ಬೆಳಗಾವಿಯಲ್ಲಿ ಅದ್ಧೂರಿ ಚಾಲನೆ

ಬೆಳಗಾವಿಯಲ್ಲಿ 95ನೇ ನಾಡಹಬ್ಬ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದ್ದು. ಇಂದಿನಿಂದ ಐದು ದಿನಗಳ ಕಾಲ ವಿವಿಧ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಎಂ.ಎಸ್.ಮುಗಳಿ ವೇದಿಕೆಯಲ್ಲಿ ಹಮ್ಮಿಕೊಂಡಿರುವ 95ನೇ ನಾಡಹಬ್ಬ ಉತ್ಸವ ಕಾರ್ಯಕ್ರಮದ ಮೊದಲ ದಿನದ ಕಾರ್ಯಕ್ರಮಕ್ಕೆ ನಾಗನೂರು ರುದ್ರಾಕ್ಷಿ ಮಠದ ಪರಮಪೂಜ್ಯ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ನಂತರ ಧಾರವಾಡದ ಖ್ಯಾತ ಸಾಹಿತಿ ಡಾ.ಬಾಳಣ್ಣ ಶೀಗಿಹಳ್ಳಿ ಅವರು …

Read More »

ಟಿಕ್‍ಟಾಕ್, ಯೂಟೂಬ್ ಸ್ಟಾರ್ ರುಕ್ಮವ್ವ ಅಜ್ಜಿ ಇನ್ನಿಲ್ಲ

ತಮ್ಮ ಅಮೋಘ ಅಭಿನಯದ ಮೂಲಕ ಟಿಕ್‍ಟಾಕ್ ಮತ್ತು ಯೂಟೂಬ್ ಸ್ಟಾರ್ ಆಗಿ ಮನೆ ಮಾತಾಗಿದ್ದ ಬೈಲಹೊಂಗಲ ತಾಲೂಕಿನ ತಿರುಳ್ಗನ್ನಡನಾಡು ಒಕ್ಕುಂದ ಗ್ರಾಮದ ಅಜ್ಜಿ ರುಕ್ಮವ್ವ ಗೋವಿಂದಪ್ಪ ಲೋಕರಿ ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ. ಹೌದು ಟಿಕ್‍ಟಾಕ್‍ನಲ್ಲಿ ತಮ್ಮ ವಿಭಿನ್ನ ಕಾಮಿಡಿ ವಿಡಿಯೋ ಮೂಲಕ ಈ ರುಕ್ಮವ್ವ ಅಜ್ಜಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಅಲ್ಲದೇ ಹಲವು ವಾಹಿನಿಗಳ ಕಾಮಿಡಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಇಳಿ ವಯಸ್ಸಿಲ್ಲಿಯೂ ತಮ್ಮಲ್ಲಿನ ಕಲೆಯನ್ನು …

Read More »