Breaking News

ಜಿಲ್ಲೆ

ರಸ್ತೆ‌ ಪಕ್ಕ ನಿಲ್ಲಿಸಿದ್ದ ಬೈಕ್ ಕಳ್ಳತನ: ಸಿಸಿಟಿವಿ ದೃಶ್ಯ

ಬೆಳಗಾವಿ: ರಸ್ತೆ‌ ಪಕ್ಕ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ‌ಜಿಲ್ಲೆಯ ಬೈಲಹೊಂಗಲ ‌ಪಟ್ಟಣದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ಎದುರು ಬೈಕ್ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬೈಕ್​ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿ ಮಾಲೀಕ ವಿಜಯಕುಮಾರ ರಾಜಗೋಳಿ ಎಂಬುವರಿಗೆ ಸೇರಿದ್ದಾಗಿದೆ. ಬಜಾಜ್ ಕಂಪನಿಯ ಪ್ಲಾಟಿನಾ ಬೈಕ್ ಸೆ.17 ರಂದು ಸಂಜೆ …

Read More »

ಹಗರಣಗಳ ಸರಮಾಲೆಯ ಖ್ಯಾತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ‌, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ.   ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …

Read More »

ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಂಪುಟದಲ್ಲಿ (Legislative Assembly) ಪೌರ ಕಾರ್ಮಿಕರ (Civic Workers) ಕಾಯಂ ಮಾಡುವ ತೀರ್ಮಾನ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪೌರಕಾರ್ಮಿರ ದಿನಾಚರಣೆಯ ಪ್ರಯುಕ್ತ ಉಪಾಹಾರ ಸವಿದಿದ್ದಾರೆ. ರೇಸ್‌ಕೋರ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ್ದರು. ಬೆಳಿಗ್ಗೆ 9.30ಕ್ಕೆ ಸಿಎಂ ಸಹ ಪೌರ ಕಾರ್ಮಿಕರೊಂದಿಗೆ ಇಡ್ಲಿ, ವಡೆ, ಉಪ್ಪಿಟ್ಟು, ಕೇಸರಿಬಾತ್ ಉಪಹಾರ ಸವಿದಿದ್ದಾರೆ.  ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, …

Read More »

ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್​ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …

Read More »

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿ ಪೊಲೀಸ್​​ ವಶಕ್ಕೆ

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಯುವಕರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜಿಲ್ಲೆಯ ‌ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಹೋಂ ಗಾರ್ಡ್ ಶಾಂತೇಶ್ ಕೊರ್ತಿ ಎಂಬಾತ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ. ಹಣ ನೀಡುವುದಾಗಿ ಕರೆಸಿದ ಯುವಕರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀಕಾಂತ್​ ಎಂಬುವವರ ಬಳಿ ಹಣ ಪಡೆಯಲು ಶಾಂತೇಶ್ ಕೊರ್ತಿ ಬಂದಿದ್ದ. …

Read More »

ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ: ಕುಮಾರಸ್ವಾಮಿ

ಬೆಂಗಳೂರು: ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ ಅನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸುವಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಶಾಮೀಲಾಗಿದ್ದು, ಹಣಕಾಸಿನ ಅವ್ಯವಹಾರವೂ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದರು. ಇದೀಗ ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. …

Read More »

ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ: ಶಿವನಗೌಡ ಪಾಟೀಲ

ಬೆಳಗಾವಿ: ಕೃಷಿ ಕಾರ್ಮಿಕರ ಮಕ್ಕಳಿಗೆ ಇದು ಸಂತಸದ ಸುದ್ದಿ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ‘ಮುಖ್ಯಮಂತ್ರಿ ರೈತ ವಿದ್ಯಾವಿಧಿ’ ಯೋಜನೆ ವಿಸ್ತರಿಸಲಾಗಿದೆ. ‍ಹಿಂದೆ ತಂದೆ- ತಾಯಿ ಅಥವಾ ಅಜ್ಜ- ಅಜ್ಜಿ ಹೆಸರಿನಲ್ಲಿ ಹೊಲ ಇದ್ದವರು ಮಾತ್ರ ಅರ್ಹರಾಗಿದ್ದರು. ಪ್ರಸಕ್ತ (2022-23) ವರ್ಷದಿಂದ ಕೃಷಿ ಕಾರ್ಮಿಕರ ಮಕ್ಕಳೂ ಈ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು. ರಾಜು ಕಡಕೋಳ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ …

Read More »

P.D.O.ಗಳ ಮುಂಭಡ್ತಿಗೆ ಶೀಘ್ರ ಕ್ರಮ: C.M.

ಬೆಂಗಳೂರು: ರಾಜ್ಯದಲ್ಲಿ 12 ವರ್ಷಗಳಿಂದ ಪದೋನ್ನತಿ ಇಲ್ಲದೆ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳ ಮುಂಭಡ್ತಿಗೆ ಶೀಘ್ರ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಅವರ ಪ್ರಶ್ನೆಗೆ ಲಿಖೀತ ರೂಪದಲ್ಲಿ ಪ್ರತಿಕ್ರಿಯಿಸಿದ ಅವರು, ಪಿಡಿಒಗಳು ಸುಮಾರು 12 ವರ್ಷಗಳಿಂದ ಒಂದೇ ಹುದ್ದೆಯಲ್ಲಿರುವುದು ಸರಕಾರದ ಗಮನಕ್ಕೆ ಬಂದಿದೆ. ಅವರನ್ನು ಸಹಾಯಕ ನಿರ್ದೇಶಕ ಹುದ್ದೆಗೆ ಭಡ್ತಿಗೊಳಿಸಲು ಶೀಘ್ರ …

Read More »

ಚನ್ನಮ್ಮನ ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲ

ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲದೇ ಸಾರ್ವಜನಿಕರು ಮಳೆಗಾಲ-ಬೇಸಿಗೆಯಲ್ಲಿ ಪರದಾಡುವಂತಾಗಿದೆ. ಕಿತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ನಂದಿಹಳ್ಳಿ, ಕಲಭಾವಿ, ಶಿವನೂರು, ಮರಿಗೇರಿ, ಜಮಳೂರು, ಹೂಲಿಕಟ್ಟಿ, ಉಗರಕೋಡ, ತೇಗೂರು, ಖೋದಾನಪೂರ ಸಂಗೊಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳಿಂದ ಕೆಲಸಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಸ್‌ ಮುಖಾಂತರ ಆಗಮಿಸುತ್ತಾರೆ. ಅವರು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಹೋಗುವಾಗ ಅರಳಿಕಟ್ಟಿ ಸರ್ಕಲ್‌ನಲ್ಲಿ ಇರುವ ಬಸ್‌ ತಂಗುದಾಣ ಚಿಕ್ಕದಿರುವುದರಿಂದ ಬಹುತೇಕರಿಗೆ ನೆರಳಲ್ಲಿ ನಿಲ್ಲಲು-ಕುಳಿತುಕೊಳ್ಳಲು …

Read More »

ಉಮೇಶ ಕತ್ತಿ ಉತ್ತರಾಧಿಕಾರಿ ಯಾರು?

ಬೆಳಗಾವಿ: ಹಿರಿಯ ನಾಯಕ ಉಮೇಶ ಕತ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಯಾರು? ಬೆಳಗಾವಿ ಜಿಲ್ಲೆಯಲ್ಲಿ ಯಾರಿಗೆ ಈ ಅವಕಾಶ ದೊರೆಯಲಿದೆ? ಇಂತಹ ಹಲವಾರು ಪ್ರಶ್ನೆ ಮತ್ತು ಚರ್ಚೆಗಳು ಈಗ ನಡೆದಿವೆ. ಉಮೇಶ ಕತ್ತಿ ಸ್ಥಾನ ತುಂಬುವ ಕೆಲಸ ಅಂದುಕೊಂಡಷ್ಟು ಸರಳವಾಗಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಅದು ಒಂದು ರೀತಿಯಲ್ಲಿ ಜೇನುಗೂಡಿಗೆ ಕೈ ಹಾಕಿದಂತೆ. ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬ ಗೊಂದಲದಲ್ಲಿರುವ ಸರ್ಕಾರ ಮತ್ತು ಪಕ್ಷದ ವರಿಷ್ಠರು ಇದೇ ಕಾರಣಕ್ಕೆ …

Read More »